AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ರೌಡಿಶೀಟರ್ ಮಾಸ್ತಿಗೌಡ ಕೊಂದಿದ್ದ 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ: ಕೋರ್ಟ್ ಆದೇಶ

2023ರ ಜುಲೈ 4ರಂದು ಚನ್ನರಾಯಪಟ್ಟಣದ ಮುಖ್ಯರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ರೌಡಿಶೀಟರ್ ಮಾಸ್ತಿಗೌಡನನ್ನು ಕೊಲೆಗೈದಿದ್ದರು. ಚನ್ನರಾಯಪಟ್ಟಣ ಭಾಗದಲ್ಲಿ ರೌಡಿ ಚಟುವಟಿಕೆ ಮಟ್ಟಹಾಕುವ ನಿಟ್ಟಿನಲ್ಲಿ ಪೊಲೀಸರು ಕಟ್ಟುನಿಟ್ಟಿನ ಕ್ರಮ ವಹಿಸಿದ್ದಾರೆ. ಅಂದಿನ ಎಸ್ಪಿ ಹರಿರಾಮ್ ಶಂಕರ್ ಅವರ ಪರಿಶ್ರಮದಿಂದ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಲಾಗಿದೆ. 

ಹಾಸನ: ರೌಡಿಶೀಟರ್ ಮಾಸ್ತಿಗೌಡ ಕೊಂದಿದ್ದ 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ: ಕೋರ್ಟ್ ಆದೇಶ
ಹಾಸನ: ರೌಡಿಶೀಟರ್ ಮಾಸ್ತಿಗೌಡ ಕೊಂದಿದ್ದ 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ: ಕೋರ್ಟ್ ಆದೇಶ
ಮಂಜುನಾಥ ಕೆಬಿ
| Updated By: ಗಂಗಾಧರ​ ಬ. ಸಾಬೋಜಿ|

Updated on: May 07, 2024 | 10:18 PM

Share

ಹಾಸನ, ಮೇ 07: ರೌಡಿಶೀಟರ್ (rowdy sheeter)​ ಮಾಸ್ತಿಗೌಡ ಕೊಂದಿದ್ದ ರೌಡಿಶೀಟರ್ ಯಾಚೇನಹಳ್ಳಿ ಚೇತು ಸೇರಿ 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಜಿಲ್ಲೆಯ ಚನ್ನರಾಯಪಟ್ಟಣದ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆದೇಶ ಹೊರಡಿಸಿದೆ. ಕೊಲೆ ನಡೆದ 10 ತಿಂಗಳಲ್ಲಿ ವಿಚಾರಣೆ ಮುಗಿಸಿ ಕೋರ್ಟ್ ತೀರ್ಪು ಪ್ರಕಟಿಸಿದೆ. ಕಲಬುರಗಿ ಜೈಲಿನಲ್ಲಿದ್ದುಕೊಂಡೇ ಯಾಚೇನಹಳ್ಳಿ ಚೇತು ಕೊಲೆ ಮಾಡಿಸಿದ್ದ. ಮಂಡ್ಯ ಶಿವು ಅಲಿಯಾಸ್ ಶಿವಕುಮಾರ್, ಉಲಿವಾಲ ಚೇತು, ರಾಕಿ ಸೇರಿದಂತೆ 9 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ನೀಡಿದೆ.

ಮತ್ತಿಬ್ಬರು ಅಪರಾಧಿಗಳಿಗೆ ತಲಾ 2.5 ವರ್ಷ ಶಿಕ್ಷೆ ವಿಧಿಸಿದೆ. ಇನ್ಸ್​ಪೆಕ್ಟರ್​ ಕೆ.ಎಂ.ವಸಂತ್ ಪ್ರಕರಣದ ತನಿಖಾಧಿಕಾರಿಯಾಗಿದ್ದ. ಚನ್ನರಾಯಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ಇದನ್ನೂ ಓದಿ: ಹಾಸನದಲ್ಲಿ ರೌಡಿಶೀಟರ್​ ಮಾಸ್ತಿಗೌಡ ಬರ್ಬರ ಹತ್ಯೆ ಕೇಸ್​: ಠಾಣೆಗೆ ಬಂದು ಶರಣಾದ ಮೂವರು ಆರೋಪಿಗಳು

2023ರ ಜುಲೈ 4ರಂದು ಚನ್ನರಾಯಪಟ್ಟಣದ ಮುಖ್ಯರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ರೌಡಿಶೀಟರ್ ಮಾಸ್ತಿಗೌಡನನ್ನು ಕೊಲೆಗೈದಿದ್ದರು. ಚನ್ನರಾಯಪಟ್ಟಣ ಭಾಗದಲ್ಲಿ ರೌಡಿ ಚಟುವಟಿಕೆ ಮಟ್ಟಹಾಕುವ ನಿಟ್ಟಿನಲ್ಲಿ ಪೊಲೀಸರು ಕಟ್ಟುನಿಟ್ಟಿನ ಕ್ರಮ ವಹಿಸಿದ್ದಾರೆ. ಅಂದಿನ ಎಸ್ಪಿ ಹರಿರಾಮ್ ಶಂಕರ್ ಅವರ ಪರಿಶ್ರಮದಿಂದ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಲಾಗಿದೆ.

ಬೆಂಗಳೂರಿನಲ್ಲಿ ರೌಡಿಶೀಟರ್ ಬರ್ಬರ ಹತ್ಯೆ

ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್​ ಕಾರ್ತಿಕೇಯನ್(40) ಬರ್ಬರ ಹತ್ಯೆ ಮಾಡಲಾಗಿದೆ. ರಾಮಸ್ವಾಮಿಪಾಳ್ಯದ ನಡುರಸ್ತೆಯಲ್ಲಿ ಅಟ್ಟಾಡಿಸಿ ಕೊಲೆಗೈದು ದುಷ್ಕರ್ಮಿಗಳು ಪರಾರಿ ಆಗಿದ್ದಾರೆ. ರಕ್ತಸ್ರಾವವಾಗಿ ರಸ್ತೆಯಲ್ಲೇ ರೌಡಿಶೀಟರ್ ಕಾರ್ತಿಕೇಯನ್ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಬಾಣಸವಾಡಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಖಾಸಗಿ ಆಸ್ವತ್ರೆಯಲ್ಲಿ ಆಕಸ್ಮಿಕ ಅಗ್ನಿ ಅವಘಡ

ದೇವನಹಳ್ಳಿ: ಖಾಸಗಿ ಆಸ್ಪತ್ರೆ ಕಟ್ಟಡದಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿ ಹಿನ್ನೆಲೆ ಆಸ್ವತ್ರೆ ತುಂಬಾ ದಟ್ಟಹೊಗೆ ಆವರಿಸಿದೆ. ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ರಾಜಾನುಕುಂಟೆಯ ರಕ್ಷಾ ಆಸ್ವತ್ರೆಯಲ್ಲಿ ಘಟನೆ ನಡೆದಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಆಸ್ವತ್ರೆ ಸಿಬ್ಬಂದಿ ಹಾಗೂ ಜನ ಹೊರಗಡೆ ಓಡಿ ಬಂದಿದ್ದಾರೆ.

ಇದನ್ನೂ ಓದಿ: ಕಾಸರಗೋಡು: ಆ್ಯಂಬುಲೆನ್ಸ್ ಡಿಕ್ಕಿ: ಕಾರಿನಲ್ಲಿ ತೆರಳುತ್ತಿದ್ದ ಮೂವರ ದುರ್ಮರಣ

ದಟ್ಟ ಹೊಗೆ ಹಿನ್ನೆಲೆ ಸ್ಥಳಿಯರಲ್ಲಿ ಆತಂಕ ಮನೆ ಮಾಡಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸಲು ಯತ್ನಿಸಲಾಗಿದೆ. ಸ್ಥಳದಲ್ಲೇ ರಾಜಾನುಕುಂಟೆ ಪೊಲೀಸರು ಬಿಡುಬಿಟ್ಟಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ