ಪರಪ್ಪನ ಅಗ್ರಹಾರ ಜೈಲು ಪಾಲಾದ ಪ್ರಜ್ವಲ್ ರೇವಣ್ಣ ವಿಚಾರಣಾಧೀನ ಕೈದಿ ನಂಬರ್ 5664

Prajwal Revanna Case: ಹಾಸನ ಅಶ್ಲೀಲ ವಿಡಿಯೋ, ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಜೆಡಿಎಸ್​ ಸಂಸದ ಪ್ರಜ್ವಲ್​ ರೇವಣ್ಣಗೆ ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಇಷ್ಟು ದಿನ ಎಸ್​ಐಟಿ ಕಸ್ಟಡಿಯಲ್ಲಿದ್ದ ಪ್ರಜ್ವಲ್​​ನನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್​ ಮಾಡಲಾಗಿದ್ದು, ಅವರಿಗೆ ವಿಚಾರಣಧೀನ ಕೈದಿ ನಂಬರ್​ ಸಹ ನೀಡಲಾಗಿದೆ.

ಪರಪ್ಪನ ಅಗ್ರಹಾರ ಜೈಲು ಪಾಲಾದ ಪ್ರಜ್ವಲ್ ರೇವಣ್ಣ ವಿಚಾರಣಾಧೀನ ಕೈದಿ ನಂಬರ್ 5664
ಪ್ರಜ್ವಲ್ ರೇವಣ್ಣ
Follow us
| Updated By: ರಮೇಶ್ ಬಿ. ಜವಳಗೇರಾ

Updated on:Jun 10, 2024 | 8:53 PM

ಬೆಂಗಳೂರು, (ಜೂನ್ 10): ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ( Prajwal Revanna) ಕೋರ್ಟ್​ ನ್ಯಾಯಾಂಗ ಬಂಧನ ವಿಧಿಸಿದೆ. ಈ ಹಿನ್ನೆಲೆಯಲ್ಲಿ ಪ್ರಜ್ವಲ್​ನನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್​ ಮಾಡಲಾಗಿದ್ದು, ವಿಚಾರಣಾಧೀನ ಖೈದಿ ಸಂಖ್ಯೆ 5664 (Prajwal Revanna prisoner no 5664) ನೀಡಲಾಗಿದೆ. ಇನ್ನು ಮಹಿಳೆಯ ಅಪಹರಣ ಪ್ರಕರಣದಲ್ಲಿ ಹೊಳೆನರಸೀಪುರ ಶಾಸಕ ಎಚ್​.ಡಿ.ರೇವಣ್ಣಗೆ ವಿಚಾರಣಾಧೀನ ಖೈದಿ ಸಂಖ್ಯೆ 4567 ನೀಡಲಾಗಿತ್ತು.

ಸದ್ಯ ಪ್ರಜ್ವಲ್ ರೇವಣ್ಣ, ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿನ ಕ್ವಾರೆಂಟೈನ್ ಸೆಲ್ ನಲ್ಲಿದ್ದು, ಅವರಿಗೆ ವಿಚಾರಣಾಧೀನ ಕೈದಿ ನಂಬರ್-5664 ನೀಡಲಾಗಿದೆ. ಇನ್ನು ಇಂದಿನ ರಾತ್ರಿ ಊಟವನ್ನು ಸಹ ಜೈಲಾಧಿಕಾರಿಗಳು ನೀಡಿದ್ದಾರೆ. ರಾತ್ರಿ ಜೈಲಿನ ಮೆನುವಿನಂತೆ ಮುದ್ದೆ, ಅನ್ನ, ಸಾಂಬರು, ಪಲ್ಯ ನೀಡಲಾಗಿದೆ. ಆದ್ರೆ, ಪ್ರಜ್ವಲ್ , ಜೈಲಿನ ಕ್ವಾರೆಂಟೈನ್ ಬ್ಯಾರಕ್ ನಲ್ಲಿ ಮೌನಕ್ಕೆ ಶರಣಾಗಿದ್ದಾರೆ.

ಇದನ್ನೂ ಓದಿ: ಪ್ರಜ್ವಲ್​ ರೇವಣ್ಣಗೆ ನ್ಯಾಯಾಂಗ ಬಂಧನ, 14 ದಿನ ಪರಪ್ಪನ ಅಗ್ರಹಾರ ಜೈಲೇ ಗತಿ

ಹಾಸನದಲ್ಲಿ ವೈರಲ್ ಆದ ಅಶ್ಲೀಲ ವಿಡಿಯೋ ಹಾಗೂ ಅತ್ಯಾಚಾರ ಆರೋಪದಲ್ಲಿ ಪ್ರಜ್ವಲ್ ರೇವಣ್ಣ ಅವರು ಜೈಲು ಪಾಲಾಗಿದ್ದಾರೆ. ಅತ್ಯಾಚಾರ ಆರೋಪ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರ ಎಸ್‌ಐಟಿ ಕಸ್ಟಡಿ ಅವಧಿ ಇಂದಿಗೆ ಅಂತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಇಂದು ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನು ಕೋರ್ಟ್‌ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಪ್ರಜ್ವಲ್ ರೇವಣ್ಣ ಅವರಿಗೆ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಪ್ರಜ್ವಲ್ ರೇವಣ್ಣರನ್ನು ಕೋರ್ಟ್‌ಗೆ ಹಾಜರುಪಡಿಸಿದ್ದ ಎಸ್ಐಟಿ ಅಧಿಕಾರಿಗಳು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಮನವಿ ಮಾಡಿದರು. ಆಗ ಜಡ್ಜ್‌ ನಿಮಗೆ ಕಸ್ಟಡಿಯಲ್ಲಿ ಪೊಲೀಸರು ತೊಂದರೆ ಕೊಟ್ರಾ ಎಂದು ಪ್ರಶ್ನಿಸಿದರು. ಆಗ ಇಲ್ಲ ಎಂದು ಪ್ರಜ್ವಲ್ ರೇವಣ್ಣ ಉತ್ತರಿಸಿದ್ದರು.

ರಾಜ್ಯದ ಮತ್ತಷ್ಟುವ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:47 pm, Mon, 10 June 24

ತಾಜಾ ಸುದ್ದಿ
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್