ಬೆಂಗಳೂರು: ದೇವರು ವರ ಕೊಟ್ಟರು ಪೂಜಾರಿ ವರ ಕೊಡಲಿಲ್ಲ ಎಂಬಂತಾಗಿದೆ 108 ಆರೋಗ್ಯ ಕವಚ ಸಿಬ್ಬಂದಿಗಳ ಪಾಡು. ಸಿಬ್ಬಂದಿಗಳಿಗೆ ವೇತನ ನೀಡಲು ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ಆದರೆ ಜೆವಿಕೆ (GVK) ಕಂಪನಿಯವರು 108 ಆರೋಗ್ಯ ಕವಚ (108 Health works) ಸಿಬ್ಬಂದಿಗಳಿಗೆ ಕಳೆದ ಎರಡು ತಿಂಗಳಿನಿಂದ ವೇತನ ನೀಡಿಲ್ಲ. ಇದರಿಂದ 108 ಆರೋಗ್ಯ ಕವಚ ಸಿಬ್ಬಂದಿಗಳು ದಸರಾ ಹಬ್ಬ ಆಚರಿಸಿಲ್ಲ. ಇಂದು 108 ಆ್ಯಂಬುಲೆನ್ಸ್ ಸಿಬ್ಬಂದಿಗಳು ಆಯುಧ ಪೂಜೆ ಕೂಡ ಮಾಡಿಲ್ಲ. 108 ಆರೋಗ್ಯ ಕವಚ ಸಿಬ್ಬಂದಿಗಳ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಸಂಬಳಕ್ಕಾಗಿ ರಾಜ್ಯ ಸರ್ಕಾರ 25 ಕೋಟಿ ರುಪಾಯಿ ಹಣ ಬಿಡುಗಡೆ ಮಾಡಿದೆ. ಆದರೆ ಜಿವಿಕೆ ಕಂಪನಿ ಸಿಬ್ಬಂದಿಗಳಿಗೆ ಸಂಬಳ ಮಾತ್ರ ನೀಡಿಲ್ಲ.
108 ಆರೋಗ್ಯ ಕವಚದ ಅಡಿಯಲ್ಲಿ ಮೂರು ಸಾವಿರ ಸಿಬ್ಬಂದಿಗಳು ಕೆಲಸ ಮಾಡುತ್ತಿದ್ದಾರೆ. ಕಂಪನಿ ಇನ್ನೂ ಸಂಬಳ ಬಿಡುಗಡೆ ಮಾಡಿಲ್ಲ. ಕೂಡಲೇ ರಾಜ್ಯ ಸರ್ಕಾರ, ಆರೋಗ್ಯ ಸಚಿವರು ಮಧ್ಯಪ್ರವೇಶ ಮಾಡಬೇಕು. ಎರಡು ದಿನದಲ್ಲಿ ಸಂಬಳ ಬಿಡುಗಡೆ ಮಾಡುವಂತೆ ಮಾಡಬೇಕು ಎಂದು 108 ನೌಕರರ ಸಂಘದ ಉಪಾಧ್ಯಕ್ಷ ಪರಮಶಿವ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೆಎಸ್ಆರ್ಟಿಸಿ ಕಳೆದ 26 ವರ್ಷಗಳ ಇತಿಹಾಸವನ್ನು ಅಳಸಿ ಪ್ರಥಮಬಾರಿಗೆ ಸೆಪ್ಟೆಂಬರ್ 1ನೇ ತಾರಿಕಿನಂದೇ ಸಂಬಳ ನೀಡಿದೆ. ಆದರೆ ಜಿವಿಕೆ ಕಂಪನಿ ಮಾತ್ರ ಕಳೆದ ಎರಡು ತಿಂಗಳಿಂದ ಸಿಬ್ಬಂದಿಗಳಿಗೆ ಸಿಬ್ಬಂದಿಗೆ ಸಂಬಳ ನೀಡಿಲ್ಲ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕಲ್ಲಿಕ್ ಮಾಡಿ
Published On - 3:43 pm, Tue, 4 October 22