ವಿಧಾನಸಭೆ, ಡಿಸೆಂಬರ್ 05: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕಳೆಂಜದಲ್ಲಿ ಅರಣ್ಯಾಧಿಕಾರಿಗಳಿಂದ ಮನೆ ತೆರವು ಪ್ರಕರಣವನ್ನು ಬಿಜೆಪಿ ಶಾಸಕ ಹರೀಶ್ ಪೂಂಜಾ (Harish Poonja) ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದು, ಹಕ್ಕುಚ್ಯುತಿ ಮಂಡನೆಗೆ ಮುಂದಾಗಿದ್ದರು. ಆದರೆ ಈ ವೇಳೆ ಬರಗಾಲ ಚರ್ಚೆ ಆರಂಭಿಸಿ ಎಂದು ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ. ಅವಕಾಶ ನೀಡದ್ದಕ್ಕೆ ಸಿಟ್ಟಿಗೆದ್ದ ಶಾಸಕ ಪೂಂಜಾ ಸದನದ ಬಾವಿಗಿಳಿದು ಜೆಡಿಎಸ್, ಬಿಜೆಪಿ ಸದಸ್ಯರಿಂದ ಪ್ರತಿಭಟನೆ ಮಾಡಿದ್ದಾರೆ. ಬಳಿಕ ಹಕ್ಕುಚ್ಯುತಿ ಪ್ರಸ್ತಾಪಕ್ಕೆ ಸ್ಪೀಕರ್ ಖಾದರ್ ಅವಕಾಶ ನೀಡಿದ್ದು, ಬಳಿಕ ವಿಪಕ್ಷ ಸದಸ್ಯರು ಧರಣಿ ಹಿಂಪಡೆದಿದ್ದಾರೆ.
ಅರಣ್ಯಾಧಿಕಾರಿಗಳ ವಿರುದ್ಧ ಕ್ರಮಕ್ಕೆ ಸದನದಲ್ಲಿ ಪಕ್ಷಾತೀತ ಆಗ್ರಹಿಸಿದ್ದು, ಹಕ್ಕುಬಾಧ್ಯತಾ ಸಮಿತಿಗೆ ಸ್ಪೀಕರ್ ಖಾದರ್ ಶಿಫಾರಸು ಮಾಡಿದ್ದಾರೆ. ಅರಣ್ಯ ಇಲಾಖೆಯ ಮೂವರು ಅಧಿಕಾರಿಗಳ ಅಮಾನತಿಗೆ ಆಗ್ರಹಿಸಲಾಗಿದೆ. ಶಾಸಕ ಹರೀಶ್ ಪೂಂಜಾ ವಿರುದ್ಧ FIR ವಾಪಸ್ಗೆ ಬಿಜೆಪಿ ಆಗ್ರಹಿಸಿದ್ದು, ಎಫ್ಐಆರ್ ಆಗಿಲ್ಲ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. FIR ದಾಖಲಾಗಿದ್ದರೆ ಹಿಂಪಡೆಯಿರಿ ಎಂದು ಬಿಜೆಪಿ ಸದಸ್ಯರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ‘ಕಲೆಕ್ಷನ್ ಮಾಸ್ಟರ್’ಎಂದು ಸಿಎಂ ಸಿದ್ದರಾಮಯ್ಯ ಫೋಟೋ ಪೋಸ್ಟ್: ಶಾಸಕ ಹರೀಶ್ ಪೂಂಜ ವಿರುದ್ಧ FIR
ಪೂಂಜಾ ದೂರವಾಣಿ ಮಾತುಕತೆಯನ್ನು ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಖಂಡ್ರೆ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ವಿಪಕ್ಷ ಸದಸ್ಯರಿಂದ ಧರಣಿ ಮಾಡಿದ್ದು, ಈ ವೇಳೆ ಯತ್ನಾಳ್, ಎಸ್.ಟಿ.ಸೋಮಶೇಖರ್ ಆಸನದಲ್ಲೇ ಕುಳಿತಿದ್ದರು.
ವಿಪಕ್ಷ ನಾಯಕ ಅಶೋಕ್ ಮಾತನಾಡಿ, ಇದು ಅಧಿಕಾರಿಗಳ ರಾಜ್ಯವೇ ಎಂದು ಪ್ರಶ್ನೆ ಮಾಡಿದ್ದಾರೆ. ಒಬ್ಬ ಶಾಸಕನ ಬಳಿ ಡಿಎಫ್ಒ ಮುಚ್ಚಳಿಕೆ ಬರೆಸಿಕೊಳ್ಳುತ್ತಾನೆ. ಶಾಸಕರು ಯಾಕೆ ಇರಬೇಕು, ಇಲ್ಲಿ ಅಧಿಕಾರ ಯಾರಿಗೂ ಶಾಶ್ವತ ಅಲ್ಲ. ನಾವು ಆ ಕಡೆ ಬರುತ್ತೇವೆ, ನೀವು ಈ ಕಡೆ ಬರುತ್ತೀರಿ. ಅಧಿಕಾರಿಗಳ ಕೈಗೆ ಎಲ್ಲವನ್ನೂ ನೀಡಬೇಡಿ, ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಅರಣ್ಯ ಭೂಮಿ ಒತ್ತುವರಿ, ಆರ್ಎಫ್ಓಗೆ ಕರ್ತವ್ಯಕ್ಕೆ ಅಡ್ಡಿ; ಶಾಸಕರ ವಿರುದ್ದ ಈಶ್ವರ್ ಖಂಡ್ರೆಗೆ ದೂರು
ಕ್ರಿಯಾಲೋಪ ಎತ್ತಿದ ಕಾರ್ಕಳ ಬಿಜೆಪಿ ಶಾಸಕ ಸುನೀಲ್ ಕುಮಾರ್ ಸಚಿವರ ಉತ್ತರ ವಿರೋಧಿಸಿ ಹಕ್ಕುಚ್ಯುತಿ ಸಮಿತಿಗೆ ಒಪ್ಪಿಸುವಂತೆ ಆಗ್ರಹಿಸಿದ್ದಾರೆ. ಸದನದ ಬಾವಿಗಿಳಿದು ಬಿಜೆಪಿ ಸದಸ್ಯರಿಂದ ಧರಣಿ, ಧಿಕ್ಕಾರ ಘೋಷಣೆ ಹಾಕಲಾಗಿದೆ. ಸಚಿವರ ಉತ್ತರದ ಬಳಿಕ ರೂಲಿಂಗ್ ನೀಡುವುದಾಗಿ ಸ್ಪೀಕರ್ ಹೇಳಿದ್ದಾರೆ. ಬಳಿಕ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಧರಣಿ ಹಿಂಪಡೆದಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.