AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ದಾಖಲೆ ಬರೆದ ಹಾಸನಾಂಬೆ: ಒಂದೇ ವಾರದಲ್ಲಿ ದೇಗುಲಕ್ಕೆ ಬಂತು ಕೋಟ್ಯಂತರ ರೂ. ಆದಾಯ

ಈ ಬಾರಿ ಹಾಸನಾಂಬ ಜಾತ್ರಾ ಮಹೋತ್ಸವ ಹೊಸ ದಾಖಲೆ ಬರೆದಿದೆ. 8 ದಿನದಲ್ಲಿ ಲಕ್ಷಾಂತರ ಜನರು ಹಾಸನಾಂಬೆ ದರ್ಶನ ಪಡೆದುಕೊಂಡಿದ್ದು, ದೇವಾಲಯಕ್ಕೆ ಕೋಟ್ಯಾಂತರ ರೂಪಾಯಿ ಆದಾಯ ಹರಿದುಬಂದಿದೆ. ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಷ್ಟೊಂದು ಭಕ್ತರು ಜೊತೆಗೆ ಆದಾಯ ಬಂದಿದೆ. ಹಾಗಾದ್ರೆ, ಇಂದು ವಾರದಲ್ಲಿ ದೇವಿ ದರ್ಶನ ಪಡೆದುವರು ಎಷ್ಟು? ದೇಗುಲಕ್ಕೆ ಆದಾಯ ಬಂದಿದ್ದೆಷ್ಟು? ಇಲ್ಲಿದೆ ಸಂಪೂರ್ಣ ಮಾಹಿತಿ.

ಹೊಸ ದಾಖಲೆ ಬರೆದ ಹಾಸನಾಂಬೆ: ಒಂದೇ ವಾರದಲ್ಲಿ ದೇಗುಲಕ್ಕೆ ಬಂತು ಕೋಟ್ಯಂತರ ರೂ. ಆದಾಯ
Hasanamba Temple
ಮಂಜುನಾಥ ಕೆಬಿ
| Edited By: |

Updated on:Oct 17, 2025 | 8:01 PM

Share

ಹಾಸನ, (ಆಕ್ಟೋಬರ್ 17): ಹಾಸನಾಂಬ (Hassanamba) ದರ್ಶನೋತ್ಸವ ಆರಂಭಗೊಂಡು ಕೇವಲ ಒಂದೇ ವಾರದಲ್ಲಿ (8 ದಿನ) ಹೊಸ ಇತಿಹಾಸ ಸೃಷ್ಟಿಯಾಗಿದೆ. ಹೌದು..ಇಲ್ಲಿಯವರೆಗೂ 15,30,000 ಭಕ್ತರು ಹಾಸನಾಂಬ ದೇವಿ ದರ್ಶನ ಪಡೆದುಕೊಂಡಿದ್ದಾರೆ. ಇನ್ನು ಕೇವಲ 8 ದಿನದಲ್ಲಿ ದೇವಾಲಯಕ್ಕೆ 10.5 ಕೋಟಿ ರೂ. ಆದಾಯ ಹರಿದು ಬಂದಿದ್ದು, ದಾಖಲೆಯಾಗಿದೆ. ಈ ಬಾರಿ ವಿಐಪಿ, ವಿವಿಐಪಿ ಪಾಸ್‌ಗಳನ್ನು ರದ್ದುಪಡಿಸಿರುವುದರಿಂದ ಭಕ್ತರು ಸುಗಮವಾಗಿ ದರ್ಶನ ಪಡೆಯುತ್ತಿದ್ದಾರೆ. ಇದರಿಂದಾಗಿ ಭಕ್ತರಲ್ಲಿ ಸಂತಸ ಮೂಡಿದೆ. ನಾಡಿನ ನಾನಾ ಭಾಗಗಳಿಂದ ಭಕ್ತರ ದಂಡೇ ಹಾಸನಾಂಬೆಯ ದರ್ಶನಕ್ಕೆ ಹರಿದು ಬರುತ್ತಿದೆ. ಇನ್ನೂ ಐದು ದಿನ ಹಾಸನಾಂಬ ಜಾತ್ರಾ ಮಹೋತ್ಸವ ಇದ್ದು, ಈ ಐದು ದಿನದಲ್ಲಿ ಲಕ್ಷಾಂತರ ಭಕ್ತರು ದರ್ಶನಕ್ಕೆ ಆಗಮಿಸುವ ನಿರೀಕ್ಷೆ ಇದೆ.

ಹಾಸನಾಂಬೆ ದರ್ಶನ ಬಗ್ಗೆ ಡಿಸಿ ಹೇಳಿದ್ದಿಷ್ಟು

ಇನ್ನು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶುಕ್ರವಾರ ಹಿನ್ನೆಲೆಯಲ್ಲಿ ಸಾಗರೋಪಾದಿಯಲ್ಲಿ ಭಕ್ತರು ಆಗಮಿಸಿದ್ದಾರೆ. ಇಂದು 1,60,000 ಭಕ್ತರಿಂದ ದರ್ಶನ ಮಾಡಿದ್ದು, ಜಿಲ್ಲಾಡಳಿತಕ್ಕೆ ಸವಾಲಾಗಿದೆ. ಎಲ್ಲಾ ಸರತಿ ಸಾಲುಗಳು ಸಂಪೂರ್ಣ ಭರ್ತಿಯಾಗಿವೆ. ಇಂದು 4 ಲಕ್ಷಕ್ಕೂ ಹೆಚ್ಚು ಭಕ್ತರು ದರ್ಶನ ಪಡೆಯುವ ನಿರೀಕ್ಷೆ ಇದೆ. ನಾನೇ ಧರ್ಮ ದರ್ಶನದ ಸಾಲಿನಲ್ಲಿ ಬಂದು 3 ಗಂಟೆ ನಂತರ ದರ್ಶನ ಪಡೆದಿದ್ದೇನೆ. ಈಗ ಸಮಯ ಹೆಚ್ಚಾಗುತ್ತಿದೆ. ಕೆಲವು ಭಕ್ತರು ಅಸಮಾಧಾನ ತೋಡಿಕೊಳ್ಳುತ್ತಿದ್ದಾರೆ. ಬೆಳಗ್ಗೆ 7 ಗಂಟೆಗೆ ಸಾಲಿನಲ್ಲಿ ನಿಂತವರು, ಸಂಜೆ 4 ಗಂಟೆಗೆ ದರ್ಶನ ಪಡೆದಿದ್ದಾರೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಹಾಸನಾಂಬೆ ದರ್ಶನದಲ್ಲಿ ದಾಖಲೆಯ ಆದಾಯ: ಒಂದೇ ದಿನಕ್ಕೆ 1 ಕೋಟಿಗೂ ಹೆಚ್ಚು ಹಣ ಸಂಗ್ರಹ

ಗರ್ಭಗುಡಿ ಬಳಿ ತಳ್ಳುತ್ತಿದ್ದಾರೆಂದು ಕೆಲವರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಭಕ್ತರು ಶಾಂತಿಯಿಂದ ಸಹಕರಿಸಬೇಕು. 1000 ಕೊಟ್ಟ ಬಂದರೆ ಸರತಿ ಸಾಲು ಕಡಿಮೆ ಇರುತ್ತದೆ ಅಷ್ಟೇ. ಅನುಕೂಲವಾಗಲಿ ಎಂದು ಮಾಡಿದ್ದೇವೆ ಹೊರತು ಹಣ ಮಾಡಲು ಅಲ್ಲ. ಎರಡರಿಂದ ಮೂರು ಪಟ್ಟು ಹೆಚ್ಚು ಭಕ್ತರು ಬಂದಿದ್ದಾರೆ. ಮುಂದೆ ಒಂದು ದಿನದಲ್ಲಿ ಭಕ್ತರ ಸಂಖ್ಯೆ ಐದು ಲಕ್ಷ ಮೀರಬಹುದು ಎಂದು ತಿಳಿಸಿದರು.

ಧರ್ಮ ದರ್ಶನದ ಸಾಲಿನಲ್ಲಿ ಬರುತ್ತಿರುವವರಿಗೆ 7ರಿಂದ 8 ಗಂಟೆ, 1000 ರೂಪಾಯಿ ಟಿಕೆಟ್‌ ಪಡೆದವರಿಗೆ 3ರಿಂದ 4 ಗಂಟೆ ಹಾಗೂ 300 ರೂ. ಟಿಕೆಟ್‌ ಪಡೆದವರಿಗೆ 6ರಿಂದ 7 ಗಂಟೆ ಸಮಯ ಆಗುತ್ತಿದೆ. ಹಾಸನಾಂಬೆ ದರ್ಶನಕ್ಕೆ ನಿಮಗೆ ಸಿಗುವುದು ಕೆಲ ಸೆಕೆಂಡ್‌ಗಳು ಮಾತ್ರ. ಪೂರ್ವ ತಯಾರಿ ಮಾಡಿಕೊಂಡು ಬಂದು ಆಶೀರ್ವಾದ ಪಡೆಯಿರಿ. ಮೊದಲು ತಾಳ್ಮೆ ಕಲಿಯಿರಿ, ಮೊಬೈಲ್‌ಫೋನ್‌ ಬಳಸಬೇಡಿ. ಮಕ್ಕಳನ್ನು ಮೇಲೆತ್ತಿಕೊಂಡು ಬನ್ನಿ. ತುಂಬಾ ಒತ್ತಡ ಇದೆ. ದ್ವಾರ ಬಾಗಿಲು ಬಂದ ವೇಳೆಯೇ ದೇವಿ ಕಡೆಗೆ ನೋಡಿ ಎಂದು ಮನವಿ ಎಂದು ಭಕ್ತರಿಗೆ ಡಿಸಿ ಕೆ.ಎಸ್.ಲತಾಕುಮಾರಿ ಮಾನವಿ ಮಾಡಿದರು.

Published On - 8:01 pm, Fri, 17 October 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್