Court Recruitment 2026: ಹಾಸನ ನ್ಯಾಯಾಲಯದಲ್ಲಿ ಭರ್ಜರಿ ಉದ್ಯೋಗವಕಾಶ; 10ನೇ ತರಗತಿ ಪಾಸಾಗಿದ್ರೆ ಕೂಡಲೇ ಅರ್ಜಿ ಸಲ್ಲಿಸಿ
ಹಾಸನ ಜಿಲ್ಲಾ ನ್ಯಾಯಾಲಯದಲ್ಲಿ 48 ಜವಾನ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. 10ನೇ ತರಗತಿ ಉತ್ತೀರ್ಣರಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಆಕರ್ಷಕ ವೇತನ ಶ್ರೇಣಿ ಹೊಂದಿರುವ ಈ ಸರ್ಕಾರಿ ಉದ್ಯೋಗಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 17 ಕೊನೆಯ ದಿನಾಂಕ. ಆಸಕ್ತರು ಶೀಘ್ರವೇ hassan.dcourts.gov.in ಭೇಟಿ ನೀಡಿ ಅರ್ಜಿ ಸಲ್ಲಿಸಿ.

ನೀವು ಸರ್ಕಾರಿ ಕೆಲಸದ ಹುಡುಕಾಟದಲ್ಲಿದ್ದೀರಾ? ಹಾಗಿದ್ದರೆ ನಿಮಗೊಂದು ಸಿಹಿ ಸುದ್ದಿ ಇಲ್ಲಿದೆ. ಹಾಸನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. 10ನೇ ತರಗತಿ ತೇರ್ಗಡೆಯಾದ ಅಭ್ಯರ್ಥಿಗಳಿಗೆ ಕೋರ್ಟ್ ಉದ್ಯೋಗ ಗಿಟ್ಟಿಸಿಕೊಳ್ಳಲು ಇದು ಉತ್ತಮ ಅವಕಾಶವಾಗಿದೆ.
ಹುದ್ದೆಯ ವಿವರಗಳು ಮತ್ತು ಶೈಕ್ಷಣಿಕ ಅರ್ಹತೆ:
ಹಾಸನ ಜಿಲ್ಲಾ ನ್ಯಾಯಾಲಯದಲ್ಲಿ ಒಟ್ಟು 48 ಜವಾನ (Peon) ಹುದ್ದೆಗಳು ಖಾಲಿಯಿದ್ದು, ಇವುಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ 10ನೇ ತರಗತಿ (SSLC) ಉತ್ತೀರ್ಣರಾಗಿರಬೇಕು.
ವೇತನ ಶ್ರೇಣಿ ಮತ್ತು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ:
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮಾನುಸಾರ ಮಾಸಿಕ 19,950 ರಿಂದ 37,900ರೂ. ವರೆಗೆ ಆಕರ್ಷಕ ವೇತನ ಶ್ರೇಣಿ ಸಿಗಲಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 17 ಕೊನೆಯ ದಿನಾಂಕವಾಗಿದೆ. ಕೊನೆಯ ದಿನದವರೆಗೂ ಕಾಯದೆ ಶೀಘ್ರವಾಗಿ ಅರ್ಜಿ ಸಲ್ಲಿಸುವುದು ಸೂಕ್ತ.
ಇದನ್ನೂ ಓದಿ: 15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ; ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ ಅಭ್ಯರ್ಥಿಗಳು ಹಾಸನ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ ಆದ hassan.dcourts.gov.in ಗೆ ಭೇಟಿ ನೀಡಿ, ನೇಮಕಾತಿ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿಕೊಂಡು ಆನ್‌ಲೈನ್ ಮೂಲಕವೇ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕಾಗುತ್ತದೆ. ಗರಿಷ್ಟ ವಯೋಮಿತಿ, ಅರ್ಜಿ ಶುಲ್ಕ ಹಾಗೂ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಿ.
ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:20 pm, Sun, 23 August 26




