ಕರ್ನಾಟಕದ ಏಕೈಕ ಕನ್ನಡ ವಿವಿಗೆ ಆರ್ಥಿಕ ಮುಗ್ಗಟ್ಟು: ಎಸ್​ಸಿ, ಎಸ್​ಟಿ ಸ್ಕಾಲರ್​ಶಿಪ್ ಇನ್ನೂ ಬಿಡುಗಡೆ ಮಾಡದ ಹಂಪಿ ವಿವಿ

ಹಂಪಿ ಕನ್ನಡ ವಿಶ್ವವಿದ್ಯಾಲಯವು ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದು, 2023-24ನೇ ಶೈಕ್ಷಣಿಕ ವರ್ಷದ ಎಸ್ಸಿ/ಎಸ್ಟಿ ವಿದ್ಯಾರ್ಥಿವೇತನ ಇನ್ನೂ ಬಿಡುಗಡೆ ಮಾಡಿಲ್ಲ. 130ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕಾಗಿ ಕಾಯುತ್ತಿದ್ದಾರೆ. ವಿದ್ಯಾರ್ಥಿಗಳು ಶೀಘ್ರದಲ್ಲೇ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಏಕೈಕ ಕನ್ನಡ ವಿವಿಗೆ ಆರ್ಥಿಕ ಮುಗ್ಗಟ್ಟು: ಎಸ್​ಸಿ, ಎಸ್​ಟಿ ಸ್ಕಾಲರ್​ಶಿಪ್ ಇನ್ನೂ ಬಿಡುಗಡೆ ಮಾಡದ ಹಂಪಿ ವಿವಿ
ಹಂಪಿ ವಿವಿ
Follow us
Ganapathi Sharma
|

Updated on: Nov 19, 2024 | 10:52 AM

ಬೆಂಗಳೂರು, ನವೆಂಬರ್ 19: ಕರ್ನಾಟಕದ ಏಕೈಕ ಕನ್ನಡ ವಿಶ್ವವಿದ್ಯಾಲಯವಾಗಿರುವ ಹಂಪಿ ವಿವಿಗೆ ಆರ್ಥಿಕ ಮುಗ್ಗಟ್ಟಿನಿಂದಾಗಿ 2023-24ನೇ ಶೈಕ್ಷಣಿಕ ವರ್ಷದ ಎಸ್‌ಸಿ/ಎಸ್‌ಟಿ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಬಿಡುಗಡೆ ಮಾಡುವುದು ಈವರೆಗೆ ಸಾಧ್ಯವಾಗಿಲ್ಲ. ಒಟ್ಟಾರೆಯಾಗಿ, 130 ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳು ಸ್ನಾತಕೋತ್ತರ ಮತ್ತು ಪಿಎಚ್‌ಡಿ ಅಧ್ಯಯನ ನಡೆಸುತ್ತಿದ್ದು, ಸ್ಕಾಲರ್​ಶಿಪ್​ಗಾಗಿ ಆಡಳಿತ ವಿಭಾಗದ ಅಧಿಕಾರಿಗಳಿಗೆ ಪದೇ ಪದೇ ಮನವಿ ಮಾಡಿದ್ದರೂ ಅವರ ವಿದ್ಯಾರ್ಥಿವೇತನ ಬಿಡುಗಡೆಯಾಗಿಲ್ಲ ಎಂದು ವರದಿಯಾಗಿದೆ.

ಇನ್ನೂ ಸ್ಕಾಲರ್​ಶಿಪ್ ಬಿಡುಗಡೆ ಮಾಡದಿದ್ದರೆ ಶೀಘ್ರದಲ್ಲೇ ಪ್ರತಿಭಟನೆ ನಡೆಸುವುದಾಗಿ ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದಾರೆ ಎಂದು ‘ದಿ ನ್ಯೂ ಇಂಡಿಯನ್ ಎಕ್ಸ್​​ಪ್ರೆಸ್’ ವರದಿ ತಿಳಿಸಿದೆ. ಆದಾಗ್ಯೂ, ವಿಶ್ವವಿದ್ಯಾಲಯವು ಎದುರಿಸುತ್ತಿರುವ ಹಣಕಾಸಿನ ಕೊರತೆಯೇ ಸ್ಕಾಲರ್​ಶಿಪ್ ಬಿಡುಗಡೆ ಮಾಡದಿರುವುದಕ್ಕೆ ಕಾರಣ ಎಂದು ಅಧಿಕಾರಿಗಳು ಆರೋಪಿಸಿದ್ದಾರೆ ಎಂದೂ ವರದಿ ಉಲ್ಲೇಖಿಸಿದೆ.

ಎರಡು ವರ್ಷಗಳಿಂದ ತೀವ್ರ ಆರ್ಥಿಕ ಮುಗ್ಗಟ್ಟು

ಹಂಪಿ ಕನ್ನಡ ವಿಶ್ವವಿದ್ಯಾನಿಲಯ ಕಳೆದ ಹಲವು ವರ್ಷಗಳಿಂದ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದೆ. ಇದರಿಂದಾಗಿ ವಿವಿಯ ಪ್ರತಿಷ್ಠೆಗೂ ಹೊಡೆತ ಬಿದ್ದಿದೆ. ಎರಡು ವರ್ಷಗಳ ವಿದ್ಯುತ್ ಬಿಲ್‌ ಪಾವತಿಸಲು ವಿಫಲವಾದ ಕಾರಣ ಸ್ಥಳೀಯ ವಿದ್ಯುತ್ ಸರಬರಾಜು ಕಂಪನಿ ಕೆಲವು ತಿಂಗಳ ಹಿಂದೆ ವಿಶ್ವವಿದ್ಯಾಲಯಕ್ಕೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿತ್ತು. ರಾಜ್ಯ ಸರ್ಕಾರ ಮಧ್ಯಪ್ರವೇಶಿಸಿ ಶೀಘ್ರವೇ ಬಾಕಿ ಪಾವತಿಸಲು ಕ್ರಮಕೈಗೊಳ್ಳಲಾಗುವುದು ಎಂದು ಕಂಪನಿಗೆ ಭರವಸೆ ನೀಡಿದ ನಂತರ ವಿದ್ಯುತ್ ಪೂರೈಕೆಯನ್ನು ಪುನಃಸ್ಥಾಪಿಸಲಾಯಿತು.

ಗುತ್ತಿಗೆ ಕಾರ್ಮಿಕರಿಗೆ ವೇತನವೂ ಇಲ್ಲ

ಹಂಪಿ ಕನ್ನಡ ವಿವಿಯ 100ಕ್ಕೂ ಹೆಚ್ಚು ಗುತ್ತಿಗೆ ಕಾರ್ಮಿಕರಿಗೆ ಕಳೆದ ಎಂಟು ತಿಂಗಳುಗಳಿಂದ ವೇತನ ಪಾವತಿಯಾಗಿಲ್ಲ. ಅವರಿಗೂ ಬಾಕಿ ಇರುವ ವೇತನವನ್ನು ಶೀಘ್ರವೇ ಮಂಜೂರು ಮಾಡುವುದಾಗಿ ಭರವಸೆ ನೀಡಲಾಗಿದೆ.

130 ಕ್ಕೂ ಹೆಚ್ಚು ಎಸ್‌ಸಿ/ಎಸ್‌ಟಿ ವಿದ್ಯಾರ್ಥಿಗಳು ವಿದ್ಯಾರ್ಥಿವೇತನದ ಹಣವನ್ನು ಪಡೆದಿಲ್ಲ. ಸರಕಾರ ಕೂಡಲೇ ಹಣ ಬಿಡುಗಡೆ ಮಾಡಲು ವಿಫಲವಾದರೆ ನಿರ್ವಹಣೆ ಕಷ್ಟವಾಗಲಿದೆ ಎಂದು ಎಸ್‌ಸಿ ಸಮುದಾಯದ ಸ್ನಾತಕೋತ್ತರ ವಿದ್ಯಾರ್ಥಿಯೊಬ್ಬರು ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: 1 ಕೋಟಿ ವಿದ್ಯುತ್​ ಬಿಲ್​ ಬಾಕಿ ಉಳಿಸಿಕೊಂಡ ವಿಶ್ವವಿದ್ಯಾಲಯ

ಕಳೆದ ತಿಂಗಳು ಸಚಿವರೊಬ್ಬರು ನಮ್ಮ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ್ದರು. ಅವರೊಂದಿಗೆ ಸಮಾಲೋಚನೆಯ ಸಮಯದಲ್ಲಿ, ನಾವು ವಿದ್ಯಾರ್ಥಿವೇತನದ ವಿಷಯವನ್ನು ಪ್ರಸ್ತಾಪಿಸಿದ್ದೆವು. ವಿಶ್ವವಿದ್ಯಾಲಯಕ್ಕೆ ಶೀಘ್ರದಲ್ಲೇ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಅವರು ಭರವಸೆ ನೀಡಿದ್ದರು. ವಿದ್ಯಾರ್ಥಿ ಸಂಘದವರು ಹಲವು ಬಾರಿ ಮನವಿ ಮಾಡಿದರೂ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿಲ್ಲ. ಸ್ಕಾಲರ್‌ಶಿಪ್ ನೀಡದಿದ್ದರೆ ಶೀಘ್ರ ಪ್ರತಿಭಟನೆ ನಡೆಸುತ್ತೇವೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು