ಹಲಗೆ ವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣ: ತನಿಖೆ ಮುಂದುವರಿಸಿ ಎಂದ ಸುಪ್ರೀಂ, ಎಚ್​ಡಿಕೆಗೆ ಸಂಕಷ್ಟ..

| Updated By: ಸಾಧು ಶ್ರೀನಾಥ್​

Updated on: Jan 18, 2021 | 3:10 PM

ಪ್ರಕರಣದ ತನಿಖೆಗೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದ್ದು, ಪ್ರಕರಣದ ತನಿಖೆ ಮುಂದುವರಿಸುವಂತೆ ಸೂಚನೆ ನೀಡಿದೆ. ನ್ಯಾ.ಅಶೋಕ್ ಭೂಷಣ್​ ‌ನೇತೃತ್ವದ ಪೀಠದಲ್ಲಿ ನಡೆದ ವಿಚಾರಣೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಹಲಗೆ ವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣ: ತನಿಖೆ ಮುಂದುವರಿಸಿ ಎಂದ ಸುಪ್ರೀಂ, ಎಚ್​ಡಿಕೆಗೆ ಸಂಕಷ್ಟ..
ಹೆಚ್.ಡಿ.ಕುಮಾರಸ್ವಾಮಿ
Follow us on

ದೆಹಲಿ: ಹಲಗೆ ವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಗೆ ಸಂಕಷ್ಟ ಎದುರಾಗಿದೆ.

ಪ್ರಕರಣದ ತನಿಖೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಪ್ರಕರಣದ ತನಿಖೆ ಮುಂದುವರಿಸುವಂತೆ ಸೂಚನೆ ನೀಡಿದೆ. ನ್ಯಾ. ಅಶೋಕ್ ಭೂಷಣ್​ ‌ನೇತೃತ್ವದ ಪೀಠದಲ್ಲಿ ನಡೆದ ವಿಚಾರಣೆ ವೇಳೆ ಈ ತೀರ್ಮಾನ ಹೊರಬಿದ್ದಿದೆ. ಅಲ್ಲದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಮಾಹಿತಿ ಕೋರಿ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಲಾಗಿದೆ.

ಹಲಗೆ ವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಹೆಚ್​ಡಿಕೆಗೆ ಸಮನ್ಸ್ ಜಾರಿಗೊಳಿಸಿತ್ತು. ಹೀಗಾಗಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನ ಆದೇಶ ಪ್ರಶ್ನಿಸಿ, ಹೆಚ್​ಡಿಕೆ ಹೈಕೋರ್ಟ್​ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಹೆಚ್.ಡಿ. ಕುಮಾರಸ್ವಾಮಿ ಅರ್ಜಿ ವಜಾಗೊಳಿಸಿತ್ತು.

ಹೈಕೋರ್ಟ್​ನ ತೀರ್ಪನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅರ್ಜಿ ಸಲ್ಲಿಸಿದ್ದರು. ಆದರೆ ಸುಪ್ರೀಂ ಕೋರ್ಟ್ ಸಹ ಪ್ರಕರಣದ ತನಿಖೆ ಮುಂದುವರಿಸುವಂತೆ ಸೂಚನೆ ನೀಡಿದೆ. ಹೀಗಾಗಿ ಪ್ರಕರಣದ ಸಂಬಂಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಗೆ ಹಿನ್ನಡೆಯುಂಟಾಗಿದೆ.

ಸಿಎಂ ಬಿಎಸ್​ವೈ, ಡಿಕೆಶಿಗೆ ‘ಬೆನ್ನಿಗಾನಹಳ್ಳಿ’ ಕಂಟಕ, ಸುಪ್ರೀಂಕೋರ್ಟ್​ನಲ್ಲಿಂದು ಮೇಲ್ಮನವಿ ಅರ್ಜಿ ವಿಚಾರಣೆ