ದೇವರು ವರ ಕೊಟ್ರು ಪೂಜಾರಿ ಕೊಡಲಿಲ್ಲ: 108 ಸಿಬ್ಬಂದಿಗಿಲ್ಲ ದಸರಾ ಸಂಭ್ರಮ

ದೇವರು ವರ ಕೊಟ್ಟರು ಪೂಜಾರಿ ವರ ಕೊಡಲಿಲ್ಲ ಎಂಬಂತಾಗಿದೆ 108 ಆರೋಗ್ಯ ಕವಚ ಸಿಬ್ಬಂದಿಗಳ ಪಾಡು.

ದೇವರು ವರ ಕೊಟ್ರು ಪೂಜಾರಿ ಕೊಡಲಿಲ್ಲ: 108 ಸಿಬ್ಬಂದಿಗಿಲ್ಲ ದಸರಾ ಸಂಭ್ರಮ
108 Ambulance
Follow us
TV9 Web
| Updated By: ವಿವೇಕ ಬಿರಾದಾರ

Updated on:Oct 04, 2022 | 3:43 PM

ಬೆಂಗಳೂರು: ದೇವರು ವರ ಕೊಟ್ಟರು ಪೂಜಾರಿ ವರ ಕೊಡಲಿಲ್ಲ ಎಂಬಂತಾಗಿದೆ 108 ಆರೋಗ್ಯ ಕವಚ ಸಿಬ್ಬಂದಿಗಳ ಪಾಡು. ಸಿಬ್ಬಂದಿಗಳಿಗೆ ವೇತನ ನೀಡಲು ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ಆದರೆ  ಜೆವಿಕೆ (GVK) ಕಂಪನಿಯವರು 108 ಆರೋಗ್ಯ ಕವಚ (108 Health works) ಸಿಬ್ಬಂದಿಗಳಿಗೆ ಕಳೆದ ಎರಡು ತಿಂಗಳಿನಿಂದ ವೇತನ ನೀಡಿಲ್ಲ. ಇದರಿಂದ 108 ಆರೋಗ್ಯ ಕವಚ ಸಿಬ್ಬಂದಿಗಳು ದಸರಾ ಹಬ್ಬ ಆಚರಿಸಿಲ್ಲ. ಇಂದು 108 ಆ್ಯಂಬುಲೆನ್ಸ್ ಸಿಬ್ಬಂದಿಗಳು ಆಯುಧ ಪೂಜೆ  ಕೂಡ ಮಾಡಿಲ್ಲ. 108 ಆರೋಗ್ಯ ಕವಚ ಸಿಬ್ಬಂದಿಗಳ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಸಂಬಳಕ್ಕಾಗಿ ರಾಜ್ಯ ಸರ್ಕಾರ 25 ಕೋಟಿ ರುಪಾಯಿ ಹಣ ಬಿಡುಗಡೆ ಮಾಡಿದೆ. ಆದರೆ ಜಿವಿಕೆ ಕಂಪನಿ ಸಿಬ್ಬಂದಿಗಳಿಗೆ ಸಂಬಳ ಮಾತ್ರ ನೀಡಿಲ್ಲ.

108 ಆರೋಗ್ಯ ಕವಚದ ಅಡಿಯಲ್ಲಿ ಮೂರು ಸಾವಿರ ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದಾರೆ. ಕಂಪನಿ ಇನ್ನೂ ಸಂಬಳ ಬಿಡುಗಡೆ ಮಾಡಿಲ್ಲ. ಕೂಡಲೇ ರಾಜ್ಯ ಸರ್ಕಾರ, ಆರೋಗ್ಯ ಸಚಿವರು ಮಧ್ಯಪ್ರವೇಶ ಮಾಡಬೇಕು. ಎರಡು ದಿನದಲ್ಲಿ ಸಂಬಳ ಬಿಡುಗಡೆ ಮಾಡುವಂತೆ ಮಾಡಬೇಕು ಎಂದು 108 ನೌಕರರ ಸಂಘದ ಉಪಾಧ್ಯಕ್ಷ ಪರಮಶಿವ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಎಸ್​ಆರ್​ಟಿಸಿ ಕಳೆದ 26 ವರ್ಷಗಳ ಇತಿಹಾಸವನ್ನು ಅಳಸಿ ಪ್ರಥಮಬಾರಿಗೆ ಸೆಪ್ಟೆಂಬರ್​ 1ನೇ ತಾರಿಕಿನಂದೇ ಸಂಬಳ ನೀಡಿದೆ. ಆದರೆ ಜಿವಿಕೆ ಕಂಪನಿ ಮಾತ್ರ ಕಳೆದ ಎರಡು ತಿಂಗಳಿಂದ ಸಿಬ್ಬಂದಿಗಳಿಗೆ ಸಿಬ್ಬಂದಿಗೆ ಸಂಬಳ ನೀಡಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕಲ್ಲಿಕ್ ಮಾಡಿ

Published On - 3:43 pm, Tue, 4 October 22

ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ