AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಜೆಡಿಎಸ್​ನ ಮತ್ತೊಂದು ವಿಕೆಟ್‌ ಪತನ, ಕಾಂಗ್ರೆಸ್​ ಸೇರೊ ಬಗ್ಗೆ ಮಾತನಾಡಿದ ಶಾಸಕನ ಆಡಿಯೋ ವೈರಲ್​

ಚುನಾವಣೆಗೆ ಕೆಲವೇ ತಿಂಗಳು ಬಾಕಿಯಿದ್ದು, ರಾಜಕೀಯ ಅಖಾಡ ರಂಗೇರುತ್ತಿದೆ. ಈ ಮಧ್ಯೆ ಅರಸೀಕೆರೆ ಜೆಡಿಎಸ್​ ಶಾಸಕ‌ ಶಿವಲಿಂಗೇಗೌಡರದ್ದು ಎನ್ನಲಾದ ಆಡಿಯೋ ವೈರಲ್​ ಆಗಿದ್ದು, ರಾಜ್ಯ ರಾಜಕಾರಣದಲ್ಲಿ ಬಾರಿ ಸಂಚಲನ ಮೂಡಿಸಿದೆ.

ಹಾಸನ: ಜೆಡಿಎಸ್​ನ ಮತ್ತೊಂದು ವಿಕೆಟ್‌ ಪತನ, ಕಾಂಗ್ರೆಸ್​ ಸೇರೊ ಬಗ್ಗೆ ಮಾತನಾಡಿದ ಶಾಸಕನ ಆಡಿಯೋ ವೈರಲ್​
ಜೆಡಿಎಸ್​ ತೊರೆದು ಕಾಂಗ್ರೆಸ್​ ಸೇರುವುದರ ಬಗ್ಗೆ ಮಾತನಾಡಿದ ಶಾಸಕ ಶಿವಲಿಂಗೇಗೌಡ
TV9 Web
| Edited By: |

Updated on: Feb 09, 2023 | 9:52 AM

Share

ಹಾಸನ: ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜಕೀಯ ಅಖಾಡ ರಂಗೇರುತ್ತಿದೆ. ಕೆಲವರು ಟಿಕೆಟ್​ಗಾಗಿ ಹೋರಾಡುತ್ತಿದ್ದರೆ ಇನ್ನು ಕೆಲವರು ಕ್ಷೇತ್ರವನ್ನ ಗಟ್ಟಿಮಾಡಿಕೊಳ್ಳುವುದರಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ ಅರಸೀಕೆರೆ ಜೆಡಿಎಸ್​ ಶಾಸಕ‌ ಶಿವಲಿಂಗೇಗೌಡರದ್ದು ಎನ್ನಲಾದ ಆಡಿಯೋ ವೈರಲ್​ ಆಗಿದೆ. ಇದರಲ್ಲಿ ಜೆಡಿಎಸ್​ ತೊರೆದು ಕಾಂಗ್ರೆಸ್ ಸೇರೊ ಬಗ್ಗೆ ಮಾತಾಡಿದ್ದು, ನಾನು ಕಾಂಗ್ರೆಸ್ ಸೇರಿದ್ರೆ ಐವತ್ತು ಸಾವಿರ ಲೀಡಲ್ಲಿ ಗೆಲ್ತಿನಿ ಎಂದಿದ್ದಾರೆ. ಇದೀಗ ಇದು ರಾಜ್ಯ ರಾಜಕಾರಣದಲ್ಲಿ ಬಾರಿ ಸಂಚಲನ ಮೂಡಿಸಿದೆ. ರೇವಣ್ಣ ಕುಮಾರಸ್ವಾಮಿ ಹೆಸರು ಪ್ರಸ್ತಾಪ ಮಾಡದೆ ಯಾರಲ್ಲ ಯಾವನಪ್ಪ ಬಂದ್ರು ನಾ ಗೆಲ್ತಿನಿ ಎಂದಿದ್ದಾರೆ.

ಶಾಸಕ ಶಿವಲಿಂಗೇಗೌಡ ಕಳೆದ ಒಂದು ವರ್ಷದಿಂದ ಜೆಡಿಎಸ್​ನಿಂದ ಅಂತರ ಕಾಯ್ದುಕೊಂಡಿದ್ದರು. ಶಿವಲಿಂಗೇಗೌಡ ಕಾಂಗ್ರೆಸ್​ ಸೇರ್ತಾರೆ ಎಂಬ ಬಗ್ಗೆ ವದಂತಿ ಕೂಡ ಈ ಹಿಂದೆ ಹರಡಿತ್ತು. ಕೆಪಿಸಿಸಿ ಕಾರ್ಯಾದ್ಯಕ್ಷ ಧ್ರುವನಾರಾಯಣ ಕೂಡ ಶಿವಲಿಂಗೇಗೌಡ ನಮ್ಮ ಪಾರ್ಟಿ ಸೇರ್ತಾರೆ ಎಂದು ಹೇಳಿದ್ರು, ಆದರೂ ಇದುವರೆಗೆ ಸುಳಿವು ಬಿಟ್ಟು ಕೊಡದ ಶಾಸಕ ಶಿವಲಿಂಗೇಗೌಡ. ಇದೀಗ ತಾವು ಕಾಂಗ್ರೆಸ್ ಸೇರಿದ್ರೆ ದೊಡ್ಡ ಮಟ್ಟದ ಲೀಡಲ್ಲಿ ಗೆಲ್ತಿನಿ ಎನ್ನೋ ವಿಶ್ವಾಸದ ಕುರಿತು ಮಾತನಾಡಿದ್ದಾರೆ. ತಮ್ಮ ಕಾರ್ಯಕರ್ತರ ಜೊತೆ ಮಾತನಾಡುವಾಗ ಕಾಂಗ್ರೆಸ್ ಸೇರೋ ಬಗ್ಗೆ ಪ್ರಸ್ತಾಪ ಮಾಡಿದ್ದರು. ಕಳೆದ ಆರು ತಿಂಗಳಿಂದ ನಡೆಯುತ್ತಿದ್ದ ಚರ್ಚೆಗೆ ಕಡೆಗೂ ಸ್ಪಷ್ಟನೆ ಸಿಕ್ಕಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ