ವಿದ್ಯಾರ್ಥಿಗಳಿಂದಲೇ ಶಿಕ್ಷಕರಿಗೆ ಕಿರುಕುಳ! ನಿಯಂತ್ರಣಕ್ಕೆ ನಿಯಮ ರೂಪಿಸಲು ಸಿಎಂಗೆ ಪತ್ರ ಬರೆದ ಖಾಸಗಿ ಶಿಕ್ಷಣ ಸಂಸ್ಥೆಗಳು

ಶಾಲೆಗಳಲ್ಲಿ ವಿದ್ಯಾರ್ಥಿಗಳ ದುರ್ವರ್ತನೆ ಹೆಚ್ಚುತ್ತಿದ್ದು, ಶಿಕ್ಷಕರಿಗೆ ಕಿರುಕುಳ ನೀಡುವ ಪ್ರಕರಣಗಳು ವರದಿಯಾಗುತ್ತಿವೆ. ಶಿಕ್ಷಕರು ಮತ್ತು ಶಾಲಾ ಆಡಳಿತ ಮಂಡಳಿಗಳು ಶಿಸ್ತು ಕ್ರಮಗಳ ಅನುಷ್ಠಾನಕ್ಕೆ ಆಗ್ರಹಿಸಿದ್ದು, ಈ ಬಗ್ಗೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ವಿದ್ಯಾರ್ಥಿಗಳ ನಡವಳಿಕೆಯನ್ನು ನಿಯಂತ್ರಿಸಲು ಮತ್ತು ಶಿಕ್ಷಣ ವಾತಾವರಣವನ್ನು ಸುಧಾರಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವ ಅವಶ್ಯಕತೆಯಿದೆ ಎಂದು ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ವಿದ್ಯಾರ್ಥಿಗಳಿಂದಲೇ ಶಿಕ್ಷಕರಿಗೆ ಕಿರುಕುಳ! ನಿಯಂತ್ರಣಕ್ಕೆ ನಿಯಮ ರೂಪಿಸಲು ಸಿಎಂಗೆ ಪತ್ರ ಬರೆದ ಖಾಸಗಿ ಶಿಕ್ಷಣ ಸಂಸ್ಥೆಗಳು
ಸಾಂದರ್ಭಿಕ ಚಿತ್ರ
Follow us
Vinay Kashappanavar
| Updated By: Ganapathi Sharma

Updated on: Nov 27, 2024 | 9:35 AM

ಬೆಂಗಳೂರು, ನವೆಂಬರ್ 27: ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದು ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆ ಪ್ರಥಮ ಆದ್ಯತೆ. ಆದರೆ ಇತ್ತೀಚಿನ ದಿನಗಳಲ್ಲಿ ಬಹುತೇಕ ವಿದ್ಯಾರ್ಥಿ, ವಿದ್ಯಾರ್ಥಿನಿಯರು ವಯಸ್ಸಿಗೆ ಮೀರಿ ದುರ್ವರ್ತನೆ ವರ್ತನೆಗಳನ್ನು ತೋರುತ್ತಿರುವ ಬಗ್ಗೆ ವರದಿಯಾಗುತ್ತಿದೆ. ಶಿಕ್ಷಕರಿಗೆ ವಿದ್ಯಾರ್ಥಿಗಳಿಂದಲೇ ಕಿರುಕುಳ, ಅವಹೇಳನ ಹೆಚ್ಚಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪರಿಗೆ ಶಾಲಾ ವಿದ್ಯಾರ್ಥಿಯಿಂದ ಮುಜುಗರದ ಹೇಳಿಕೆ ಬೆನ್ನಲ್ಲೇ ಈಗ ಶಾಲೆಗಳಲ್ಲಿ ಕನಿಷ್ಠ ಶಿಸ್ತು ಕ್ರಮದ ನಿಯಮಗಳ ಜಾರಿಗೆ ಒತ್ತಾಯ ಕೇಳಿ ಬಂದಿದೆ. ವಿದ್ಯಾರ್ಥಿಗಳ ನಿಯಂತ್ರಣಕ್ಕೆ ಕನಿಷ್ಠ ನಿಯಮಗಳನ್ನು, ಮಾನದಂಡಗಳನ್ನ ಶಾಲಾ ಹಂತದಲ್ಲಿ ಜಾರಿಗೆ ತರಬೇಕೆಂಬ ಒತ್ತಾಯ ಎಲ್ಲಡೆ ಕೇಳಿಬರುತ್ತಿದೆ. ಈ ಬಗ್ಗೆ ಖಾಸಗಿ ಶಾಲೆಗಳ ಸಂಘಟನೆ ಸಿಎಂಗೆ ಪತ್ರ ಬರೆದು ಮನವಿ ಮಾಡಿದೆ.

ವಿವಿಧ ಶಿಕ್ಷಣ ಸಂಸ್ಥೆಗಳಿಂದ ವಿದ್ಯಾರ್ಥಿಗಳ ದುವರ್ತನೆ ಬಗ್ಗೆ, ಶಿಕ್ಷಕರಿಗೆ ಕಿರುಕುಳ, ಅಪಮಾನ ಮಾಡುವುದು, ಅಶ್ಲೀಲವಾಗಿ ಮಾತನಾಡುವುದು ಹಾಗೂ ಹಲ್ಲೆಗಳ ಬಗ್ಗೆ ದೂರು ಕೇಳಿಬಂದಿದೆ. ಹೀಗಾಗಿ ವಿದ್ಯಾರ್ಥಿಗಳ ದುರ್ವತನೆಗೆ ಬ್ರೇಕ್ ಹಾಕುವಂತೆ ಸಿಎಂಗೆ ವಿವಿಧ ಶಿಕ್ಷಣ ಸಂಸ್ಥೆಗಳು ಪತ್ರ ಬರೆದು ಮನವಿ ಮಾಡಿವೆ.

ಖಾಸಗಿ ಶಿಕ್ಷಣ ಸಂಸ್ಥೆಗಳು ಹೇಳುವುದೇನು?

ಇತ್ತೀಚೆಗೆ ಶಾಲಾ ಕಾಲೇಜುಗಳಲ್ಲಿ ಶಿಕ್ಷಕರು ಶೋಷಣೆಗೆ ಒಳಗಾಗುತ್ತಿದ್ದಾರೆ. ವಿದ್ಯಾರ್ಥಿಗಳು ಸಾಕಷ್ಟು ಕಿರುಕುಳ ನೀಡುವ ಬಗ್ಗೆ ಆರಪಗಳು ಕೇಳಿ ಬರುತ್ತಿವೆ. ಶಿಕ್ಷಕರಿಗೆ, ಶಾಲಾ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡುತ್ತಿದ್ದಾರೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕುವಂತೆ ಖಾಸಗಿ ಶಿಕ್ಷಣ ಸಂಸ್ಥೆಗಳು ಮನವಿ ಮಾಡಿವೆ ಎಂದು ಕ್ಯಾಮ್ಸ್ ಖಾಸಗಿ ಶಾಲೆಗಳ ಸಂಘಟನೆ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ತಿಳಿಸಿದ್ದಾರೆ.

ಬಹುತೇಕ ಶಿಕ್ಷಣ ಸಂಸ್ಥೆಗಳು, ಶಿಕ್ಷಕರು, ಪಾಲಕ, ಪೋಷಕರು ಪ್ರಸ್ತುತ ಪರಿಸ್ಥಿತಿಯನ್ನು ನಿಭಾಯಿಸಲಾಗದೆ ಅಸಹಾಯಕತೆ ವ್ಯಕ್ತಪಡಿಸುತ್ತಿರುವುದು ಪ್ರತಿಯೊಂದು ಶಿಕ್ಷಣ ಸಂಸ್ಥೆಯಲ್ಲೂ ವರದಿಯಾಗುತ್ತಿದೆ ಎನ್ನಲಾಗಿದೆ. ಇಂತಹ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಪರಿಗಣಿಸಿ ಮಕ್ಕಳಿಗೆ ಅನ್ಯಾಯ ಆಗದೇ ಇರುವ ರೀತಿಯಲ್ಲಿ ಹಾಗೂ ಶಿಕ್ಷಣ ವ್ಯವಸ್ಥೆಗೆ ಚ್ಯುತಿ ಬರದೇ ನೋಡಿಕೊಳ್ಳವಂತೆ ಪತ್ರದಲ್ಲಿ ಮನವಿ ಮಾಡಲಾಗಿದೆ.

ಇದನ್ನೂ ಓದಿ: ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಮಧು ಅಸ್ತ್ರ: ಸ್ಟುಪಿಡ್‌ ಎಂದ ಬಿಜೆಪಿ

ಒಟ್ಟಿನಲ್ಲಿ, ಸಣ್ಣಪುಟ್ಟ ಕಾರಣಗಳಿಗೆ ಮಕ್ಕಳ ಹಕ್ಕುಗಳ ಆಯೋಗ ಮಧ್ಯ ಪ್ರವೇಶಿಸುತ್ತಿರುವುದು, ಪೋಷಕರು ಹಾಗೂ ಶಿಕ್ಷಣ ಇಲಾಖೆಯ ಕಠಿಣ ನಿಯಮಗಳಿಂದಾಗಿ ಶಿಕ್ಷಕರಿಗೆ ಸ್ವಾತಂತ್ರ್ಯ ಇಲ್ಲದಾಗಿದೆ. ಮಕ್ಕಳಿಗೆ ಕನಿಷ್ಠ ಬೈದು ಬುದ್ಧಿ ಹೇಳುವುದಕ್ಕೂ ಆಗದೇ ಇರುವ ಸ್ಥಿತಿಗೆ ಖಾಸಗಿ ಶಾಲೆಗಳು ಹಾಗೂ ಶಿಕ್ಷಕರು ಬಂದಿದ್ದು ಅನೇಕ ಶಿಕ್ಷಕರು ಬೇಸತ್ತು ಹೋಗಿದ್ದಾರೆ. ಹೀಗಾಗಿ ಶಾಲೆಗಳಲ್ಲಿ ಕನಿಷ್ಠ ಶಿಸ್ತು ಕ್ರಮದ ನಿಯಮಗಳ ಜಾರಿಗೆ ಒತ್ತಾಯ ಕೇಳಿಬಂದಿದೆ. ಶಿಕ್ಷಣ ಇಲಾಖೆ ಯಾವ ನಡೆಗೆ ಮುಂದಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ