AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನೇಶ್ ಕಲ್ಲಹಳ್ಳಿ ದೂರು ಹಿಂಪಡೆದ ಕಾರಣ ತಿಳಿದಿಲ್ಲ; ಎಚ್.​ಡಿ.ಕುಮಾರಸ್ವಾಮಿ

Ramesh Jarkiholi CD Controversy: ದೂರು ಹಿಂಪಡೆಯಲು ಯಾರು ಪ್ರೇರಣೆ ಎಂಬುದನ್ನು ತಿಳಿದುಕೊಳ್ಳಬೇಕು. ಸಂತ್ರಸ್ತ ಮಹಿಳೆ ಅನ್ಯಾಯವಾಗಿದೆ ಎಂದು ಏಕೆ ಹೊರಗಡೆ ಬಂದಿಲ್ಲ. ಯಾವ ಕಾರಣಕ್ಕೆ ಈ ಪ್ರಕರಣ ಹೊರ ಬಂದಿದೆ. ಈ ದೂರಿನ ಹಿಂದಿನ ಸತ್ಯಾಂಶವೇನು..ಈ ದೂರಿನ ಹಿಂದಿನ ಸತ್ಯಗಳು ಜನರ ಮುಂದೆ ಬರಬೇಕಿದೆ’ ಎಂದು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ದಿನೇಶ್ ಕಲ್ಲಹಳ್ಳಿ ದೂರು ಹಿಂಪಡೆದ ಕಾರಣ ತಿಳಿದಿಲ್ಲ; ಎಚ್.​ಡಿ.ಕುಮಾರಸ್ವಾಮಿ
ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ
guruganesh bhat
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Mar 07, 2021 | 5:18 PM

Share

ಕೋಲಾರ: ದಿನೇಶ್ ಕಲ್ಲಹಳ್ಳಿ ಯಾವ ಕಾರಣಕ್ಕಾಗಿ ದೂರು ಹಿಂಪಡೆದಿದ್ದಾರೆ ಎಂಬ ವಿಚಾರ ತಿಳಿದಿಲ್ಲ ಎಂದು ಕೋಲಾರದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಕರಣದ ಬಗ್ಗೆ ಸರ್ಕಾರಕ್ಕೆ ಜವಾಬ್ದಾರಿ ಇದೆ. ಸರ್ಕಾರವೇ ಈ ಪ್ರಕರಣದಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಿಸಬಹುದು. ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಅಸಹ್ಯಕರ ಘಟನೆಗಳು‌ ನಡೆಯುತ್ತಿವೆ. ಸರ್ಕಾರವು ಗೌರವ‌ ಉಳಿಸಿಕೊಳ್ಳುವ‌ ನಿಟ್ಟಿನಲ್ಲಿ ಜನತೆಗೆ ವಿಶ್ವಾಸ ಮೂಡಿಸುವ‌ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

‘ದೂರು ಹಿಂಪಡೆಯಲು ಯಾರು ಪ್ರೇರಣೆ ಎಂಬುದನ್ನು ತಿಳಿದುಕೊಳ್ಳಬೇಕು. ಸಂತ್ರಸ್ತ ಮಹಿಳೆ ಅನ್ಯಾಯವಾಗಿದೆ ಎಂದು ಏಕೆ ಹೊರಗಡೆ ಬಂದಿಲ್ಲ. ಯಾವ ಕಾರಣಕ್ಕೆ ಈ ಪ್ರಕರಣ ಹೊರ ಬಂದಿದೆ. ಈ ದೂರಿನ ಹಿಂದಿನ ಸತ್ಯಾಂಶವೇನು..ಈ ದೂರಿನ ಹಿಂದಿನ ಸತ್ಯಗಳು ಜನರ ಮುಂದೆ ಬರಬೇಕಿದೆ’ ಎಂದು ಅವರು ಹೇಳಿದ್ದಾರೆ.

ರಮೇಶ್ ಜಾರಕಿಹೊಳಿ ವಿರುದ್ಧ ದೂರು ವಾಪಸ್ ದಿನೇಶ್ ಕಲ್ಲಹಳ್ಳಿ ನೀಡಿದ್ದ ದೂರಿನಲ್ಲಿ ತಾಂತ್ರಿಕ ದೋಷವಿದೆ. ಸಂತ್ರಸ್ತೆಯ ಚಾರಿತ್ರ್ಯಹರಣವಾಗುತ್ತಿರುವ ಹಿನ್ನೆಲೆಯಲ್ಲಿ ದೂರು ವಾಪಸ್ ಪಡೆಯುತ್ತಿದ್ದೇವೆ ಎಂದು ಟಿವಿ9 ಕನ್ನಡಕ್ಕೆ ದಿನೇಶ್ ಕಲ್ಲಹಳ್ಳಿ ಪರ ವಕೀಲ ಕುಮಾರ್ ಪಾಟೀಲ್ ಹೇಳಿಕೆ ನೀಡಿದ್ದಾರೆ. ಸಂತ್ರಸ್ತೆಗೆ ಸಾಮಾಜಿಕ ಮಾಧ್ಯಮ, ಮಾಧ್ಯಮಗಳಿಂದ ಅನ್ಯಾಯ ಆಗ್ತಿದೆ. ಅಂಗಿ ಮೇಲೆ ಮುಳ್ಳುಬಿದ್ದರೂ, ಮುಳ್ಳಿನ ಮೇಲೆ ಅಂಗಿ ಬಿದ್ದರೂ ಹರಿಯೋದು ಅಂಗಿಯೇ. ದಿನೇಶ್ ಕಲ್ಲಹಳ್ಳಿ ಅವರ ಸೂಚನೆಯಂತೆ ದೂರು ಹಿಂಪಡೆಯುತ್ತಿದ್ದೇನೆ’ ಎಂದು ವಕೀಲ ಕುಮಾರ್ ಪಾಟೀಲ್ ಹೇಳಿದ್ದಾರೆ. ತಮ್ಮ ವಕೀಲರ ಪರ ಮೂಲಕ ದೂರು ಹಿಂಪಡೆಯುವ ಪತ್ರವನ್ನು ದಿನೇಶ್ ಕಲ್ಲಹಳ್ಳಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ರವಾನಿಸಿದ್ದು, ಈ ವೇಳೆ ವಕೀಲ ಕುಮಾರ್ ಪಾಟೀಲ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

‘ದಿನೇಶ್ ಕಲ್ಲಹಳ್ಳಿ ಈಗೇಕೆ ದೂರು ಹಿಂಪಡೆಯಲು ನಿರ್ಧರಿಸಿದ್ದಾರೆ? ಅವರೇ ಏಕೆ ಪೊಲೀಸ್ ಠಾಣೆಗೆ ಹೋಗುತ್ತಿಲ್ಲ’ ಎಂಬ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ವಕೀಲರು, ‘ಅವರು ಕೊಟ್ಟ ದೂರಿನಲ್ಲಿ ತಾಂತ್ರಿಕ ಸಮಸ್ಯೆಗಳಿದ್ದವು. ಹೀಗಾಗಿ ಹಿಂಪಡೆಯುತ್ತಿದ್ದೇವೆ. ದಿನೇಶ್ ಕಲ್ಲಹಳ್ಳಿ ದೂರು ನೀಡಿರುವುದು ನಿಜ. ಆದರೆ ಎಲ್ಲಿಯೂ ಪ್ರಕರಣ ದಾಖಲಾಗಿಲ್ಲ. ಹೀಗಾಗಿ ದೂರು ಹಿಂಪಡೆಯಲು ಅವಕಾಶವಿದೆ. ದಿನೇಶ್ ಕಲ್ಲಹಳ್ಳಿ ಅವರು ದೂರು ಹಿಂಪಡೆಯುವಂತೆ ನನಗೆ ಪತ್ರ ಕೊಟ್ಟಿದ್ದಾರೆ. ಪೊಲೀಸರು ಏನು ನಿರ್ಧಾರ ಮಾಡ್ತಾರೆ ನೋಡೋಣ. ಬಹುಶಃ ದಿನೇಶ್ ಕಲ್ಲಹಳ್ಳಿ ಅವರಿಗೆ ಹುಷಾರು ಇಲ್ಲದೆ ಇರಬಹುದು. ಹೀಗಾಗಿ ಅವರು ಬಾರದಿರಬಹುದು. ನಾನು ಪೊಲೀಸ್ ಠಾಣೆಗೆ ಹೋಗ್ತಿದ್ದೀನಿ’ ಎಂದು ದಿನೇಶ್ ಕಲ್ಲಹಳ್ಳಿ ಪರ ವಕೀಲರು ಹೇಳಿದ್ದಾರೆ.

ಇದನ್ನೂ ಓದಿ: Ramesh Jarkiholi CD Controversy: ರಮೇಶ್ ಜಾರಕಿಹೊಳಿ ವಿರುದ್ಧದ ದೂರು ಹಿಂಪಡೆಯಲು ದಿನೇಶ್ ಕಲ್ಲಹಳ್ಳಿ ನಿರ್ಧಾರ

ಇದನ್ನೂ ಓದಿ: ದೂರು ಹಿಂಪಡೆದಂತೆ ಟಿವಿಯಲ್ಲಿ ಪ್ರಸಾರವಾಗಿದ್ದನ್ನು ಹಿಂಪಡೆಯಲು ಸಾಧ್ಯವೇ: ಸಿದ್ದರಾಮಯ್ಯ ವ್ಯಂಗ್ಯ

Published On - 5:17 pm, Sun, 7 March 21

ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​
ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಠಿ: ಇಲ್ಲಿದೆ ಲೈವ್​