AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸ್ಟೆಲ್ ಸಾಂಬಾರ್‌ನಲ್ಲಿ ಹಲ್ಲಿ ಪತ್ತೆ; ಆಹಾರ ಸೇವಿಸಿದ್ದ 15 ವಿದ್ಯಾರ್ಥಿನಿಯರು ಅಸ್ವಸ್ಥ

ಹಾಸನದ ಕೃಷಿ ವಿಜ್ಞಾನ ಕಾಲೇಜು ಹಾಸ್ಟೆಲ್‌ನಲ್ಲಿ ಸಾಂಬಾರ್‌ನಲ್ಲಿ ಹಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ 15 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ. ಆರು ಮಂದಿಗೆ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗ್ಯಾಸ್ ಸಿಲಿಂಡರ್ ಕೊರತೆಯಿಂದಾಗಿ, ಶುಚಿತ್ವವಿಲ್ಲದೆ ಹೊರಗೆ ಅಡುಗೆ ಮಾಡುವಾಗ ಈ ಘಟನೆ ಸಂಭವಿಸಿದೆ. ಕಾಲೇಜು ಆಡಳಿತ ಹಾಗೂ ಗ್ಯಾಸ್ ಏಜೆನ್ಸಿಯ ನಿರ್ಲಕ್ಷ್ಯಕ್ಕೆ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾಸ್ಟೆಲ್ ಸಾಂಬಾರ್‌ನಲ್ಲಿ ಹಲ್ಲಿ ಪತ್ತೆ; ಆಹಾರ ಸೇವಿಸಿದ್ದ 15 ವಿದ್ಯಾರ್ಥಿನಿಯರು ಅಸ್ವಸ್ಥ
ಹಾಸನ ಹಾಸ್ಟೆಲ್​​​ನಲ್ಲಿ ಊಟದಲ್ಲಿ ಹಲ್ಲಿ ಪತ್ತೆ: 15 ವಿದ್ಯಾರ್ಥಿಗಳು ಅಸ್ವಸ್ಥ
ಮಂಜುನಾಥ ಕೆಬಿ
| Edited By: |

Updated on:Jun 11, 2026 | 3:06 PM

Share

ಹಾಸನ, ಜೂ.11: ಜಿಲ್ಲೆಯ ತಾಲ್ಲೂಕಿನ ಸಾರಾಪುರದಲ್ಲಿರುವ ಕೃಷಿ ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿಯರ ಹಾಸ್ಟೆಲ್‌ನಲ್ಲಿ ದೊಡ್ಡ ಅಚಾತುರ್ಯವೊಂದು ನಡೆದಿದೆ. ವಿದ್ಯಾರ್ಥಿನಿಯರು ರಾತ್ರಿಯ ಊಟ ಮಾಡುವ ವೇಳೆ ಸಾಂಬಾರ್‌ನಲ್ಲಿ ಹಲ್ಲಿ ಪತ್ತೆಯಾಗಿದ್ದು, ಅದೇ ವಿಷಪೂರಿತ ಆಹಾರವನ್ನು ಸೇವಿಸಿದ ಸುಮಾರು 15 ವಿದ್ಯಾರ್ಥಿನಿಯರು ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ. ಊಟ ಮಾಡುವಾಗ ಸಾಂಬಾರ್‌ನಲ್ಲಿ ಹಲ್ಲಿ ಇರುವುದು ತಡವಾಗಿ ಬೆಳಕಿಗೆ ಬಂದಿರುವ ಕಾರಣ ಅಷ್ಟರಲ್ಲಾಗಲೇ ಊಟ ಸವಿದಿದ್ದ 15 ವಿದ್ಯಾರ್ಥಿನಿಯರಲ್ಲಿ ತಕ್ಷಣವೇ ವಾಂತಿ ಹಾಗೂ ತಲೆಸುತ್ತು ಕಾಣಿಸಿಕೊಂಡು ಅಸ್ವಸ್ಥರಾಗಿದ್ದಾರೆ. ಇವರ ಪೈಕಿ ತೀವ್ರವಾಗಿ ಅಸ್ವಸ್ಥಗೊಂಡ ಆರು ವಿದ್ಯಾರ್ಥಿನಿಯರನ್ನು ತಕ್ಷಣವೇ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಹಿಮ್ಸ್ (HIMS) ಆಸ್ಪತ್ರೆಗೆ ರವಾನಿಸಿ ದಾಖಲಿಸಲಾಗಿದೆ. ಘಟನೆಯ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿಗಳು (DHO) ಹಿಮ್ಸ್ ಆಸ್ಪತ್ರೆಗೆ ಖುದ್ದಾಗಿ ಭೇಟಿ ನೀಡಿ, ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ್ದಾರೆ.

ಸುಮಾರು 400 ವಿದ್ಯಾರ್ಥಿನಿಯರಿರುವ ಈ ದೊಡ್ಡ ಹಾಸ್ಟೆಲ್‌ಗೆ ಕಳೆದ ಎರಡು ತಿಂಗಳಿಂದ ಗ್ಯಾಸ್ ಸಿಲಿಂಡರ್ ಸಿಗದೆ ತೀವ್ರ ಪರದಾಟ ಉಂಟಾಗಿದೆ ಎಂದು ವಿದ್ಯಾರ್ಥಿನಿಯರು ಗಂಭೀರ ಆರೋಪ ಮಾಡಿದ್ದಾರೆ. ಹಾಸ್ಟೆಲ್‌ಗೆ ವಾರಕ್ಕೆ ಕನಿಷ್ಠ 4 ರಿಂದ 6 ವಾಣಿಜ್ಯ (Commercial) ಸಿಲಿಂಡರ್‌ಗಳ ಅವಶ್ಯಕತೆಯಿದೆ. ಆದರೆ ಗ್ಯಾಸ್ ಏಜೆನ್ಸಿಯವರು ವಾರಕ್ಕೆ ಕೇವಲ ಒಂದರಿಂದ ಎರಡು ಸಿಲಿಂಡರ್ ಮಾತ್ರ ಪೂರೈಸುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಧರ್ಮಸ್ಥಳದಲ್ಲಿ ಮಹಾ ವಿಸ್ಮಯ: 26 ವರ್ಷ ಹಿಂದೆ ಓಡಿಹೋಗಿದ್ದ ಹುಡುಗ ಕೊನೆಗೂ ವಾಪಸ್, ಸತೀಶ್ ಈಗ ಮಹಾರಾಷ್ಟ್ರದ ಸಲೀಂ!

ಸಿಲಿಂಡರ್ ಕೊರತೆಯಿಂದಾಗಿ ಅನಿವಾರ್ಯವಾಗಿ ಅಡುಗೆ ಮನೆಯ ಹೊರಗಡೆ ಸೌದೆ ಒಲೆ ಹಾಕಿ ಅಡುಗೆ ಮಾಡಲಾಗುತ್ತಿತ್ತು. ಹೊರಗಡೆ ತೆರೆದ ಜಾಗದಲ್ಲಿ ಅಡುಗೆ ಮಾಡುತ್ತಿದ್ದರಿಂದ ಹಾಗೂ ಅಡುಗೆ ತಯಾರಿಸುವವರು ಶುಚಿತ್ವ ಕಾಪಾಡದ ಕಾರಣ ಸಾಂಬಾರ್‌ಗೆ ಹಲ್ಲಿ ಬಿದ್ದಿದೆ. ಇದೇ ಅಚಾತುರ್ಯಕ್ಕೆ ವಿದ್ಯಾರ್ಥಿನಿಯರು ಅಸ್ವಸ್ಥರಾಗಲು ಮುಖ್ಯ ಕಾರಣ ಎಂದು ಸಾರ್ವಜನಿಕರು ಹಾಗೂ ವಿದ್ಯಾರ್ಥಿನಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 400 ಜನ ವಿದ್ಯಾರ್ಥಿನಿಯರು ಇರುವ ಹಾಸ್ಟೆಲ್‌ನ ಈ ದುಸ್ಥಿತಿಗೆ ಕಾಲೇಜು ಆಡಳಿತ ಮಂಡಳಿ ಹಾಗೂ ಗ್ಯಾಸ್ ಏಜೆನ್ಸಿಯ ಬೇಜವಾಬ್ದಾರಿತನವೇ ನೇರ ಕಾರಣ ಎಂದು ಪೋಷಕರು ತೀವ್ರವಾಗಿ ಕಿಡಿಕಾರಿದ್ದಾರೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:55 pm, Thu, 11 June 26

Follow Us
ಮಂಜುನಾಥ ಕೆಬಿ
ಮಂಜುನಾಥ ಕೆಬಿ