AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ವಲ್ ರೇವಣ್ಣ ವಿಡಿಯೋ ಕೇಸ್​: ಎಸ್​ಪಿಪಿ ರಾಜೀನಾಮೆ!

Prajwal revanna Video Case: ಹಾಸನದ ಮಾಜಿ ಜೆಡಿಎಸ್​​ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನೇಮಿಸಿದ್ದ ಎಸ್​ಪಿಪಿ ರಾಜೀನಾಮೆ ನೀಡಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್​​ಐಟಿ ಪರ ವಾದ ಮಂಡಿಸಲು ರಾಜ್ಯ ಸರ್ಕಾರ ನೇಮಕವಾಗಿದ್ದ ಜಾಯ್ನಾ ಕೊಥಾರಿ ಅವರು ಹೆಚ್ಚುವರಿ ಎಸ್​ಪಿಪಿ ಹುದ್ದೆಗೆ ರಾಜೀನಾಮೆ ನೀಡಿದ್ದು ಅಚ್ಚರಿ ಮೂಡಿಸಿದೆ.

ಪ್ರಜ್ವಲ್ ರೇವಣ್ಣ ವಿಡಿಯೋ ಕೇಸ್​: ಎಸ್​ಪಿಪಿ ರಾಜೀನಾಮೆ!
ಪ್ರಜ್ವಲ್ ರೇವಣ್ಣ, ಜಾಯ್ನಾ ಕೊಥಾರಿ
Ramesha M
| Updated By: ವಿವೇಕ ಬಿರಾದಾರ|

Updated on:Jun 12, 2024 | 9:07 AM

Share

ಬೆಂಗಳೂರು, (ಜೂನ್ 11): ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಎಸ್​ಪಿಪಿ ಹುದ್ದೆಗೆ ಜಾಯ್ನಾ ಕೊಥಾರಿ ರಾಜೀನಾಮೆ ನೀಡಿದ್ದಾರೆ. ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಗಳಲ್ಲಿ ವಿಶೇಷ ತನಿಖಾ ತಂಡದ ಪರವಾಗಿ ಕೋರ್ಟ್​ನಲ್ಲಿ ವಾದಿಸಲು ರಾಜ್ಯ ಸರ್ಕಾರ ಜಾಯ್ನಾ ಕೊಥಾರಿ ಅವರನ್ನು ಹೆಚ್ಚುವರಿ ಎಸ್​ಪಿಪಿಯಾಗಿ ನೇಮಕ ಮಾಡಿತ್ತು. ಜಾಯ್ನಾ ಕೊಥಾರಿ ಅವರು ಇಂದು (ಜೂನ್ 11) ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ಅಚ್ಚರಿಗೆ ಕಾರಣವಾಗಿದೆ.

ಪ್ರಜ್ವಲ್ ರೇವಣ್ಣ ಪ್ರಕರಣಗಳಲ್ಲಿ ವಿಶೇಷ ತನಿಖಾ ತಂಡ (SIT) ಪರ ವಾದಿಸಲು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ (SPP) ಆಗಿ ಬಿಎನ್ ಜಗದೀಶ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ. ಬಳಿಕ ವಿಚಾರಣಾ ನ್ಯಾಯಾಲಯ ಮತ್ತು ಸೆಷನ್‌ಗಳ ಮುಂದೆ ಪ್ರಾಸಿಕ್ಯೂಷನ್‌ನ್ನು ಸಮರ್ಥಿಸಲು ರಾಜ್ಯ ಸರ್ಕಾರವು, ಹಿರಿಯ ವಕೀಲರಾದ ಅಶೋಕ್ ಎನ್ ನಾಯಕ್ ಮತ್ತು ಜಾಯ್ನಾ ಕೊಥಾರಿ ಅವರನ್ನು ಹೆಚ್ಚುವರಿ ಎಸ್‌ಪಿಪಿಗಳಾಗಿ ಸರ್ಕಾರ ನೇಮಿಸಿತ್ತು. ಆದರೆ, ಹೆಚ್ಚುವರಿ ಎಸ್‌ಪಿಪಿ ಜಾಯ್ನಾ ಕೊಥಾರಿ ರಾಜೀನಾಮೆ ನೀಡಿದ್ದು ಅಚ್ಚರಿ ಮೂಡಿಸಿದೆ.

ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲು ಪಾಲಾದ ಪ್ರಜ್ವಲ್ ರೇವಣ್ಣ ವಿಚಾರಣಾಧೀನ ಕೈದಿ ನಂಬರ್ 5664

ಇಷ್ಟು ದಿನ ಎಸ್​ಐಟಿ ಕಸ್ಟಡಿಯಲ್ಲಿದ್ದ ಪ್ರಜ್ವಲ್ ರೇವಣ್ಣ ಅವರಿಗೆ ನ್ಯಾಯಾಲಯವು ಜೂನ್ 24ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ, ಈ ಹಿನ್ನೆಲೆಯಲ್ಲಿ ಇದೀಗ ಪ್ರಜ್ವಲ್​ ರೇವಣ್ಣ ಬೆಂಗಳೂರಿಗೆ ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲು ಪಾಲಾಗಿದ್ದು, ಅವರಿಗೆ ವಿಚಾರಣಾಧೀನ ಕೈದಿ ನಂಬರ್ 5664 ನೀಡಲಾಗಿದೆ.

ಪ್ರಜ್ವಲ್ ರೇವಣ್ಣ ಅವರು ಇಷ್ಟು ದಿನ ಎಎಸ್​ಐಟಿ ವಶದಲ್ಲಿ ಇದ್ದಿದ್ದರಿಂದ ಜಾಮೀನು ಅರ್ಜಿ ಸಲ್ಲಿಸಿರಲಿಲ್ಲ. ಇದೀಗ ಜೈಲುಪಾಲಾಗಿರುವುದಿಂದ ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆಗಳಿವೆ. ಇನ್ನು ಪ್ರಮುಖವಾಗಿ ಎರಡು ಬಾರಿ ಎಸ್​​ಟಿ ವಶಕ್ಕೆ ನೀಡುವಂತೆ ಕೋರ್ಟ್​ನಲ್ಲಿ  ಜಾಯ್ನಾ ಕೊಥಾರಿ ಅವರು ಬಲವಾದ ವಾದ ಮಂಡನೆ ಮಾಡಿದ್ದರು.

ರಾಜ್ಯದ ಮತ್ತಷ್ಟುವ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:09 pm, Tue, 11 June 24