2023ರ ಚುನಾವಣೆಯಲ್ಲೂ ನಮ್ಮ ಪಕ್ಷ ಅಧಿಕಾರಕ್ಕೆ ಬರದು: ಜೆಡಿಎಸ್ ಶಾಸಕ ಎಸ್.ಆರ್. ಶ್ರೀನಿವಾಸ್

ನಮ್ಮ ಜೆಡಿಎಸ್​ ಪಕ್ಷ 120 ಸ್ಥಾನಗಳನ್ನು ಗೆಲ್ಲುವುದಿಲ್ಲ. ನಮ್ಮ ಪಕ್ಷದ ನಾಯಕರು ಮುಖ್ಯಮಂತ್ರಿಯೂ ಆಗಲ್ಲ. ಕಾಂಗ್ರೆಸ್ ಪಕ್ಷ ಮುಂದಿನ ಚುನಾವಣೆಯಲ್ಲಿ 120 ಸ್ಥಾನಗಳನ್ನು ಗೆದ್ದಾಗ ಮಾತ್ರ ಸಿಎಂ ಕುಸ್ತಿ ಬಗ್ಗೆ ಚಿಂತನೆ ಮಾಡಬೇಕು: ಜೆಡಿಎಸ್ ಶಾಸಕ ಎಸ್.ಆರ್. ಶ್ರೀನಿವಾಸ್

2023ರ ಚುನಾವಣೆಯಲ್ಲೂ ನಮ್ಮ ಪಕ್ಷ ಅಧಿಕಾರಕ್ಕೆ ಬರದು: ಜೆಡಿಎಸ್ ಶಾಸಕ ಎಸ್.ಆರ್. ಶ್ರೀನಿವಾಸ್
ಎಸ್ ಆರ್ ಶ್ರೀನಿವಾಸ್
Follow us
TV9 Web
| Updated By: guruganesh bhat

Updated on: Jun 26, 2021 | 7:48 PM

ತುಮಕೂರು: 2023ರ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ಎಂ.ಹೆಚ್.ಪಟ್ಟಣದಲ್ಲಿ ಗುಬ್ಬಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್. ಶ್ರೀನಿವಾಸ್ ಪ್ರತಿಪಾದಿಸಿದ್ದಾರೆ. ರಾಜ್ಯದಲ್ಲಿ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಕುರಿತು ನಡೆಯುತ್ತಿರುವ ಸಂವಾದ-ಚರ್ಚೆ ಮತ್ತು ವಾಗ್ಯುದ್ದದ ಕುರಿತು ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ. ಸ್ವಂತ ಪಕ್ಷವೇ ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ಬರುವುದಿಲ್ಲ ಎಂಬುದು  ಅವರ ಅಭಿಪ್ರಾಯವನ್ನು ಹೊರಹಾಕಿದ್ದಾರೆ. 

ನಮ್ಮ ಜೆಡಿಎಸ್​ ಪಕ್ಷ 120 ಸ್ಥಾನಗಳನ್ನು ಗೆಲ್ಲುವುದಿಲ್ಲ. ನಮ್ಮ ಪಕ್ಷದ ನಾಯಕರು ಮುಖ್ಯಮಂತ್ರಿಯೂ ಆಗಲ್ಲ. ಕಾಂಗ್ರೆಸ್ ಪಕ್ಷ ಮುಂದಿನ ಚುನಾವಣೆಯಲ್ಲಿ 120 ಸ್ಥಾನಗಳನ್ನು ಗೆದ್ದಾಗ ಮಾತ್ರ ಸಿಎಂ ಕುಸ್ತಿ ಬಗ್ಗೆ ಚಿಂತನೆ ಮಾಡಬೇಕು. ಅದನ್ನ ಬಿಟ್ಟು ಪ್ರಚಾರಕ್ಕೆ ಮಾತನಾಡುವುದು ಸರಿಯಲ್ಲ. ಇನ್ನು ನಮ್ಮ ಪಕ್ಷದ ಕುರಿತು ಮಾತನಾಡುವುದೇ ಬೇಕಿಲ್ಲ ಎಂದು ಎಂ.ಹೆಚ್.ಪಟ್ಟಣದಲ್ಲಿ ಶಾಸಕ ಎಸ್. ಆರ್. ಶ್ರೀನಿವಾಸ್ ವ್ಯಾಖ್ಯಾನಿಸಿದ್ದಾರೆ.

ಭವಿಷ್ಯದ ಸಿಎಂ ಚರ್ಚೆ ಬಿಡಿ, ಬಿಜೆಪಿ ವಿರುದ್ಧ ಹೋರಾಡಿ: ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಸೂಚನೆ ಸ್ಥಳೀಯ ಸಂಸ್ಥೆ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವಂತೆ ಕಾಂಗ್ರೆಸ್ ವರಿಷ್ಠ ರಾಹುಲ್‌ ಗಾಂಧಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ಗೆ ಸೂಚನೆ ನೀಡಿದ್ದಾರೆ. ದೆಹಲಿಯನ್ನು ತಮ್ಮನ್ನು ಭೇಟಿ ಮಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ಗೆ ಕೆಲವು ಸೂಚನೆಗಳನ್ನು ನೀಡಿರುವ ರಾಹುಲ್ ಗಾಂಧಿ, ‘ಭವಿಷ್ಯದ ಸಿಎಂ’ ಚರ್ಚೆ ಬಿಟ್ಟು ಬಿಜೆಪಿ ವಿರುದ್ಧ ಹೋರಾಡಿ, ಬಿಜೆಪಿ ಸರ್ಕಾರದ ಬಿಕ್ಕಟ್ಟನ್ನು ಸಮರ್ಥವಾಗಿ ಬಳಸಿಕೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.

ಪ್ರಸ್ತುತ ರಾಜಕೀಯ ಸ್ಥಿತಿಗತಿಯಲ್ಲಿ ಜನರಲ್ಲಿ ಕಾಂಗ್ರೆಸ್ ಬಗ್ಗೆ ಮತ್ತಷ್ಟು ಭರವಸೆ ಮೂಡಿಸಬೇಕಾಗಿದೆ. ಬಿಜೆಪಿ ವಿರುದ್ಧ ಸಮರ್ಥವಾಗಿ ಹೋರಾಡಬೇಕಾಗಿದೆ. ಮುಂದೆ ಕರ್ನಾಟಕದಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆಗಳಿಗೆ ಈಗಿನಿಂದಲೇ ಪಕ್ಷವನ್ನು ಸಜ್ಜುಗೊಳಿಸಬೇಕಿದೆ. ಈ ಹಾದಿಯಲ್ಲಿ ಮುಂದುವರೆಯಿರಿ ಎಂದು ರಾಹುಲ್ ಗಾಂಧಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ಗೆ ಸೂಚನೆ ನೀಡಿದ್ದಾರೆ.

ಕಾಂಗ್ರೆಸ್ ವರಿಷ್ಠರೂ ಆಗಿರುವ ಸಂಸದ ರಾಹುಲ್ ಗಾಂಧಿ ಭೇಟಿಯ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೊರೊನಾ ಸಂಕಷ್ಟದಲ್ಲಿ ಜನರಿಗೆ ನೆರವು ನೀಡಿದ್ದೇವೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ನಾಯಕರು ಜನರ ನೆರವಿಗೆ ಧಾವಿಸಿದ್ದಾರೆ. ಇಂಧನ ಬೆಲೆ ಏರಿಕೆ ಬಗ್ಗೆ ವಾರಗಳ ಕಾಲ ಪ್ರತಿಭಟನೆ ನಡೆಸಿದ್ದೇವೆ ಎಂದು ರಾಜ್ಯ ಕಾಂಗ್ರೆಸ್‌ ಮಾಡಿರುವ ಕೆಲಸಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಸುದ್ದಿ ವಿಶ್ಲೇಷಣೆ: ಬಿಜೆಪಿಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಇಲ್ಲ, ಕಾಂಗ್ರೆಸ್​ನಲ್ಲಿ ಈಗಲೇ ಹಲವಾರು ಮುಖ್ಯಮಂತ್ರಿಗಳು!

BC Patil On CM Fight : ಸಿದ್ದರಾಮಯ್ಯ, ಡಿಕೆಶಿ ಇಬ್ಬರೇ ಸಿಎಂ ರೇಸನಲ್ಲಿ ಇಲ್ಲ ಪರಮೇಶ್ವರ್ ದಲಿತ ಕೋಟಾ ಇದೆ

(Gubbi MLA SR Srinivas says JDS did not come to power in 2023 Karnataka Election also)