ಹಲಗೆ ವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣ: ತನಿಖೆ ಮುಂದುವರಿಸಿ ಎಂದ ಸುಪ್ರೀಂ, ಎಚ್ಡಿಕೆಗೆ ಸಂಕಷ್ಟ..
ಪ್ರಕರಣದ ತನಿಖೆಗೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದ್ದು, ಪ್ರಕರಣದ ತನಿಖೆ ಮುಂದುವರಿಸುವಂತೆ ಸೂಚನೆ ನೀಡಿದೆ. ನ್ಯಾ.ಅಶೋಕ್ ಭೂಷಣ್ ನೇತೃತ್ವದ ಪೀಠದಲ್ಲಿ ನಡೆದ ವಿಚಾರಣೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.
ದೆಹಲಿ: ಹಲಗೆ ವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಗೆ ಸಂಕಷ್ಟ ಎದುರಾಗಿದೆ.
ಪ್ರಕರಣದ ತನಿಖೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಪ್ರಕರಣದ ತನಿಖೆ ಮುಂದುವರಿಸುವಂತೆ ಸೂಚನೆ ನೀಡಿದೆ. ನ್ಯಾ. ಅಶೋಕ್ ಭೂಷಣ್ ನೇತೃತ್ವದ ಪೀಠದಲ್ಲಿ ನಡೆದ ವಿಚಾರಣೆ ವೇಳೆ ಈ ತೀರ್ಮಾನ ಹೊರಬಿದ್ದಿದೆ. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಮಾಹಿತಿ ಕೋರಿ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಲಾಗಿದೆ.
ಹಲಗೆ ವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಹೆಚ್ಡಿಕೆಗೆ ಸಮನ್ಸ್ ಜಾರಿಗೊಳಿಸಿತ್ತು. ಹೀಗಾಗಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನ ಆದೇಶ ಪ್ರಶ್ನಿಸಿ, ಹೆಚ್ಡಿಕೆ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಹೆಚ್.ಡಿ. ಕುಮಾರಸ್ವಾಮಿ ಅರ್ಜಿ ವಜಾಗೊಳಿಸಿತ್ತು.
ಹೈಕೋರ್ಟ್ನ ತೀರ್ಪನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅರ್ಜಿ ಸಲ್ಲಿಸಿದ್ದರು. ಆದರೆ ಸುಪ್ರೀಂ ಕೋರ್ಟ್ ಸಹ ಪ್ರಕರಣದ ತನಿಖೆ ಮುಂದುವರಿಸುವಂತೆ ಸೂಚನೆ ನೀಡಿದೆ. ಹೀಗಾಗಿ ಪ್ರಕರಣದ ಸಂಬಂಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಗೆ ಹಿನ್ನಡೆಯುಂಟಾಗಿದೆ.
ಸಿಎಂ ಬಿಎಸ್ವೈ, ಡಿಕೆಶಿಗೆ ‘ಬೆನ್ನಿಗಾನಹಳ್ಳಿ’ ಕಂಟಕ, ಸುಪ್ರೀಂಕೋರ್ಟ್ನಲ್ಲಿಂದು ಮೇಲ್ಮನವಿ ಅರ್ಜಿ ವಿಚಾರಣೆ