AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯರನ್ನ ಭೇಟಿ ಮಾಡಿದ್ರೆ ತಪ್ಪೇನಿದೆ?: ಅಚ್ಚರಿಯ ಹೇಳಿಕೆ ನೀಡಿದ ಹೆಚ್.ಡಿ. ಕುಮಾರಸ್ವಾಮಿ

ಸಿದ್ದರಾಮಯ್ಯರನ್ನ ಭೇಟಿ ಮಾಡಿದ್ರೆ ತಪ್ಪೇನಿದೆ?: ಅಚ್ಚರಿಯ ಹೇಳಿಕೆ ನೀಡಿದ ಹೆಚ್.ಡಿ. ಕುಮಾರಸ್ವಾಮಿ

ಅಕ್ಷಯ್​ ಪಲ್ಲಮಜಲು​​
|

Updated on:Oct 23, 2026 | 1:32 PM

Share

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭೇಟಿ ಕುರಿತು ಸ್ಪಷ್ಟನೆ ನೀಡಿದ್ದಾರೆ. ಸದ್ಯಕ್ಕೆ ಭೇಟಿಯ ಅಗತ್ಯವಿಲ್ಲ, ಆದರೆ ಭವಿಷ್ಯದಲ್ಲಿ ಅನಿವಾರ್ಯತೆ ಬಂದರೆ ಭೇಟಿ ಮಾಡುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಹಳೆಯ "ಸ್ಟಿಂಗ್ ಕಾರ್ಯಾಚರಣೆ" ಘಟನೆಯನ್ನು ಪ್ರಸ್ತಾಪಿಸಿ ಡಿಕೆ ಶಿವಕುಮಾರ್‌ಗೆ ಸವಾಲೆಸೆದಿದ್ದಾರೆ.

ಬೆಂಗಳೂರು, ಅ.23: ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗಿನ ಭೇಟಿ ಕುರಿತು ಹಬ್ಬಿದ್ದ ವದಂತಿಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಸದ್ಯಕ್ಕೆ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡುವ ಅಗತ್ಯವಿಲ್ಲ ಎಂದು ತಿಳಿಸಿದ ಕುಮಾರಸ್ವಾಮಿ, ಭವಿಷ್ಯದಲ್ಲಿ ಅನಿವಾರ್ಯತೆ ಸೃಷ್ಟಿಯಾದರೆ ಖಂಡಿತಾ ಭೇಟಿ ಮಾಡುವುದಾಗಿ ಹೇಳಿದ್ದಾರೆ. “ನಾವು ಮಾಜಿ ಮುಖ್ಯಮಂತ್ರಿಗಳು. ಎಂತೆಂಥವರನ್ನೂ ಭೇಟಿ ಮಾಡಿದ್ದೇವೆ. ಅವರು ನಮ್ಮ ಪಕ್ಷದಲ್ಲಿದ್ದಂತವರು. ಭೇಟಿ ಮಾಡಿದರೆ ತಪ್ಪೇನಿದೆ?” ಎಂದು ಪ್ರಶ್ನಿಸಿದ್ದಾರೆ. ಈ ಸಂದರ್ಭದಲ್ಲಿ, ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿರುವ “ಸ್ಟಿಂಗ್ ಕಾರ್ಯಾಚರಣೆ” ಕುರಿತು ಕುಮಾರಸ್ವಾಮಿ ಪ್ರಸ್ತಾಪಿಸಿದ್ದಾರೆ. 2011ರಲ್ಲಿ ನಡೆದಿದ್ದ ಒಂದು ಘಟನೆಯನ್ನು ಉಲ್ಲೇಖಿಸಿದ ಅವರು, “2011ರಲ್ಲಿ ಸಿದ್ದರಾಮಯ್ಯನವರು ಭೇಟಿ ಮಾಡಿದ್ದನ್ನು ಈಗ 2023ರಲ್ಲಿ ಕ್ಯಾಮರಾ ಇಟ್ಟುಕೊಂಡು ಶೂಟ್ ಮಾಡುತ್ತಾರೆ, ಇದೇನು ಸಿನಿಮಾನಾ?” ಎಂದು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಈ ಘಟನೆಯನ್ನು 2024ರ ಪಾರ್ಲಿಮೆಂಟ್ ಚುನಾವಣೆ ಬಳಿಕ ನಡೆದ ಡಿ.ಕೆ. ಶಿವಕುಮಾರ್ ಸಂಬಂಧಿತ ಘಟನೆಯೊಂದಿಗೆ ಹೋಲಿಸಿ, ಡಿ.ಕೆ. ಶಿವಕುಮಾರ್ ಅವರು ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಸವಾಲೆಸೆದಿದ್ದಾರೆ. “ಕಾಲ ಉತ್ತರ ಕೊಡುತ್ತದೆ” ಎಂಬ ಹೇಳಿಕೆ ಕುರಿತು, “ಸಿದ್ದರಾಮಯ್ಯನವರ ಹೆಸರನ್ನು ಹಾಳುಮಾಡಿ, ಕಾಲ ಉತ್ತರ ಕೊಡುತ್ತದಾ?” ಎಂದು ಪ್ರಶ್ನಿಸಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Oct 23, 2026 01:32 PM

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More