ಕಾಂಗ್ರೆಸ್​ ಸರ್ಕಾರಕ್ಕೆ ಗ್ಯಾರಂಟಿ ಹೊರೆ: ಬೊಕ್ಕಸಕ್ಕೆ 12 ಸಾವಿರ ಕೋಟಿ ರೂ. ಕೊರತೆ

ಕರ್ನಾಟಕ ಸರ್ಕಾರದ ಬೊಕ್ಕಸಕ್ಕೆ 12 ಸಾವಿರ ಕೋಟಿ ರೂ. ಕಡಿಮೆ ಆದಾಯ ಸಂಗ್ರಹವಾಗಿದೆ ಎಂದು ವರದಿಯಾಗಿದೆ. ರಾಜಸ್ವ ಹೆಚ್ಚಿಸಲು ಕ್ರಮ ಕೈಗೊಳ್ಳಿ ಮತ್ತು ವೇಗ ನೀಡಿ ಎಂದು ಹಣಕಾಸು ಇಲಾಖೆಯೊಂದಿಗೆ ಇತ್ತೀಚೆಗೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕಾಂಗ್ರೆಸ್​ ಸರ್ಕಾರಕ್ಕೆ ಗ್ಯಾರಂಟಿ ಹೊರೆ: ಬೊಕ್ಕಸಕ್ಕೆ 12 ಸಾವಿರ ಕೋಟಿ ರೂ. ಕೊರತೆ
ಸಿಎಂ ಸಿದ್ದರಾಮಯ್ಯ
Follow us
ವಿವೇಕ ಬಿರಾದಾರ
|

Updated on:Oct 31, 2024 | 2:15 PM

ಬೆಂಗಳೂರು, ಅಕ್ಟೋಬರ್​ 31: ಕರ್ನಾಟಕ ಸರ್ಕಾರ (Karnataka Government) ಹಣಕಾಸು ಸಂಕಷ್ಟಕ್ಕೆ ಸಿಲುಕಿದ್ದು, ಆದಾಯ ಸಂಗ್ರಹದಲ್ಲಿ 12 ಸಾವಿರ ಕೋಟಿ ರೂ. ಕೊರತೆ ಇದೆ ಎಂದು ವರದಿಯಾಗಿದೆ. ಗ್ಯಾರಂಟಿ ಮತ್ತು ಸಬ್ಸಿಡಿಗಳಿಗೆ ಸರ್ಕಾರ 90 ಸಾವಿರ ಕೋಟಿ ರೂ. ವ್ಯಯಿಸುತ್ತಿದೆ. ಬೊಕ್ಕಸದಲ್ಲಿ ಹಣದ ಕೊರತೆ ಉಂಟಾಗಿರುವುದರಿಂದ ಅಭಿವೃದ್ಧಿ ಕಾರ್ಯಗಳಿಗಾಗಿ ಸರ್ಕಾರ ಸಾಲ ತರಲು ಚಿಂತಿಸುತ್ತಿದೆ.

ಸರ್ಕರಿ ಹಿರಿಯ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, 2024-25ರ ಆರ್ಥಿಕ ವರ್ಷದ ಮೂರನೇ ತ್ರೈಮಾಸಿಕದ ಆರಂಭದಲ್ಲಿ 12,000 ಕೋಟಿ ರೂಪಾಯಿ ಕಡಿಮೆ ಹಣ ಸಂಗ್ರಹವಾಗಿದೆ ಎಂದು ತಿಳಿಸಿದ್ದಾರೆ. ರಾಜಸ್ವ ಹೆಚ್ಚಿಸಲು ಕ್ರಮ ಕೈಗೊಳ್ಳಿ ಮತ್ತು ವೇಗ ನೀಡಿ ಎಂದು ಹಣಕಾಸು ಇಲಾಖೆಯೊಂದಿಗೆ ಇತ್ತೀಚೆಗೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಮಾತನಾಡಿ, ಸಬ್ಸಿಡಿಗಳು ಮತ್ತು ಗ್ಯಾರಂಟಿ ಯೋಜನೆಗಳಿಂದ ಸರ್ಕಾರಕ್ಕೆ ಹೆಚ್ಚಿನ ಹೊರೆಯಾಗುತ್ತಿದೆ ಎಂದರು.

ಇದನ್ನೂ ಓದಿ: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಶಕ್ತಿ ಯೋಜನೆ ಸ್ಥಗಿತ? ಡಿಕೆ ಶಿವಕುಮಾರ್​ ಸುಳಿವು

ಅನ್ನಭಾಗ್ಯ ಯೋಜನೆಯಡಿಯಲ್ಲಿಯೇ ಕರ್ನಾಟಕದಲ್ಲಿ ಪ್ರತಿ 1,000 ಜನರಲ್ಲಿ 853 ಜನರು ಯೋಜನೆಯ ಲಾಭವನ್ನು ಪಡೆಯುತ್ತಿದ್ದಾರೆ ಎಂದು ಅಂದಾಜಿಸಲಾಗಿದೆ. 6.5 ಕೋಟಿ ಜನಸಂಖ್ಯೆಯಲ್ಲಿ 4.47 ಕೋಟಿ ಜನರು ಬಿಪಿಎಲ್ ಕಾರ್ಡ್ ಹೊಂದಿದ್ದು, ಇದು ಅತ್ಯಂತ ಗಂಭೀರ ಸಮಸ್ಯೆಯಾಗಿದ್ದು ಮರುಪರಿಶೀಲಿಸುವ ಅಗತ್ಯವಿದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ಹೇಳಿದರು.

ಗೃಹಲಕ್ಷ್ಮಿ ಪ್ರಯೋಜನಗಳನ್ನು ಪಡೆಯಲು ಅವಿಭಜಿತ ಕುಟುಂಬಗಳು ವಿಭಜನೆಯಾಗುತ್ತಿವೆ. ವಿಭಜನೆಯಾದ ಕುಟುಂಬದ ಮಹಿಳೆಯರು ನಮ್ಮದು ಪ್ರತ್ಯೇಕ ಕುಟುಂಬ ಅಂತ ಹೇಳಿ ಎರಡು ಸಾವಿರ ರೂ. ಪಡೆಯುತ್ತಿದ್ದಾರೆ. ಇದು ಹೀಗೆ ಮುಂದುವರೆದರೆ ಸರ್ಕಾರದ ಬೊಕ್ಕಸಕ್ಕೆ ಹೊಡೆತ ಬೀಳಲಿದೆ. ಹೀಗಾಗಿ ಸರ್ಕಾರವು ಗ್ಯಾರಂಟಿ ಯೋಜನೆ ಮರುಪರಿಶೀಲಿಸಬೇಕು ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:27 am, Thu, 31 October 24

‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಸಿಡ್ನಿ ಟೆಸ್ಟ್ ಆಡುತ್ತಿಲ್ಲ ರೋಹಿತ್ ಶರ್ಮಾ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ