AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲವೇ ದಿನಗಳಲ್ಲಿ ಜಿಟಿ ದೇವೇಗೌಡ ಕಾಂಗ್ರೆಸ್ ಸೇರ್ಪಡೆ: ಸಚಿವ ಮಧು ಬಂಗಾರಪ್ಪ ಶಾಕಿಂಗ್ ಹೇಳಿಕೆ

ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಅವರು ವಿಧಾನಸಭೆ ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ಸೇರುತ್ತಾರೆ ಎಂದು ಭಾರೀ ಚರ್ಚೆಗಳು ನಡೆದಿದ್ದವು. ಆದರೆ, ಪಕ್ಷದ ವರಿಷ್ಠ ಹೆಚ್​ಡಿ ದೇವೇಗೌಡ ಅವರು ಜಿಟಿ ದೇವೇಗೌಡರ ಜೊತೆ ಮಾತುಕತೆ ನಡೆಸಿ ಪಕ್ಷದಲ್ಲೇ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಇದೀಗ ಮತ್ತೆ ಜಿಟಿ ದೇವೇಗೌಡ ಕಾಂಗ್ರೆಸ್ ಸೇರುತ್ತಾರೆ ಎಂದು ಹೇಳುವ ಮೂಲಕ ಸಚಿವ ಮಧು ಬಂಗಾರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.

ಕೆಲವೇ ದಿನಗಳಲ್ಲಿ ಜಿಟಿ ದೇವೇಗೌಡ ಕಾಂಗ್ರೆಸ್ ಸೇರ್ಪಡೆ: ಸಚಿವ ಮಧು ಬಂಗಾರಪ್ಪ ಶಾಕಿಂಗ್ ಹೇಳಿಕೆ
ಮಧು ಬಂಗಾರಪ್ಪ ಮತ್ತು ಜಿಟಿ ದೇವೇಗೌಡ
TV9 Web
| Updated By: Rakesh Nayak Manchi

Updated on: Nov 14, 2023 | 3:27 PM

Share

ಶಿವಮೊಗ್ಗ, ನ.14: ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿಟಿ ದೇವೇಗೌಡ (G.T.Devegowda) ಅವರು ವಿಧಾನಸಭೆ ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ಸೇರುತ್ತಾರೆ ಎಂದು ಭಾರೀ ಚರ್ಚೆಗಳು ನಡೆದಿದ್ದವು. ಆದರೆ, ಪಕ್ಷದ ವರಿಷ್ಠ ಹೆಚ್​ಡಿ ದೇವೇಗೌಡ (H.D.Deve Gowda) ಅವರು ಜಿಟಿ ದೇವೇಗೌಡರ ಜೊತೆ ಮಾತುಕತೆ ನಡೆಸಿ ಪಕ್ಷದಲ್ಲೇ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಇದೀಗ ಮತ್ತೆ ಜಿಟಿ ದೇವೇಗೌಡ ಕಾಂಗ್ರೆಸ್ ಸೇರುತ್ತಾರೆ ಎಂದು ಹೇಳುವ ಮೂಲಕ ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಹೊಸ ಬಾಂಬ್ ಸಿಡಿಸಿದ್ದಾರೆ.

ಈ ಬಗ್ಗೆ ಶಿವಮೊಗ್ಗದಲ್ಲಿ ನಡೆದ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಮಧು ಬಂಗಾರಪ್ಪ, ಈಗಾಗಲೇ ಕೆಲವರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕೆಲವೇ ದಿನಗಳಲ್ಲಿ ಜಿ.ಟಿ.ದೇವೇಗೌಡ ಕಾಂಗ್ರೆಸ್ ಪಕ್ಷ ಸೇರುತ್ತಾರೆ. ಅವರು ನಮಗೆ ಬಹಳ ಹಳಬರು, ಸ್ವಲ್ಪ ದಿನ ದೂರವಾಗಿದ್ದರು. ಈಗ ಮತ್ತೆ ಪಕ್ಷಕ್ಕೆ ಹತ್ತಿರವಾಗಲಿದ್ದಾರೆ. ನಮ್ಮ ಹತ್ತಿರವೇ ಇರುವ ಹಾಗೆ ನೋಡಿಕೊಳ್ಳುತ್ತಿದ್ದೇವೆ. ಶಾಸಕ ಚನ್ನಬಸಪ್ಪ ಕೂಡ ಈಗಾಗಲೇ ನಮ್ಮ ಹತ್ತಿರದಲ್ಲಿದ್ದಾರೆ ಎಂದು

ಇದನ್ನೂ ಓದಿ: ಮೈಸೂರಿನಲ್ಲಿ ಮತ್ತೊಮ್ಮೆ ಸಿದ್ದರಾಮಯ್ಯ ವರ್ಸಸ್ ಜಿಟಿ ದೇವೇಗೌಡ ಫೈಟ್!

ಇತ್ತೀಚೆಗಷ್ಟೇ ಹಾಸನದಲ್ಲಿರುವ ಹಾಸನಾಂಬೆ ದೇವಾಲಯಕ್ಕೆ ಭೇಟಿ ನೀಡಿದ್ದ ಜಿಟಿ ದೇವೇಗೌಡ ಮತ್ತಿತರರು ಪಕ್ಷ ಬಿಡಲ್ಲ ಎಂಬ ಆಣೆ ಪ್ರಮಾಣ ಮಾಡಿದ್ದಾರೆ ಎನ್ನಲಾಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿದ್ದ ಜಿಟಿ ದೇವೇಗೌಡ, ಹಾಸನಾಂಬೆ ಎದುರು ನಾವು ಪಕ್ಷ ಬಿಡುವುದಿಲ್ಲ ಎಂದು ಆಣೆ ಪ್ರಮಾಣ ಮಾಡಿಲ್ಲ. ಪಕ್ಷ ಕಟ್ಟುವ ಬಗ್ಗೆ ಪ್ರತಿಜ್ಞೆ ಮಾಡಿದ್ದೇವೆ ಎಂದಿದ್ದರು.

ಜೆಡಿಎಸ್ ಮಾಜಿ ಶಾಸಕರಾದ ಡಿಸಿ ಗೌರಿಶಂಕರ್ ಹಾಗೂ ಮಂಜುನಾಥ್ ಅವರು ಕಾಂಗ್ರೆಸ್ ಸೇರ್ಪಡೆಯಾಗುವುದು ಖಚಿತವಾಗಿದೆ. ನಾಳೆ ಅಧಿಕೃತವಾಗಿ ಪಕ್ಷ ಸೇರಲಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಹೆಚ್​ಡಿ ಕುಮಾರಸ್ವಾಮಿ, ಇದು ಹಳೆಯ ವಿಚಾರ, ಇದರಿಂದ ನನಗನೂ ಶಾಕ್​ ಆಗಲ್ಲ. ಗೌರಿಶಂಕರ್​, ಮಂಜುನಾಥ್ ಕರೆದು ಎರಡು ಬಾರಿ ಮಾತನಾಡಿದ್ದೇನೆ ಅವರಿಗೆ ಅನುಕೂಲ ಆಗುವ ಕಡೆ ಹೋಗಿದ್ದಾರೆ. ನಮಗೆ ಯಾವುದೇ ತೊಂದರೆ ಆಗಲ್ಲ, ಕಾರ್ಯಕರ್ತರಿದ್ದಾರೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
2 ದಿನಗಳ ಘಾನಾ ಭೇಟಿ ಮುಗಿಸಿ ಟ್ರಿನಿಡಾಡ್ ಮತ್ತು ಟೊಬೆಗೊಗೆ ತೆರಳಿದ ಮೋದಿ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ