ಹಲಾಲ್ ಪ್ರಮಾಣಪತ್ರ ಹೊಂದಿರುವ ಸಂಸ್ಥೆಗಳನ್ನ ನಿಷೇಧಿಸುಂತೆ ಶಾಸಕ ಯತ್ನಾಳ್ ಆಗ್ರಹ: ಅಮಿತ್ ಶಾಗೆ ಪತ್ರ
ಹಲಾಲ್ ಪ್ರಮಾಣೀಕರಣ ಸಂಸ್ಥೆಗಳನ್ನು ತಕ್ಷಣವೇ ನಿಷೇಧಿಸುವಂತೆ ಆಗ್ರಹಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದಿದ್ದಾರೆ. ಈ ಸಂಸ್ಥೆಗಳು ಕಾನೂನುಬಾಹಿರವಾಗಿ ಕಾರ್ಯನಿರ್ವಹಿಸುತ್ತಿವೆ ಹಾಗೂ ಸಂಗ್ರಹಿಸಿದ ಹಣವು ರಾಷ್ಟ್ರವಿರೋಧಿ ಮತ್ತು ಭಯೋತ್ಪಾದಕ ಚಟುವಟಿಕೆಗಳಿಗೆ ಬಳಕೆಯಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಬೆಂಗಳೂರು, ಅಕ್ಟೋಬರ್ 25: ಹಲಾಲ್ ಪ್ರಮಾಣ ಪತ್ರ ಹೊಂದಿರುವ ಸಂಸ್ಥೆಗಳನ್ನು ತಕ್ಷಣ ರದ್ದುಗೊಳಿಸುವಂತೆ ಆಗ್ರಹಿಸಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda R Patil Yatnal), ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರಿಗೆ ಸವಿವರವಾಗಿ ಪತ್ರ ಬರೆದಿದ್ದಾರೆ. ಉತ್ತರ ಪ್ರದೇಶದಲ್ಲಿ ಈಗಾಗಲೇ ಹಲಾಲ್ ಉತ್ಪನ್ನಗಳನ್ನು ನಿಷೇಧಿಸಲಾಗಿದೆ. ಇದೆ ರೀತಿ ದೇಶಾದ್ಯಂತ ಹಲಾಲ್ ಉತ್ಪನ್ನಗಳು ಹಾಗೂ ಅದನ್ನು ಪ್ರಮಾಣೀಕರಿಸುವ ಸಂಸ್ಥೆಗಳನ್ನು ನಿಷೇಧಿಸುವಂತೆ ಆಗ್ರಹಿಸಿದ್ದಾರೆ.
ಶಾಸಕ ಯತ್ನಾಳ್ ಬರೆದ ಪತ್ರದಲ್ಲಿ ಏನಿದೆ?
ಹಲಾಲ್ ಪ್ರಮಾಣೀಕರಣ ಸಂಸ್ಥೆಗಳ ಕಾರ್ಯಾಚರಣೆಗಳನ್ನು ನಿಷೇಧಿಸುವ ತುರ್ತು ಅಗತ್ಯವನ್ನು ನಿಮ್ಮ ಗಮನಕ್ಕೆ ತರಲು ನಾನು ಬಯಸುತ್ತೇನೆ. ನವೆಂಬರ್ 2023 ರಲ್ಲಿ ಹಲಾಲ್ ಪ್ರಮಾಣೀಕರಣ ಸಂಸ್ಥೆಗಳನ್ನು ನಿಷೇಧಿಸುವಂತೆ ಕೋರಿ ನಾನು ಭಾರತ ಸರ್ಕಾರದ ಗ್ರಾಹಕ ವ್ಯವಹಾರಗಳ ಸಚಿವ ಪಿಯೂಷ್ ಗೋಯಲ್ ಅವರಿಗೆ ಪತ್ರ ಬರೆದಿದ್ದೆ.
ಶಾಸಕ ಯತ್ನಾಳ್ ಟ್ವೀಟ್
I have written a letter to the Hon’ble Home Minister Shri @AmitShah Ji to ban Halal certifying agencies in the country, in line with the ban imposed by the Uttar Pradesh Government. It is a known fact that halal money is being used to finance terror-related activities and provide… pic.twitter.com/Qs4xArDOth
— Basanagouda R Patil (Yatnal) (@BasanagoudaBJP) October 25, 2025
ಧಾರ್ಮಿಕ ಸಂಸ್ಥೆಗಳ ಸೋಗಿನಲ್ಲಿ ಹಲವಾರು ಇಸ್ಲಾಮಿಕ್ ಸಂಸ್ಥೆಗಳು ಮಾಂಸ ಉತ್ಪಾದನೆ, ಆಹಾರ ಉತ್ಪನ್ನಗಳು, ಸೌಂದರ್ಯವರ್ಧಕಗಳು ಮತ್ತು ಇತರ ಗ್ರಾಹಕ ಸರಕುಗಳು ಸೇರಿದಂತೆ ವಿವಿಧ ವಲಯಗಳಲ್ಲಿ ‘ಹಲಾಲ್’ ಪ್ರಮಾಣೀಕರಣಗಳನ್ನು ಸಕ್ರಿಯವಾಗಿ ಪ್ರಚಾರ ಮಾಡುತ್ತಿವೆ. ಹಲಾಲ್ ಇಂಡಿಯಾ, ಜಮಿಯತ್ ಉಲೇಮಾ-ಐ-ಹಿಂದ್ ಹಲಾಲ್ ಟ್ರಸ್ಟ್, ಗ್ಲೋಬಲ್ ಇಸ್ಲಾಮಿಕ್ ಶರಿಯಾ, ಹಲಾಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಹಲಾಲ್ ಸರ್ಟಿಫಿಕೇಶನ್ ಸರ್ವೀಸಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಮತ್ತು ಜಮಿಯತ್ ಉಲಾಮಾ-ಇ-ಮಹಾರಾಷ್ಟ್ರ ಸೇರಿವೆ.
ರೆಸ್ಟೋರೆಂಟ್, ಹೋಟೆಲ್, ಕಸಾಯಿಖಾನೆ ಮತ್ತು ಸೌಂದರ್ಯವರ್ಧಕ ಉತ್ಪನ್ನಗಳಿಗೆ ಹಲಾಲ್ ಪ್ರಮಾಣೀಕರಣಗಳನ್ನು ನೀಡುವುದು ಸರಿಯಾದ ಮನೋಭಾವದಲ್ಲಿಲ್ಲ. ಈ ಪ್ರಮಾಣೀಕರಣಗಳು ಭಾರತೀಯ ಸಂವಿಧಾನದಲ್ಲಿ ಪ್ರತಿಪಾದಿಸಲಾದ ತತ್ವಗಳಿಗೆ ವಿರುದ್ಧವಾಗಿವೆ. ಹೆಚ್ಚುವರಿಯಾಗಿ, ಈ ಪ್ರಮಾಣೀಕರಣಗಳ ಮೂಲಕ ಸಂಗ್ರಹಿಸಲಾದ ಗಣನೀಯ ಹಣವನ್ನು ರಾಷ್ಟ್ರವಿರೋಧಿ ಚಟುವಟಿಕೆಗಳು, ಭಯೋತ್ಪಾದನಾ ಬೆಂಬಲ, ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ವ್ಯಕ್ತಿಗಳಿಗೆ ಕಾನೂನು ನೆರವು ಮತ್ತು ಭಯೋತ್ಪಾದನೆ ಮತ್ತು ಜಿಹಾದ್ ಪ್ರಚಾರಕ್ಕೆ ಬಳಕೆ ಮಾಡಿಕೊಳ್ಳುತ್ತಿರುವ ಬಗ್ಗೆ ಪುರಾವೆಗಳಿವೆ ಎಂದು ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ: ಮದರಸಾಗಳಲ್ಲಿ ದೇಶ ವಿರೋಧಿ ಚಟುವಟಿಕೆ ಹೇಳಿಕೊಡಲಾಗುತ್ತದೆ ಅಂತ ಯತ್ನಾಳ್ ಹೇಳಿದಾಗ ಸದನದಲ್ಲಿ ಗಲಾಟೆ
ಹಲಾಲ್ ಷರಿಯಾ ಕಾನೂನು ಅಡಿಯಲ್ಲಿ ಬರುತ್ತದೆ. ಆದರೆ ಭಾರತದಲ್ಲಿ ಇದಕ್ಕೆ ಯಾವುದೇ ಕಾನೂನಿನ ಮಾನ್ಯತೆಯಿಲ್ಲ. ಹೀಗಾಗಿ, ಹಲಾಲ್ ಪ್ರಮಾಣೀಕರಣವನ್ನು ನೀಡುವ ಪ್ರಕ್ರಿಯೆಯೇ ಕಾನೂನುಬಾಹಿರವಾಗಿದೆ. ಕಾನೂನಿನ ಪ್ರಕಾರ, FSSAI ಹೊರತುಪಡಿಸಿ ಬೇರೆ ಯಾವುದೇ ಪ್ರಾಧಿಕಾರವು ಜನಾಂಗೀಯ, ಧಾರ್ಮಿಕ ಗುರುತುಗಳ ಆಧಾರದ ಮೇಲೆ ಯಾವುದೇ ಉತ್ಪನ್ನವನ್ನು ಲೇಬಲ್ ಮಾಡಲು, ಅಧಿಕೃತಗೊಳಿಸಲು, ಪ್ರಮಾಣೀಕರಿಸಲು ಸಾಧ್ಯವಿಲ್ಲ. ಹಲಾಲ್ ಪ್ರಮಾಣೀಕರಣವನ್ನು ಒದಗಿಸುವ ಈ ಸಂಸ್ಥೆಗಳು ಕಾನೂನುಬಾಹಿರ ಕೃತ್ಯವನ್ನು ಮಾಡುತ್ತಿವೆ ಮತ್ತು ಈ ಪ್ರಮಾಣೀಕರಣವನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸುವಂತೆ ಶಾಸಕ ಯತ್ನಾಳ್ ಆಗ್ರಹಿಸಿದ್ದಾರೆ.
ಕರ್ನಾಟಕದಲ್ಲಿ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 5:03 pm, Sat, 25 October 25



