AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CBI Probe: ಗುರುರಾಘವೇಂದ್ರ ಬ್ಯಾಂಕ್ ಹಗರಣದ ತನಿಖೆ ಸಿಬಿಐಗೆ ರವಾನೆ: ಪರಿಷತ್​ನಲ್ಲಿ ಸಹಕಾರ ಸಚಿವರ ಹೇಳಿಕೆ

ST Somashekhar In Vidhana Parishat- ಶ್ರೀ ಗುರುರಾಘವೇಂದ್ರ ಕೋಆಪರೇಟಿವ್ ಬ್ಯಾಂಕ್​ನ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲಾಗುವುದು ಎಂದು ವಿಧಾನಪರಿಷತ್​ನಲ್ಲಿ ಸಹಕಾರ ಸಚಿವ ಎಸ್​ಟಿ ಸೋಮಶೇಖರ್ ತಿಳಿಸಿದ್ದಾರೆ.

CBI Probe: ಗುರುರಾಘವೇಂದ್ರ ಬ್ಯಾಂಕ್ ಹಗರಣದ ತನಿಖೆ ಸಿಬಿಐಗೆ ರವಾನೆ: ಪರಿಷತ್​ನಲ್ಲಿ ಸಹಕಾರ ಸಚಿವರ ಹೇಳಿಕೆ
ಗುರುರಾಘವೇಂದ್ರ ಸಹಕಾರ ಬ್ಯಾಂಕ್‌
TV9 Web
| Edited By: |

Updated on:Feb 15, 2023 | 11:40 AM

Share

ಬೆಂಗಳೂರು: ಸಾವಿರಾರು ಕೋಟಿ ರೂ ಅಕ್ರಮ, ವಂಚನೆ ಎಸಗಿದ ಆರೋಪ ಎದುರಿಸುತ್ತಿರುವ ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಸಂಸ್ಥೆ (SGRSBN- Sri Guru Raghavendra Sahakari Bank Niyamita) ಹಗರಣದ ತನಿಖೆಯನ್ನು ಸಿಬಿಐಗೆ (CBI Probe) ಹಸ್ತಾಂತರಿಸಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ (Minister ST Somashekhar) ಪುನರುಚ್ಚರಿಸಿದ್ದಾರೆ. ವಿಧಾನಪರಿಷತ್​ನಲ್ಲಿ ಕಾಂಗ್ರೆಸ್ ಸದಸ್ಯ ಯುಬಿ ವೆಂಕಟೇಶ್ ಅವರ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಿದ್ದ ಸಹಕಾರ ಸಚಿವರು, ಈ ಬ್ಯಾಂಕ್ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವ ನಿಟ್ಟಿನಲ್ಲಿ ಎಲ್ಲಾ ಸಿದ್ಧತೆ ನಡೆದಿದೆ. ಶೀಘ್ರದಲ್ಲೇ ಗೃಹ ಸಚಿವಾಲಯ ಸೂಕ್ತ ನಿರ್ಧಾರ ಕೈಗೊಳ್ಳುತ್ತದೆ ಎಂದು ಹೇಳಿದ್ದಾರೆ.

ಶ್ರಿ ಗುರುರಾಘವೇಂದ್ರ ಸಹಕಾರ ಬ್ಯಾಂಕ್ ನಿಯಮಿತ ಸಂಸ್ಥೆಯಿಂದ 1290 ಕೋಟಿ ರೂ ಅಕ್ರಮ ನಡೆದಿರುವುದು ಇಲ್ಲಿಯವರೆಗೆ ಸಹಕಾರ ಇಲಾಖೆ ಮತ್ತು ಜಾರಿ ನಿರ್ದೇಶನಾಲಯ ಮಾಡಿರುವ ತನಿಖೆಯಿಂದ ಗೊತ್ತಾಗಿದೆ ಎಂಬ ವಿಚಾರವನ್ನು ಸಚಿವ ಎಸ್ ಟಿ ಸೋಮಶೇಖರ್ ವಿಧಾನಪರಿಷತ್​ಗೆ ತಿಳಿಸಿದ್ದಾರೆ.

ಬ್ಯಾಂಕ್​ನಿಂದ ಸಾಲ ಪಡೆದವ ಅಡಮಾನವಾಗಿ ಇಟ್ಟಿರುವ ದಾಖಲೆ ಬೇರೆಯವರಿಗೆ ಸೇರಿದ್ದರಿಂದ ಸಾಲ ಪಡೆದವನ ದಾಖಲೆಯನ್ನು ಜಪ್ತಿ ಮಾಡಲು ಆಗುವುದಿಲ್ಲ ಎಂದು ಇದೇ ವೇಳೆ ಕಾಂಗ್ರೆಸ್ ಶಾಸಕ ಯುಬಿ ವೆಂಕಟೇಶ್ ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: How To: ಮೊಬೈಲ್ ಕಳೆದುಹೋಗಿದೆಯೇ? ತಪ್ಪದೇ ಈ ಕೆಲಸ ಮಾಡಿ; ವಿಡಿಯೋ ಶೇರ್ ಮಾಡಿದ ಡಿಜಿಪಿ

ಈ ಹಗರಣವನ್ನು ಸಿಬಿಐಗೆ ವಹಿಸಬೇಕೆಂದು ಬಹಳ ದಿನಗಳಿಂದಲೂ ಕೂಗು ಇದೆ. ಆದರೆ, ಇಡಿ ಮತ್ತು ಸಿಐಡಿಯಿಂದ ತನಿಖೆ ನಡೆಯುತ್ತಿದೆ. ಸಿಬಿಐಗೆ ತನಿಖೆಯನ್ನು ವಹಿಸಲಾಗುವುದು ಎಂದು ಸರ್ಕಾರ ಕೆಲ ತಿಂಗಳ ಹಿಂದೆಯೇ ಹೇಳಿತ್ತಾದರೂ ವಿಳಂಬಗೊಳ್ಳುತ್ತಾ ಬಂದಿದೆ. ಈ ಬಗ್ಗೆ ಸ್ಪಷ್ಟನೆ ಪರಿಷತ್​ನಲ್ಲಿ ಸ್ಪಷ್ಟನೆ ನೀಡಿದ ಎಸ್.ಟಿ. ಸೋಮಶೇಖರ್, ಸಿಐಡಿ ತನಿಖೆ ನಡೆಸುತ್ತಿದ್ದರಿಂದ ಸಿಬಿಐಗೆ ಹಸ್ತಾಂತರಿಸುವುದು ವಿಳಂಬವಾಯಿತು ಎಂದಿದ್ದಾರೆ.

ಗುರುರಾಘವೇಂದ್ರ ಸಹಕಾರ ಬ್ಯಾಂಕ್ ಜೊತೆಗೆ ವಸಿಷ್ಠ ಸಹಕಾರ ಸೊಸೈಟಿ, ಗುರುರಾಘವೇಂದ್ರ ಸೌಹಾರ್ದ ಸೊಸೈಟಿಯ ಹಗರಣಗಳನ್ನೂ ಸಿಬಿಐ ತನಿಖೆಗೆ ವಹಿಸುವ ಸಾಧ್ಯತೆ ಇದೆ. ಇಲ್ಲ್ಲೆಲ್ಲಾ ಸಾವಿರಾರು ಕೋಟಿ ರೂ ಮೊತ್ತದಷ್ಟು ಅಕ್ರಮಗಳಾಗಿರುವ ಆರೋಪ ಇದೆ.

ಒಂದು ವರ್ಷದ ಹಿಂದೆ ಗುರುರಾಘವೇಂದ್ರ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಕೆ ರಾಮಕೃಷ್ಣ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದರು.

Published On - 11:40 am, Wed, 15 February 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್