ಗೋಹತ್ಯೆ ನಿಷೇಧದಿಂದ BJP ಸರ್ಕಾರ.. ಸಮಾಜದಲ್ಲಿ ಅಲ್ಲೋಲ ಕಲ್ಲೋಲ ಮಾಡಲು ಹೊರಟಿದೆ: ಹೆಚ್.ಡಿ. ದೇವೇಗೌಡ

ಬಿಜೆಪಿ ಸರ್ಕಾರ 2010 ರಲ್ಲಿ ಈ ಕಾಯ್ದೆಯನ್ನು ಜಾರಿಗೆ ತರಲು ಮುಂದಾಗಿತ್ತು. ಆದರೆ ಇದಕ್ಕೆ ಅಂದೇ ವಿರೋಧವನ್ನು ಮಾಡಿದ್ದೆ. ಈ ಗೋಹತ್ಯೆ ನಿಷೇಧಕ್ಕೆ ಜೆಡಿಎಸ್ ಬೆಂಬಲ ನೀಡುವುದಿಲ್ಲ ಎಂದು ದೇವೇಗೌಡ ಸ್ಪಷ್ಟಪಡಿಸಿದ್ದಾರೆ.

ಗೋಹತ್ಯೆ ನಿಷೇಧದಿಂದ BJP ಸರ್ಕಾರ.. ಸಮಾಜದಲ್ಲಿ ಅಲ್ಲೋಲ ಕಲ್ಲೋಲ ಮಾಡಲು ಹೊರಟಿದೆ: ಹೆಚ್.ಡಿ. ದೇವೇಗೌಡ
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ
Follow us
sandhya thejappa
| Updated By: ಸಾಧು ಶ್ರೀನಾಥ್​

Updated on: Dec 15, 2020 | 10:16 AM

ಬೆಂಗಳೂರು: ಗೋಹತ್ಯೆ ನಿಷೇಧ ಮಸೂದೆ ಮಂಡನೆಗೆ ಜೆಡಿಎಸ್​ನಿಂದ ಭಾರಿ ವಿರೋಧ ವ್ಯಕ್ತವಾಗಿದ್ದು, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಈ ಸಂಬಂಧ ಮಾಧ್ಯಮ ಪ್ರಕಟಣೆ ನೀಡಿದ್ದಾರೆ.

ರಾಜ್ಯ ಸರ್ಕಾರ ಮಸೂದೆಯನ್ನು ಮಂಡಿಸಿ ಸಮಾಜದಲ್ಲಿ ಅಶಾಂತಿ ಮತ್ತು ಜನರ ಬಾಳನ್ನು ಅಲ್ಲೋಲ ಕಲ್ಲೋಲ ಮಾಡಲು ಹೊರಟಿದೆ. ಬಿಜೆಪಿ ಸರ್ಕಾರ 2010 ರಲ್ಲಿ ಈ ಕಾಯ್ದೆಯನ್ನು ಜಾರಿಗೆ ತರಲು ಮುಂದಾಗಿತ್ತು. ಆದರೆ ಇದಕ್ಕೆ ಅಂದೇ ವಿರೋಧವನ್ನು ಮಾಡಿದ್ದೆ. ಈ ಗೋಹತ್ಯೆ ನಿಷೇಧಕ್ಕೆ ಜೆಡಿಎಸ್ ಬೆಂಬಲ ನೀಡುವುದಿಲ್ಲ ಎಂದು ದೇವೇಗೌಡ ಸ್ಪಷ್ಟಪಡಿಸಿದ್ದಾರೆ.

ರಾಜ್ಯಪಾಲರು ಹಾಗೂ ರಾಷ್ಟ್ರಪತಿಗಳಿಗೆ ಪತ್ರ ಬರೆದು ಈ ಮಸೂದೆಗೆ ಒಪ್ಪಿಗೆ ನೀಡಬಾರದು ಎಂದು ಮನವಿ ಮಾಡಿದ್ದೆವು. ನಂತರ ಸರ್ಕಾರ ಬದಲಾಗಿ ಈ ಮಸೂದೆ ಹಿಂಪಡೆಯಲಾಗಿತ್ತು. ಆದರೆ ಮತ್ತೊಮ್ಮೆ ಇದೇ ಮಸೂದೆಯನ್ನು ತರಲು ಬಿಜೆಪಿ ಸರ್ಕಾರ ಹೊರಟಿದೆ. ಇದಕ್ಕೆ ಜೆಡಿಎಸ್ ಪಕ್ಷದಿಂದ ಸಂಪೂರ್ಣ ವಿರೋಧವಿದೆ ಎಂದು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.

ಮಾಧ್ಯಮ ಪ್ರಕಟಣೆ

ನಾನು JDS ಸೇರಿದರೆ HDD, HDK ಬೇಡ ಅಂತಾರಾ? -C.M.ಇಬ್ರಾಹಿಂ