AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರೀಶ್ ಪೂಂಜಾ ವಿರುದ್ಧ ಕೇಸ್​: ಬೆಂಗಳೂರಿನತ್ತ ಹೊರಟ ಶಾಸಕ, ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಸಾಧ್ಯತೆ

ಶಾಸಕ ಹರೀಶ್ ಪೂಂಜಾ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ. ನಿನ್ನೆ ಠಾಣಾ ಜಾಮೀನಿನ ಮೇಲೆ ಪೂಂಜಾ ಬಿಡುಗಡೆ ಮಾಡಲಾಗಿತ್ತು. ಮತ್ತೆ ವಿಚಾರಣೆಗೆ ಹಾಜರಾಗಲು ಪೊಲೀಸರು ನೋಟಿಸ್​ ಕೊಟ್ಟಿದ್ದರು. ಹೀಗಾಗಿ ನೋಟಿಸ್​ ಪ್ರಶ್ನಿಸಿ ಹೈಕೋರ್ಟ್​​ನಲ್ಲಿ ಅರ್ಜಿ ಸಲ್ಲಿಕೆ ಸಾಧ್ಯತೆ ಇದೆ. ಈ ಹಿನ್ನೆಲೆ ಇದೀಗ ಹರೀಶ್ ಪೂಂಜಾ ಬೆಂಗಳೂರಿನತ್ತ ಹೊರಟಿದ್ದಾರೆ.  

ಹರೀಶ್ ಪೂಂಜಾ ವಿರುದ್ಧ ಕೇಸ್​: ಬೆಂಗಳೂರಿನತ್ತ ಹೊರಟ ಶಾಸಕ, ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಸಾಧ್ಯತೆ
ಹರೀಶ್ ಪೂಂಜಾ ವಿರುದ್ಧ ಕೇಸ್​: ಬೆಂಗಳೂರಿನತ್ತ ಹೊರಟ ಶಾಸಕ, ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಸಾಧ್ಯತೆ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: May 23, 2024 | 3:10 PM

Share

ಬೆಂಗಳೂರು, ಮೇ 23: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ (Harish Poonja) ಮೇಲೆ ಮತ್ತೆ ಎಫ್.ಐ‌.ಆರ್ ಆಗಿದೆ. ಬೆಳ್ತಂಗಡಿ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 353, 504ರಡಿ ಹರೀಶ್ ಪೂಂಜಾ ವಿರುದ್ಧ ಕರ್ತವ್ಯಕ್ಕೆ ಅಡ್ಡಿ ಮತ್ತು ಅವಾಚ್ಯ ಶಬ್ದಗಳಿಂದ ನಿಂದನೆ ಅಂತಾ ದೂರು ದಾಖಲಾಗಿದೆ‌. ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಹರೀಶ್ ಪೂಂಜಾ ನಿವಾಸದ ಬಳಿ ಹೈಡ್ರಾಮಾಮೇ ನಡೆದಿತ್ತು. ಬಂಧಿಸಲು ಆಗಮಿಸಿದ್ದ ಪೊಲೀಸರು ಕೊನೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ನೀಡಿ ತೆರಳಿದ್ದರು. ಇದೀಗ ಬೆಂಗಳೂರಿನತ್ತ ಹೊರಟಿರುವ ಹರೀಶ್ ಪೂಂಜಾ ಕೇಸ್​ ರದ್ದು ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆ ಇದೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ. ನಿನ್ನೆ ಠಾಣಾ ಜಾಮೀನಿನ ಮೇಲೆ ಪೂಂಜಾ ಬಿಡುಗಡೆ ಮಾಡಲಾಗಿತ್ತು. ಮತ್ತೆ ವಿಚಾರಣೆಗೆ ಹಾಜರಾಗಲು ಪೊಲೀಸರು ನೋಟಿಸ್​ ಕೊಟ್ಟಿದ್ದರು. ಹೀಗಾಗಿ ನೋಟಿಸ್​ ಪ್ರಶ್ನಿಸಿ ಹೈಕೋರ್ಟ್​​ನಲ್ಲಿ ಅರ್ಜಿ ಸಲ್ಲಿಕೆ ಸಾಧ್ಯತೆ ಇದೆ.

ಇದನ್ನೂ ಓದಿ: Harish Poonja: ಹೈಡ್ರಾಮಾಕ್ಕೆ ತೆರೆ: ಬಂಧಿಸದೆ ವಾಪಸಾದ ಪೊಲೀಸರು, ಹರೀಶ್ ಪೂಂಜಾ ಹೇಳಿದ್ದಿಷ್ಟು

ನಿನ್ನೆ ಇಡೀ ದಿನ ಹೈಡ್ರಾಮಾವೇ ನಡೆಯಿತು. ಪೊಲೀಸಿರುವ ಧಮ್ಕಿ ಹಾಕಿದ ಆರೋಪದಡಿ 2 FIR ದಾಖಲಿಸಿದ್ದ ಪೊಲೀಸರು ಹರೀಶ್ ಪೂಂಜಾ ಬಂಧಿಸಲು ನಿವಾಸಕ್ಕೆ ಬಂದಿದ್ದರು. ಆದರೆ ಇಡೀ ದಿನ ಬಿಜೆಪಿ ಕಾರ್ಯಕರ್ತರು, ಬೆಂಬಲಿಗರ ಪ್ರತಿಭಟನೆ ಹೈಡ್ರಾಮಾ ನಡೆದಿತ್ತು. ಕೊನೆಗೆ ಸಂಜೆ ನಂತರ ಶಾಸಕ ಹರೀಶ್ ಪೂಂಜಾ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು.

ಪೂಂಜಾಗೆ ಶಾಸಕರಾದ ಸುನೀಲ್ ಕುಮಾರ್, ವೇದವ್ಯಾಸ ಕಾಮತ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲಾ ಸೇರಿದಂತೆ ಬಿಜೆಪಿ ನಾಯಕರು ವಕೀಲರು ಸಾಥ್ ನೀಡಿದ್ದರು. ಪೊಲೀಸರು ಸರ್ಕಾರದ ಕೈಗೊಂಬೆಯಾಗಿದ್ದಾರೆ ಅಂತಾ ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ತನ್ನನ್ನು ಬಂಧಿಸುವುದು ಕಾನೂನುಬಾಹಿರ ಅಂತ ಗೊತ್ತಿದ್ದ ಪೊಲೀಸರು ಮೇಲಿನವರ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದರು: ಹರೀಶ್ ಪೂಂಜಾ

ಇನ್ನು, ವಿಚಾರಣೆಗೆ ಹಾಜರಾಗಿದ್ದ ಹರೀಶ್ ಪೂಂಜಾಗೆ ಇವತ್ತು ಮಧ್ಯಾಹ್ನ 12ಗಂಟೆಗೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಬೆಳ್ತಂಗಡಿ ಠಾಣೆ ಇನ್ಸ್‌ಪೆಕ್ಟರ್‌ ನೋಟಿಸ್ ನೀಡಿದ್ದರು. ಆದರೆ ಸಾಧ್ಯವಿಲ್ಲ ಅಂತಾ ಮೌಖಿಕವಾಗಿ ತಿಳಿಸಿ ಬಂದ್ದರು. ಅಷ್ಟೇ ಅಲ್ಲ ದಕ್ಷಿಣ ಕನ್ನಡ ಎಸ್‌ಪಿ ಬಗ್ಗೆ ಮಾತನಾಡಿದ್ದಕ್ಕೆ ಸಮರ್ಥಿಸಿಕೊಂಡಿದ್ದರು. ಈ ವೇಳೆ ಮಾತನಾಡಿದ ಶಾಸಕ ಸುನೀಲ್ ಕುಮಾರ್ ಈ ವಿಚಾರವನ್ನ ಇಲ್ಲಿಗೆ ಬಿಡಲ್ಲ ಎಂದು ಹೇಳಿದ್ದರು.

ಪ್ರಕರಣದ ಹಿನ್ನೆಲೆ

ಈ ಪ್ರಕರಣದ ಹಿನ್ನೆಲೆ ನೋಡೋದಾದ್ರೆ ಹರೀಶ್ ಪೂಂಜಾ ಬೆಂಬಲಿಗರು ಮೆಲಂತಬೆಟ್ಟುವಿನಲ್ಲಿ ಅಕ್ರಮವಾಗಿ ಕಲ್ಲುಗಣಿಗಾರಿಕೆ ನಡೆಸುತ್ತಿದ್ದರು ಅಂತಾ ಆರೋಪಿಸಿ ಬೆಳ್ತಂಗಡಿ ತಹಶಿಲ್ದಾರ್ ದಾಳಿ ಮಾಡಿದ್ದರು. ಸ್ಫೋಟಕ ಬಳಸಿ ಅಕ್ರಮ ಗಣಿಗಾರಿಕೆ ಮಾಡಲಾಗುತ್ತಿದೆ ಎಂದು ಮೇ 18 ರಂದು ದೂರು ನೀಡಿದ್ದರು.

ಶಾಸಕ ಹರೀಶ್ ಪೂಂಜಾ ಆಪ್ತರಾದ ಪ್ರಮೋದ್ ಉಜಿರೆ ಮತ್ತು ಶಶಿರಾಜ್ ಶೆಟ್ಟಿ ಮೇಲೆ ದೂರು ದಾಖಲಾಗಿತ್ತು‌. ಬಿಜೆಪಿ ತಾಲೂಕು ಯುವಮೋರ್ಚಾ ಅಧ್ಯಕ್ಷ, ರೌಡಿಶೀಟರ್ ಆಗಿದ್ದ ಶಶಿರಾಜ್ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದರು. ಈ ವಿಚಾರ ತಿಳಿದ ಪೂಂಜಾ ಪೊಲೀಸರ ವಿರುದ್ಧ ಕೆಂಡಮಂಡಲರಾಗಿದ್ದರು. ಮದ್ಯರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ್ದರು. ಈ ವೇಳೆ ಪಿಎಸ್‌ಐಗೆ ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಣ್ಣದ ಬದುಕಿನ ಅನುಭವ ಬಿಚ್ಚಿಟ್ಟ ರಂಗಾಯಣ ರಘು!
ಬಣ್ಣದ ಬದುಕಿನ ಅನುಭವ ಬಿಚ್ಚಿಟ್ಟ ರಂಗಾಯಣ ರಘು!
ಮೈಸೂರಿನಲ್ಲಿ ಟಿಟಿ ವಾಹನದ ಮೇಲೆ ಬಿದ್ದ ದೀಪಾಲಂಕಾರದ ಕಟೌಟ್
ಮೈಸೂರಿನಲ್ಲಿ ಟಿಟಿ ವಾಹನದ ಮೇಲೆ ಬಿದ್ದ ದೀಪಾಲಂಕಾರದ ಕಟೌಟ್