ದೇವಸ್ಥಾನದಲ್ಲಿ ಕಾಲುಜಾರಿ ಬಿದ್ದ ಮಾಜಿ ಸಚಿವ ಹೆಚ್​ಡಿ ರೇವಣ್ಣ: ಪಕ್ಕೆಲುಬಿಗೆ ಪೆಟ್ಟು, ಐಸಿಯುನಲ್ಲಿ ಚಿಕಿತ್ಸೆ

ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಹರದನಹಳ್ಳಿ ದೇವಾಲಯದಲ್ಲಿ ಕಾಲು ಜಾರಿ ಬಿದ್ದು ಮಾಜಿ ಸಚಿವ ಹೆಚ್​ಡಿ ರೇವಣ್ಣ ಅವರಿಗೆ ಪಕ್ಕೆಲುಬಿಗೆ ಪೆಟ್ಟಾಗಿದೆ. ಸದ್ಯ ಹೊಳೆನರಸೀಪುರದ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೂಜೆ ಸಲ್ಲಿಸಿ ಬರುವಾಗ ದೇಗುಲದಲ್ಲಿ ಜಾರಿ ಬಿದ್ದಿದ್ದಾರೆ.

ದೇವಸ್ಥಾನದಲ್ಲಿ ಕಾಲುಜಾರಿ ಬಿದ್ದ ಮಾಜಿ ಸಚಿವ ಹೆಚ್​ಡಿ ರೇವಣ್ಣ: ಪಕ್ಕೆಲುಬಿಗೆ ಪೆಟ್ಟು, ಐಸಿಯುನಲ್ಲಿ ಚಿಕಿತ್ಸೆ
ದೇವಸ್ಥಾನದಲ್ಲಿ ಕಾಲುಜಾರಿ ಬಿದ್ದ ಮಾಜಿ ಸಚಿವ ಹೆಚ್​ಡಿ ರೇವಣ್ಣ: ಪಕ್ಕೆಲುಬಿಗೆ ಪೆಟ್ಟು, ಆಸ್ಪತ್ರೆಗೆ ದಾಖಲು
Follow us
ಮಂಜುನಾಥ ಕೆಬಿ
| Updated By: ಗಂಗಾಧರ​ ಬ. ಸಾಬೋಜಿ

Updated on:Jul 17, 2024 | 3:10 PM

ಹಾಸನ, ಜುಲೈ 17: ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದು ಮಾಜಿ ಸಚಿವ ಹೆಚ್​ಡಿ ರೇವಣ್ಣ (HD Revanna) ಅವರಿಗೆ ಪಕ್ಕೆಲುಬಿಗೆ ಪೆಟ್ಟಾಗಿರುವಂತಹ ಘಟನೆ ಜಿಲ್ಲೆಯ ಹೊಳೆನರಸೀಪುರ (Holenarasipur) ತಾಲ್ಲೂಕಿನ ಹರದನಹಳ್ಳಿ ದೇವೇಶ್ವರ ದೇವಾಲಯದಲ್ಲಿ ನಡೆದಿದೆ. ಸದ್ಯ ಹೊಳೆನರಸೀಪುರ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಏಕಾದಶಿ ಪ್ರಯುಕ್ತ ಉಪವಾಸವಿದ್ದು, ದೇವಾಲಯಕ್ಕೆ ಭೇಟಿ ನೀಡಿದ್ದರು. ಈ ವೇಳೆ ಪೂಜೆ ಸಲ್ಲಿಸಿ ಬರುವಾಗ ಜಾರಿ ಬಿದಿದ್ದು, ಪಕ್ಕೆಲುಬುಗೆ ಪೆಟ್ಟಾಗಿದೆ.

ಮಾಜಿ ಸಚಿವ ಹೆಚ್​ಡಿ ರೇವಣ್ಣ ಅವರ ಕುಟುಂಬಕ್ಕೆ ಸಂಕಷ್ಟಗಳು ಎದುರಾಗುತ್ತಿವೆ. ಹೀಗಾಗಿ ಅವರು ಇತ್ತೀಚೆಗೆ ಒಂದಾದ ಮೇಲೆ ಒಂದರಂತೆ ದೇವಸ್ಥಾನಗಳಿಗೆ ಮೊರೆ ಹೋಗಿದ್ದರು. ಆ ಮೂಲಕ ದೇವರೇ ತಮ್ಮ ಕುಟುಂಬಕ್ಕೆ ಎದುರಾದ ಕಾನೂನು ಸಂಕಷ್ಟಗಳಿಂದ ಪಾರು ಮಾಡು ಅಂತ ಪ್ರಾರ್ಥಿಸಿದ್ದರು.

ಇದನ್ನೂ ಓದಿ: ನನ್ನ ಮಗ ತಪ್ಪು ಮಾಡಿದ್ದರೆ ಗಲ್ಲಿಗೆ ಹಾಕಲಿ ನಾನು ಬೇಡ ಅನ್ನಲ್ಲ -ಹೆಚ್​ಡಿ ರೇವಣ್ಣ

ಇನ್ನು ಹೆಚ್.ಡಿ.ರೇವಣ್ಣ ಕಿಡ್ನ್ಯಾಪ್ ಕೇಸ್ ಎದುರಿಸುತ್ತಿದ್ದಾರೆ. ಅತ್ಯಾಚಾರ ಸಂತ್ರಸ್ತೆಯನ್ನ ಕಿಡ್ನ್ಯಾಪ್ ಮಾಡಿದ್ದಾರೆ ಅಂತ ಮೈಸೂರಿನ ಕೆ.ಆರ್.ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೇ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ರೇವಣ್ಣ, ಸದ್ಯ ಬೇಲ್ ಮೇಲೆ ಹೊರಗಿದ್ದಾರೆ. ಆದರೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್​ಐಟಿ ತನಿಖೆ ಮುಗಿಸಿ, ಚಾರ್ಜ್​ಶೀಟ್ ಸಲ್ಲಿಕೆಗೆ ತಯಾರಿ ನಡೆಸಿದೆ.

10 ದಿನ ಜೈಲು ಅನುಭವಿಸಿ ಹೆಚ್​ಡಿ ರೇವಣ್ಣ ಈಗ ಹೊರ ಬಂದಿದ್ದಾರೆ. 3 ದಿನ ಪೊಲೀಸ್ ಕಸ್ಟಡಿ ಮತ್ತು 6 ದಿನ ಜೈಲುಶಿಕ್ಷೆ ಅನುಭವಿಸಿದ್ದರು. ಪತ್ನಿ ಭವಾನಿ ರೇವಣ್ಣ ವಿರುದ್ಧ ಮೈಸೂರು ಜಿಲ್ಲೆ ಕೆ.ಆರ್.ನಗರ ಮಹಿಳೆ ಕಿಡ್ನ್ಯಾಪ್ ಕೇಸ್ ದಾಖಲಾಗಿತ್ತು. ಭವಾನಿ ರೇವಣ್ಣ ಸೂಚನೆ ಮೇರೆಗೆ ಕಾರು ಚಾಲಕ ಅಜಿತ್‌, ಸಂತ್ರಸ್ತೆಯನ್ನು ಮನೆಯಿಂದ ಕಾರಿನಲ್ಲಿ ಕರೆದೊಯ್ದ ಆರೋಪವಿತ್ತು.

ಇದನ್ನೂ ಓದಿ: ಒಂಟಿತನಕ್ಕೆ ಒಗ್ಗಿಕೊಳ್ಳುತ್ತಿರುವ ಹೆಚ್ ಡಿ ರೇವಣ್ಣ ಒಂಟಿಯಾಗಿಯೇ ಸದನದಿಂದ ಹೊರಬಂದರು!

ಕಿಡ್ನ್ಯಾಪ್ ಬಗ್ಗೆ K.R.ನಗರ ಠಾಣೆಯಲ್ಲಿ ದೂರು ಸಂತ್ರಸ್ತೆ ಮಗ ದೂರು ನೀಡಿದ್ದರು. ವಿಚಾರಣಾ ನ್ಯಾಯಾಲಯ ನಿರೀಕ್ಷಣಾ ಜಾಮೀನು ನಿರಾಕರಿಸಿತ್ತು. ಹೈಕೋರ್ಟ್ ಮೆಟ್ಟಿಲೇರಿದ್ದ ಭವಾನಿಗೆ ಮಧ್ಯಂತರ ಜಾಮೀನು ಸಿಕ್ಕಿತ್ತು. ಆದರೆ, ಕೆ.ಆರ್​.ನಗರ ಮತ್ತು ಹಾಸನಕ್ಕೆ ಹೋಗುವಂತಿಲ್ಲ ಅಂತಾ ಷರತ್ತು ವಿಧಿಸಿ ಭವಾನಿಗೆ ಬೇಲ್ ನೀಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:43 pm, Wed, 17 July 24

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?