ಗುಲ್ಬರ್ಗ ವಿಶ್ವವಿದ್ಯಾಲಯದಿಂದ ಮಂತ್ರಾಲಯ ಶ್ರೀಗಳಿಗೆ ಗೌರವ ಡಾಕ್ಟರೇಟ್

| Updated By: ಆಯೇಷಾ ಬಾನು

Updated on: Dec 19, 2020 | 9:05 AM

ಇಂದು ಸಂಜೆ 5 ಕ್ಕೆ ವಿಶ್ವವಿದ್ಯಾಲಯ ಅಧಿಕಾರಿಗಳಿಂದ ಗೌರವ ಡಾಕ್ಟರೇಟ್ ಪ್ರದಾನ ಕಾರ್ಯಕ್ರಮ ನಡೆಯಲಿದ್ದು, ಮಂತ್ರಾಲಯದ ಸಭಾಮಂಟಪದಲ್ಲಿ ಕಾರ್ಯಕ್ರಮಕ್ಕೆ ಸಿದ್ದತೆ ನಡೆಯುತ್ತಿದೆ.

ಗುಲ್ಬರ್ಗ ವಿಶ್ವವಿದ್ಯಾಲಯದಿಂದ ಮಂತ್ರಾಲಯ ಶ್ರೀಗಳಿಗೆ ಗೌರವ ಡಾಕ್ಟರೇಟ್
ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ, ಗುಲ್ಬರ್ಗ ವಿಶ್ವವಿದ್ಯಾಲಯ
Follow us on

ರಾಯಚೂರು: ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರಿಗೆ ಇಂದು (ಡಿಸೆಂಬರ್ 19) ಗುಲ್ಬರ್ಗ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ನೀಡಲು ತಯಾರಿ ನಡೆದಿದೆ.

ಇಂದು ಸಂಜೆ 5 ಕ್ಕೆ ವಿಶ್ವವಿದ್ಯಾಲಯ ಅಧಿಕಾರಿಗಳಿಂದ ಗೌರವ ಡಾಕ್ಟರೇಟ್ ಪ್ರದಾನ ಕಾರ್ಯಕ್ರಮ ನಡೆಯಲಿದ್ದು, ಮಂತ್ರಾಲಯದ ಸಭಾಮಂಟಪದಲ್ಲಿ ಕಾರ್ಯಕ್ರಮಕ್ಕೆ ಸಿದ್ದತೆ ನಡೆಯುತ್ತಿದೆ.

ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಕ್ಕೆ ಸ್ವಾಮೀಜಿ ನೀಡಿರುವ ಸೇವೆ ಅಪಾರ. ಅಲ್ಲದೇ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಇವರು ಆರ್ಥಿಕ ನೆರವು ನೀಡಿದ್ದಾರೆ. ಜೊತೆಗೆ ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸಹಾಯ ಹಸ್ತ ಚಾಚಿದ್ದರು. ಶ್ರೀಗಳು ಸಮಾಜಕ್ಕೆ ನೀಡಿರುವ ಕೊಡುಗೆಗಳನ್ನು ಗಮನಿಸಿ ಡಾಕ್ಟರೇಟ್ ನೀಡಲು ಗುಲ್ಬರ್ಗ ವಿಶ್ವವಿದ್ಯಾಲಯ ನಿರ್ಧರಿಸಿತ್ತು. ಅದರಂತೆ ಇಂದು ಗೌರವ ಡಾಕ್ಟರೇಟ್ ಪ್ರದಾನ ಕಾರ್ಯಕ್ರಮ ನಡೆಯುತ್ತಿದೆ.

ಕರ್ನಾಟಕ ಬಗ್ಗೆ ಮಹಾಪ್ರಬಂಧ ಮಂಡಿಸಿ ಮೈಸೂರು ವಿವಿ ಡಾಕ್ಟರೇಟ್ ಪಡೆದ ಮುಖ್ಯ ಚುನಾವಣಾಧಿಕಾರಿ