ಮಾವಿನಕೆರೆ ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ, ರೇವಣ್ಣ ವಿಶೇಷ ಪೂಜೆ
ಮಹಾಲಯ ಅಮಾವಾಸ್ಯೆ ಹಿನ್ನೆಲೆಯಲ್ಲಿ ಎಚ್.ಡಿ. ಕುಮಾರಸ್ವಾಮಿ ಮತ್ತು ಎಚ್.ಡಿ. ರೇವಣ್ಣ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಮಾವಿನಕೆರೆ ರಂಗನಾಥಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಪಿತೃಪಕ್ಷದ ನಿಮಿತ್ತ ಕುಟುಂಬದ ಸದಸ್ಯರ ಕ್ಷೇಮ ಹಾಗೂ ಶಾಂತಿಗಾಗಿ ವಿಶೇಷ ಅಷ್ಟೋತ್ತರ ಶತನಾಮ ಪೂಜೆ ಸಲ್ಲಿಸಲಾಯಿತು. ದೇವೇಗೌಡರ ಕುಟುಂಬ ಪ್ರತಿ ವರ್ಷವೂ ಇಂತಹ ಸಂದರ್ಭಗಳಲ್ಲಿ ವಿಶೇಷ ಪೂಜೆಗಳನ್ನು ನೆರವೇರಿಸುತ್ತದೆ.
ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಮಾವಿನಕೆರೆ ಗ್ರಾಮದಲ್ಲಿರುವ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು ಅವರ ಸಹೋದರ ಎಚ್.ಡಿ. ರೇವಣ್ಣ ವಿಶೇಷ ಪೂಜೆ ಸಲ್ಲಿಸಿದರು. ಪಿತೃಪಕ್ಷದ ಹಿನ್ನೆಲೆಯಲ್ಲಿ ದೇವೇಗೌಡರ ಕುಟುಂಬವು ಹರದನಹಳ್ಳಿಯಲ್ಲಿ ಕುಟುಂಬ ಸಮೇತ ಹಬ್ಬಾಚರಣೆ ಮಾಡುತ್ತಿದ್ದು, ಅದರ ಭಾಗವಾಗಿ ಈ ಪೂಜೆ ನೆರವೇರಿತು.
ಶ್ರೀ ಲಕ್ಷ್ಮೀರಂಗನಾಥಸ್ವಾಮಿ ದೇವರಿಗೆ ಅಷ್ಟೋತ್ತರ ಶತನಾಮ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ವಿಧಿಗಳನ್ನು ನೆರವೇರಿಸಲಾಯಿತು. ದೇವೇಗೌಡ, ಚೆನ್ನಮ್ಮ, ರೇವಣ್ಣ, ಕುಮಾರಸ್ವಾಮಿ, ಅನಿತಾ ಮತ್ತು ನಿಖಿಲ್ ಸೇರಿದಂತೆ ಕುಟುಂಬದ ಎಲ್ಲ ಸದಸ್ಯರ ಕ್ಷೇಮ, ಸ್ಥೈರ್ಯ, ವಿಜಯ, ಆಯುರಾರೋಗ್ಯಕ್ಕಾಗಿ ಪ್ರಾರ್ಥಿಸಲಾಯಿತು. ಮುಖ್ಯವಾಗಿ ಅಮಾವಾಸ್ಯೆಯ ಶುಭ ತಿಥಿಯಂದು, ಹಸ್ತ ನಕ್ಷತ್ರ ಮತ್ತು ಐಂದ್ರ ಯೋಗದಲ್ಲಿ ಈ ಪೂಜೆಗಳನ್ನು ಆಯೋಜಿಸಲಾಗಿತ್ತು. ಕುಟುಂಬದ ಹಿರಿಯ ಸದಸ್ಯರ ಆತ್ಮಶಾಂತಿಗಾಗಿಯೂ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಧಾರ್ಮಿಕ ಆಚರಣೆಗಳಿಗೆ ಹೆಚ್ಚಿನ ಮಹತ್ವ ನೀಡುವ ದೇವೇಗೌಡರ ಕುಟುಂಬ ಪ್ರತಿ ವರ್ಷವೂ ಇಂತಹ ಸಂದರ್ಭಗಳಲ್ಲಿ ವಿಶೇಷ ಪೂಜೆಗಳನ್ನು ನೆರವೇರಿಸುತ್ತದೆ.
ಮತ್ತಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

