AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿತರಿಗೆ ಕೊಪ್ಪಳ ಗಂಗಾವತಿ ಆಸ್ಪತ್ರೆಯಲ್ಲಿ ಹೇರ್​ಕಟ್​; ಕ್ಷೌರಿಕನಿಗೆ ವೈದ್ಯರಿಂದ ಸನ್ಮಾನ

ಕ್ಷೌರಿಕ ಸುರೇಶ್​ ಮಧುಮೇಹದ ಸಮಸ್ಯೆ ಇದೆ. ಈ ನಡುವೆಯೂ ಕೂಡಾ ರೋಗಿಗಳ ಹಿತ ಬಯಸಿ ಜಿಲ್ಲೆಯ ಗಂಗಾವತಿ ಆಸ್ಪತ್ರೆಗೆ ಬಂದು ಹೇರ್​ಕಟ್​ ಮಾಡಿದ್ದಾರೆ. ಸುರಕ್ಷತೆಯಿಂದ ದೃಷ್ಟಿಯಿಂದ ಪಿಪಿಇಕಿಟ್​ ಧರಿಸಿ ಭಯಗೊಳ್ಳದೇ ರೋಗಿಗಳಿಗೆ ಕ್ಷೌರ ಮಾಡಿದ್ದಾರೆ.

ಕೊರೊನಾ ಸೋಂಕಿತರಿಗೆ ಕೊಪ್ಪಳ ಗಂಗಾವತಿ ಆಸ್ಪತ್ರೆಯಲ್ಲಿ ಹೇರ್​ಕಟ್​; ಕ್ಷೌರಿಕನಿಗೆ ವೈದ್ಯರಿಂದ ಸನ್ಮಾನ
ಕೊರೊನಾ ಸೋಂಕಿತರಿಗೆ ಕೊಪ್ಪಳ ಗಂಗಾವತಿ ಆಸ್ಪತ್ರೆಯಲ್ಲಿ ಹೇರ್​ಕಟ್
TV9 Web
| Updated By: shruti hegde|

Updated on: Jun 07, 2021 | 3:57 PM

Share

ಕೊಪ್ಪಳ: ಕೊರೊನಾ ಸೋಂಕಿನಿಂದ ಬಳಲುತ್ತಿರುವ ಜಿಲ್ಲೆಯ ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಹದಿನೈದು ದಿನಗಳಿಂದ ಆಸ್ಪತ್ರೆಯಲ್ಲಿಯೇ ಇದ್ದು ತಲೆ ಕೂದಲುಗಳು ಬೆಳೆದಿವೆ. ಆರೋಗ್ಯದ ದೃಷ್ಟಿಯಿಂದ ಕ್ಷೌರ ಮಾಡುವ ಹಾಗೂ ಶೇವಿಂಗ್​ ಮಾಡುವ ಅನಿವಾರ್ಯತೆ ಇತ್ತು. ಈ ಮಧ್ಯೆ ಧೈರ್ಯ ಮಾಡಿ ಜಿಲ್ಲೆಯ ಕ್ಷೌರಿಕ ಸುರೇಶ್​ ಎಂಬಾತ ಆಸ್ಪತ್ರೆಯಲ್ಲಿರುವ ಎಲ್ಲಾ ಪುರುಷರಿಗೆ ಕ್ಷೌರ ಮತ್ತು ಶೇವಿಂಗ್​ ಮಾಡಿ ಕರುಣೆ ತೋರಿದ್ದಾರೆ.

ಕ್ಷೌರಿಕ ಸುರೇಶ್​ ಮಧುಮೇಹದ ಸಮಸ್ಯೆ ಇದೆ. ಈ ನಡುವೆಯೂ ಕೂಡಾ ರೋಗಿಗಳ ಹಿತ ಬಯಸಿ ಜಿಲ್ಲೆಯ ಗಂಗಾವತಿ ಆಸ್ಪತ್ರೆಗೆ ಬಂದು ಹೇರ್​ಕಟ್​ ಮಾಡಿದ್ದಾರೆ. ಸುರಕ್ಷತೆಯಿಂದ ದೃಷ್ಟಿಯಿಂದ ಪಿಪಿಇಕಿಟ್​ ಧರಿಸಿ ಭಯಗೊಳ್ಳದೇ ರೋಗಿಗಳಿಗೆ ಕ್ಷೌರ ಮಾಡಿದ್ದಾರೆ.

ಜಿಲ್ಲೆಯ ಗಂಗಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 30 ಜನ ಸೋಂಕಿತರು ಹೇರ್​ಕಟ್​ ಮಾಡಿಸಿಕೊಂಡಿದ್ದಾರೆ. ಸಕ್ಕರೆ ಕಾಯಿಲೆ ಇದ್ದರೂ ಧೈರ್ಯದಿಂದ ಪಿಪಿಇಕಿಟ್​ ಧರಿಸಿ ಕ್ಷೌರ ಮಾಡಿದ್ದರಿಂದ ಆಸ್ಪತ್ರೆಯ ವೈದ್ಯ ಈಶ್ವರ ಸವಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯಲ್ಲಿ ಕ್ಷೌರಿಕ ಸುರೇಶ್​ಗೆ ಸನ್ಮಾನ ಕಾರ್ಯಕ್ರಮ ನೆರವೇರಿದೆ.

ಇದನ್ನೂ ಓದಿ:

45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಬೂತ್ ಮಟ್ಟದಲ್ಲಿ ಕೊವಿಡ್ ಲಸಿಕೆ ನೀಡಲು ಮನೆ-ಮನೆ ಸಮೀಕ್ಷೆ: ಅರವಿಂದ್ ಕೇಜ್ರಿವಾಲ್ ಘೋಷಣೆ

ಮೈಸೂರು ವಿವಿಯಿಂದ ಕೊವಿಡ್ ರ‍್ಯಾಪಿಡ್‌ ಡಿಟೆಕ್ಷನ್ ಕಿಟ್ ವಿನ್ಯಾಸ; ಲಸಿಕೆ ಅಭಿವೃದ್ಧಿಪಡಿಸಲು ಅನುದಾನದ ಕೊರತೆ

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!