ಮನೆ ತೆರವು ಕೇಸ್: ಅರಣ್ಯಾಧಿಕಾರಿಗಳ ವಿರುದ್ಧ ಹಕ್ಕುಚ್ಯುತಿ ಮಂಡಿಸಿದ ಶಾಸಕ ಹರೀಶ್​​ ಪೂಂಜಾ

ಬಿಜೆಪಿ ಶಾಸಕ ಹರೀಶ್​​ ಪೂಂಜಾ ವಿಧಾನಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕಳೆಂಜದಲ್ಲಿ ಅರಣ್ಯಾಧಿಕಾರಿಗಳಿಂದ ಮನೆ ತೆರವು ಪ್ರಕರಣವನ್ನು ಪ್ರಸ್ತಾಪಿಸಿದ್ದಾರೆ. ಅರಣ್ಯಾಧಿಕಾರಿಗಳ ವಿರುದ್ಧ ಹರೀಶ್​​ ಪೂಂಜಾ ಹಕ್ಕುಚ್ಯುತಿ ಮಂಡಿಸಿದ್ದಾರೆ. ಅರಣ್ಯ ಇಲಾಖೆಯ ಮೂವರು ಅಧಿಕಾರಿಗಳ ಅಮಾನತಿಗೆ ಆಗ್ರಹಿಸಲಾಗಿದೆ.ಹರೀಶ್​ ಪೂಂಜಾ ವಿರುದ್ಧ FIR ವಾಪಸ್​​ಗೆ ಬಿಜೆಪಿ ಆಗ್ರಹಿಸಿದ್ದಾರೆ.

ಮನೆ ತೆರವು ಕೇಸ್: ಅರಣ್ಯಾಧಿಕಾರಿಗಳ ವಿರುದ್ಧ ಹಕ್ಕುಚ್ಯುತಿ ಮಂಡಿಸಿದ ಶಾಸಕ ಹರೀಶ್​​ ಪೂಂಜಾ
BJP ಶಾಸಕ ಹರೀಶ್ ಪೂಂಜಾ
Follow us
ಕಿರಣ್​ ಹನಿಯಡ್ಕ
| Updated By: ಗಂಗಾಧರ​ ಬ. ಸಾಬೋಜಿ

Updated on: Dec 05, 2023 | 5:18 PM

ವಿಧಾನಸಭೆ, ಡಿಸೆಂಬರ್​ 05: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕಳೆಂಜದಲ್ಲಿ ಅರಣ್ಯಾಧಿಕಾರಿಗಳಿಂದ ಮನೆ ತೆರವು ಪ್ರಕರಣವನ್ನು ಬಿಜೆಪಿ ಶಾಸಕ ಹರೀಶ್​​ ಪೂಂಜಾ (Harish Poonja) ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದು, ಹಕ್ಕುಚ್ಯುತಿ ಮಂಡನೆಗೆ ಮುಂದಾಗಿದ್ದರು. ಆದರೆ ಈ ವೇಳೆ ಬರಗಾಲ ಚರ್ಚೆ ಆರಂಭಿಸಿ ಎಂದು ಸ್ಪೀಕರ್ ಯು.ಟಿ.ಖಾದರ್​​ ಹೇಳಿದ್ದಾರೆ. ಅವಕಾಶ ನೀಡದ್ದಕ್ಕೆ ಸಿಟ್ಟಿಗೆದ್ದ ಶಾಸಕ ಪೂಂಜಾ ಸದನದ ಬಾವಿಗಿಳಿದು ಜೆಡಿಎಸ್​, ಬಿಜೆಪಿ ಸದಸ್ಯರಿಂದ ಪ್ರತಿಭಟನೆ ಮಾಡಿದ್ದಾರೆ. ಬಳಿಕ ಹಕ್ಕುಚ್ಯುತಿ ಪ್ರಸ್ತಾಪಕ್ಕೆ ಸ್ಪೀಕರ್ ಖಾದರ್ ಅವಕಾಶ ನೀಡಿದ್ದು,​ ಬಳಿಕ ವಿಪಕ್ಷ ಸದಸ್ಯರು ಧರಣಿ ಹಿಂಪಡೆದಿದ್ದಾರೆ.

ಅರಣ್ಯಾಧಿಕಾರಿಗಳ ವಿರುದ್ಧ ಕ್ರಮಕ್ಕೆ ಸದನದಲ್ಲಿ ಪಕ್ಷಾತೀತ ಆಗ್ರಹಿಸಿದ್ದು, ಹಕ್ಕುಬಾಧ್ಯತಾ ಸಮಿತಿಗೆ ಸ್ಪೀಕರ್ ಖಾದರ್ ಶಿಫಾರಸು ಮಾಡಿದ್ದಾರೆ.​ ಅರಣ್ಯ ಇಲಾಖೆಯ ಮೂವರು ಅಧಿಕಾರಿಗಳ ಅಮಾನತಿಗೆ ಆಗ್ರಹಿಸಲಾಗಿದೆ. ಶಾಸಕ ಹರೀಶ್​ ಪೂಂಜಾ ವಿರುದ್ಧ FIR ವಾಪಸ್​​ಗೆ ಬಿಜೆಪಿ ಆಗ್ರಹಿಸಿದ್ದು, ಎಫ್​ಐಆರ್ ಆಗಿಲ್ಲ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. FIR ದಾಖಲಾಗಿದ್ದರೆ ಹಿಂಪಡೆಯಿರಿ ಎಂದು ಬಿಜೆಪಿ ಸದಸ್ಯರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ‘ಕಲೆಕ್ಷನ್ ಮಾಸ್ಟರ್’ಎಂದು ಸಿಎಂ ಸಿದ್ದರಾಮಯ್ಯ ಫೋಟೋ ಪೋಸ್ಟ್: ಶಾಸಕ ಹರೀಶ್ ಪೂಂಜ ವಿರುದ್ಧ FIR

ಪೂಂಜಾ ದೂರವಾಣಿ ಮಾತುಕತೆಯನ್ನು ರೆಕಾರ್ಡ್​ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಖಂಡ್ರೆ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ವಿಪಕ್ಷ ಸದಸ್ಯರಿಂದ ಧರಣಿ ಮಾಡಿದ್ದು, ಈ ವೇಳೆ ಯತ್ನಾಳ್​, ಎಸ್​.ಟಿ.ಸೋಮಶೇಖರ್ ಆಸನದಲ್ಲೇ ಕುಳಿತಿದ್ದರು. ​​

ಇದು ಅಧಿಕಾರಿಗಳ ರಾಜ್ಯವೇ ಎಂದು ವಿಪಕ್ಷ ನಾಯಕ ಅಶೋಕ್ ಪ್ರಶ್ನೆ

ವಿಪಕ್ಷ ನಾಯಕ ಅಶೋಕ್​ ಮಾತನಾಡಿ, ಇದು ಅಧಿಕಾರಿಗಳ ರಾಜ್ಯವೇ ಎಂದು ಪ್ರಶ್ನೆ ಮಾಡಿದ್ದಾರೆ. ಒಬ್ಬ ಶಾಸಕನ ಬಳಿ ಡಿಎಫ್​ಒ ಮುಚ್ಚಳಿಕೆ ಬರೆಸಿಕೊಳ್ಳುತ್ತಾನೆ. ಶಾಸಕರು ಯಾಕೆ ಇರಬೇಕು, ಇಲ್ಲಿ ಅಧಿಕಾರ ಯಾರಿಗೂ ಶಾಶ್ವತ ಅಲ್ಲ. ನಾವು ಆ ಕಡೆ ಬರುತ್ತೇವೆ, ನೀವು ಈ ಕಡೆ ಬರುತ್ತೀರಿ. ಅಧಿಕಾರಿಗಳ ಕೈಗೆ ಎಲ್ಲವನ್ನೂ ನೀಡಬೇಡಿ, ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅರಣ್ಯ ಭೂಮಿ ಒತ್ತುವರಿ, ಆರ್​ಎಫ್​ಓಗೆ ಕರ್ತವ್ಯಕ್ಕೆ ಅಡ್ಡಿ; ಶಾಸಕರ ವಿರುದ್ದ ಈಶ್ವರ್ ಖಂಡ್ರೆಗೆ ದೂರು

ಕ್ರಿಯಾಲೋಪ ಎತ್ತಿದ ಕಾರ್ಕಳ ಬಿಜೆಪಿ ಶಾಸಕ ಸುನೀಲ್ ಕುಮಾರ್​ ಸಚಿವರ ಉತ್ತರ ವಿರೋಧಿಸಿ ಹಕ್ಕುಚ್ಯುತಿ ಸಮಿತಿಗೆ ಒಪ್ಪಿಸುವಂತೆ ಆಗ್ರಹಿಸಿದ್ದಾರೆ. ಸದನದ ಬಾವಿಗಿಳಿದು ಬಿಜೆಪಿ ಸದಸ್ಯರಿಂದ ಧರಣಿ, ಧಿಕ್ಕಾರ ಘೋಷಣೆ ಹಾಕಲಾಗಿದೆ. ಸಚಿವರ ಉತ್ತರದ ಬಳಿಕ ರೂಲಿಂಗ್ ನೀಡುವುದಾಗಿ ಸ್ಪೀಕರ್ ಹೇಳಿದ್ದಾರೆ. ಬಳಿಕ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಧರಣಿ ಹಿಂಪಡೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ