AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಚುನಾವಣೆ ವೇಳೆ ಹಣ ಹಂಚಿಕೆ ಆರೋಪ: ಸಿಎಂ, ಡಿಸಿಎಂ ವಿರುದ್ಧ ಚುನಾವಣಾ ಆಯೋಗಕ್ಕೆ ದೇವರಾಜೇಗೌಡ ದೂರು

2024ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಶಾಸಕ ಶಿವಲಿಂಗೇಗೌಡರ ಅವರದ್ದು ಎನ್ನಲಾಗಿರುವ ಆಡಿಯೋ ವೈರಲ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧ ವಕೀಲ ದೇವರಾಜೇಗೌಡ ಅವರು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ಇದರಿಂದ ಸಿಎಂ, ಡಿಸಿಎಂಗೆ ಟೆನ್ಷನ್​ ಶುರುವಾಗಿದೆ.

ಲೋಕಸಭಾ ಚುನಾವಣೆ ವೇಳೆ ಹಣ ಹಂಚಿಕೆ ಆರೋಪ: ಸಿಎಂ, ಡಿಸಿಎಂ ವಿರುದ್ಧ ಚುನಾವಣಾ ಆಯೋಗಕ್ಕೆ ದೇವರಾಜೇಗೌಡ ದೂರು
ವಕೀಲ ದೇವರಾಜೇಗೌಡ
ಮಹೇಶ್ ಇ, ಭೂಮನಹಳ್ಳಿ
| Edited By: |

Updated on:Aug 20, 2025 | 6:27 PM

Share

ನವದೆಹಲಿ, ಆಗಸ್ಟ್ 20: ಕಳೆದ ಲೋಕಸಭಾ ಚುನಾವಣೆ (Lok Sabha Election) ಸಂದರ್ಭದಲ್ಲಿ ಹಾಸನದಲ್ಲಿ ಮತದಾರರಿಗೆ ಹಣ ಹಂಚಿಕೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ (Devarajegouda) ಅವರು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​, ರಾಜ್ಯಸಭಾ ಸದಸ್ಯ ಚಂದ್ರಶೇಖರ್ ವಿರುದ್ಧ ಆಡಿಯೋ ಕ್ಲಿಪ್, ದಾಖಲೆಗಳ ಸಮೇತ ದೂದು ನೀಡಲಾಗಿದೆ. ಅಲ್ಲದೆ, ಹಾಸನ ಸಂಸದ ಶ್ರೇಯಸ್ ಪಟೇಲ್ ವಿರುದ್ಧವೂ ಆಯೋಗಕ್ಕೆ ದೂರು ನೀಡಿದರು.

ದೂರು ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ದೇವರಾಜೇಗೌಡ, ಆಡಿಯೋ ಬೆನ್ನಲೆ ನಾನು ಸಿಬಿಐಗೆ ದೂರು ನೀಡಿದ್ದೆ. ಚುನಾವಣಾ ಆಯೋಗಕ್ಕೆ ಸಿಬಿಐ ದೂರು ವರ್ಗಾಯಿಸಿದೆ. ಆಯೋಗ ಮಾಹಿತಿ ನೀಡುವಂತೆ ನನಗೆ ಇಮೇಲ್ ಬಂದಿತ್ತು. ಇಮೇಲ್ ಹಿನ್ನೆಲೆಯಲ್ಲಿ ನಾನು ಇಂದು ಖುದ್ದು ದೆಹಲಿಗೆ ಆಗಮಿಸಿ ದಾಖಲೆಗಳನ್ನು ನೀಡಿದ್ದೇನೆ. ಇದರಲ್ಲಿ ಸಿಎಂ, ಡಿಸಿಎಂ ಹೆಸರು ಉಲ್ಲೇಖವಾಗಿವೆ.

ಇದನ್ನೂ ಓದಿ: ಲೋಕಸಭೆ ಚುನಾವಣೆಯಲ್ಲಿ ಶಿವಲಿಂಗೇಗೌಡ ಆಡಿಯೋ ವೈರಲ್​ ಕೇಸ್​: ಸಿಎಂ, ಡಿಸಿಎಂಗೆ ಸಂಕಷ್ಟ

ಏನಿದು ಪ್ರಕರಣ

2024ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್​ನ ಅಭ್ಯರ್ಥಿಯಾಗಿದ್ದ ಸಂಸದ ಶ್ರೇಯಸ್​ ಎಮ್ ಪಟೇಲ್​ ಪರವಾಗಿ ಜಿಲ್ಲೆಯಲ್ಲಿ ಹಣ ಹಂಚಿಕೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ರಾಜ್ಯಸಭಾ ಸದಸ್ಯ ಎನ್​ ಚಂದ್ರಶೇಖರ್​ ಸಮ್ಮುಖದಲ್ಲಿ ತೀರ್ಮಾನಿಸಲಾಗಿದೆ” ಎಂದು ಶಾಸಕ ಶಿವಲಿಂಗೇಗೌಡ ಅವರು ಫೋನಿನಲ್ಲಿ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್​ ಆಗಿತ್ತು.

ವೈರಲ್​ ಆದ ಆಡಿಯೋದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಹೆಸರು ಕೇಳಿಬಂದಿರುವ ಹಿನ್ನೆಲೆಯಲ್ಲಿ ಇವರುಗಳ ವಿರುದ್ಧ ದೇವರಾಜೇಗೌಡ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:01 pm, Wed, 20 August 25

24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!
ಕಿಚ್ಚನ ಎದುರೇ ಗಿಲ್ಲಿ ಗಿಲ್ಲಿ ಎಂದು ಕೂಗಿದ ಫ್ಯಾನ್ಸ್
ಕಿಚ್ಚನ ಎದುರೇ ಗಿಲ್ಲಿ ಗಿಲ್ಲಿ ಎಂದು ಕೂಗಿದ ಫ್ಯಾನ್ಸ್