ಒಂದೇ ಸಮಯಕ್ಕೆ ಅಣ್ತಮ್ಮಂದಿರ ಅರ್ಜಿ ವಿಚಾರಣೆ: ಸೂರಜ್‌ ಸಿಐಡಿ ಕಸ್ಟಡಿಗೆ, ತಮ್ಮ ಪ್ರಜ್ವಲ್‌ ನ್ಯಾಯಾಂಗ ಬಂಧನಕ್ಕೆ!

42ನೇ ಎಸಿಎಂಎಂ ಕೋರ್ಟ್‌ನಲ್ಲಿ ಒಂದೇ ಸಮಯದಲ್ಲಿ ರೇವಣ್ಣ ಸನ್ಸ್ ಅರ್ಜಿಗಳ ವಿಚಾರಣೆ ನಡೆದಿದೆ. ರೇವಣ್ಣನವರ ಹಿರಿಯ ಪುತ್ರ ಸೂರಜ್​ಗೆ ಕೋರ್ಟ್​, ನ್ಯಾಯಾಂಗ ಬಂಧನದಿಂದ ಸಿಐಡಿ ಕಸ್ಟಡಿಗೆ ನೀಡಿದರೆ, ಸಹೋದರ ಪ್ರಜ್ವಲ್​ ರೇವಣ್ಣಗೆ ಎಸ್‌ಐಟಿ ಕಸ್ಟಡಿಯಿಂದ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಒಂದೇ ಸಮಯಕ್ಕೆ ಅಣ್ತಮ್ಮಂದಿರ ಅರ್ಜಿ ವಿಚಾರಣೆ: ಸೂರಜ್‌ ಸಿಐಡಿ ಕಸ್ಟಡಿಗೆ, ತಮ್ಮ ಪ್ರಜ್ವಲ್‌ ನ್ಯಾಯಾಂಗ ಬಂಧನಕ್ಕೆ!
ಸೂರಜ್, ಪ್ರಜ್ವಲ್
Follow us
Shivaprasad
| Updated By: ರಮೇಶ್ ಬಿ. ಜವಳಗೇರಾ

Updated on:Jun 24, 2024 | 4:39 PM

ಬೆಂಗಳೂರು, (ಜೂನ್ 24): ಕಾಕತಾಳೀಯ ಎಂಬಂತೆ ಇಂದು (ಜೂನ್ 24) ಬೆಂಗಳೂರಿನ 42ನೇ ಎಸಿಎಂಎಂ (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ಕೋರ್ಟ್​ನಲ್ಲಿ ಮಾಜಿ ಸಚಿವ ಎಚ್​ಡಿ ರೇವಣ್ಣ ಪುತ್ರರ ಅರ್ಜಿ ವಿಚಾರಣೆ ನಡೆದಿದೆ. ಸಲಿಂಗ ಕಾಮ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಜೆಡಿಎಸ್​ ವಿಧಾನಪರಿಷತ್ ಸದಸ್ಯ ಸೂರಜ್‌ ರೇವಣ್ಣನನ್ನು (Suraj Revanna Case) ಕೋರ್ಟ್​, 8 ದಿನ ಸಿಐಡಿ ಕಸ್ಟಡಿಗೆ ನೀಡಿದೆ. ಇನ್ನು ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ಪ್ರಜ್ವಲ್​ ರೇವಣ್ಣಗೆ ಸಿಐಡಿ ಕಸ್ಟಡಿಯಿಂದ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಎರಡು ಪ್ರಕರಣಗಳ ಪ್ರತ್ಯೇಕವಾಗಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ಕೆ.ಎನ್‌.ಶಿವಕುಮಾರ್‌ ಅವರು ಸೂರಜ್‌ನನ್ನು ಜುಲೈ 1ರವರೆಗೆ ಸಿಐಡಿ ಕಸ್ಟಡಿಗೆ ನೀಡಿ ಆದೇಶ ನೀಡಿದ್ದರೆ, ಪ್ರಜ್ವಲ್​ಗೆ ಜುಲೈ 8ರ ವರೆಗೆ ನ್ಯಾಯಾಂಗ ಬಂಧನ ನೀಡಿ ಆದೇಶ ಹೊರಡಿಸಿದರು.

ಜುಲೈ 1ರ ವರೆಗೆ ಸೂರಜ್ ಸಿಐಡಿ ಕಸ್ಟಡಿಗೆ

ಸಲಿಂಗ ಕಾಮ, ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಸೂರಜ್ ರೇವಣ್ಣನನ್ನು ವಿಚಾರಣೆಗಾಗಿ ಹತ್ತು ದಿನ ಕಸ್ಟಡಿಗೆ ನೀಡುವಂತೆ ಸಿಐಡಿ ಅಧಿಕಾರಿಗಳು ಮನವಿ ಮಾಡಿದ್ದರು. ಆದರೆ, ಕೋರ್ಟ್, 10 ದಿನ ಬದಲಾಗಿ 8 ದಿನ ಸಿಐಡಿ ಕಸ್ಟಡಿಗೆ ನೀಡಿದೆ. ಇದರಿಂದ ಜುಲೈ 1 ರವರೆಗೆ ಸೂರಜ್ ರೇವಣ್ಣ ಸಿಐಡಿ ಕಸ್ಟಡಿಯಲ್ಲಿ ಇರಲಿದ್ದಾರೆ.

ಇದನ್ನೂ ಓದಿ: ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್; ತನಿಖಾಧಿಕಾರಿಗಳ ನೇಮಕ, ಬಾಡಿ ವಾರಂಟ್ ಸಲ್ಲಿಕೆ

ಜುಲೈ 8ರವರೆಗೆ ಪ್ರಜ್ವಲ್‌ಗೆ ನ್ಯಾಯಾಂಗ ಬಂಧನ

ಅಣ್ಣ ಸೂರಜ್ ರೇವಣ್ಣ ಅರ್ಜಿ ವಿಚಾರಣೆ ಮುಗಿಯುತ್ತಿದ್ದಂತೆ ತಮ್ಮ ಪ್ರಜ್ವಲ್ ರೇವಣ್ಣನನ್ನು (Prajwal Revanna) ಎಸ್ಐಟಿ ತಂಡ ಕೋರ್ಟ್‌ಗೆ ಹಾಜರುಪಡಿಸಿತು. ಅತ್ಯಾಚಾರ ಪ್ರಕರಣ ಸಂಬಂಧ ಪ್ರಜ್ವಲ್‌ನ ಕಸ್ಟಡಿಗೆ ಪಡೆಯಲಾಗಿತ್ತು. ಕಸ್ಟಡಿ ಇಂದು (ಜೂನ್ 24) ಅಂತ್ಯವಾದ ಹಿನ್ನೆಲೆಯಲ್ಲಿ 42 ಎಸಿಎಂಎಂ ಕೋರ್ಟ್‌ಗೆ ಎಸ್ಐಟಿ ಹಾಜರು ಪಡಿಸಿದೆ. ಹೀಗಾಗಿ ಜುಲೈ 8ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ‌ ಕೋರ್ಟ್‌ ಆದೇಶ ಹೊರಡಿಸಿದೆ.

ಪ್ರಜ್ವಲ್​ ಜಾಮೀನು ಆದೇಶ ಕಾಯ್ದಿರಿಸಿದ ಕೋರ್ಟ್

ಇನ್ನು ಮತ್ತೊಂದೆಡೆ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್​, ಆದೇಶ ಕಾಯ್ದಿರಿಸಿದೆ. ಜೂನ್ 26ಕ್ಕೆ ಜಾಮೀನು ಅರ್ಜಿ ಸಂಬಂಧ ಆದೇಶ ನೀಡುವ ಸಾಧ್ಯತೆ ಇದೆ. ಹೀಗಾಗಿ ಪ್ರಜ್ವಲ್​ ರೇವಣ್ಣಗೆ ಜಾಮೀನು ಸಿಗುತ್ತಾ? ಅಥವಾ ಜೈಲೇ ಗತಿನಾ ಎನ್ನುವುದನ್ನು ಕಾದುನೋಡಬೇಕಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 4:24 pm, Mon, 24 June 24

ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ಟೆಸ್ಟ್ ಸ್ಪೆಷಲಿಸ್ಟ್​​ನ ಔಟ್ ಮಾಡಿದ ಕನ್ನಡಿಗ ಪ್ರಸಿದ್ಧ್ ಕೃಷ್ಣ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ದೇವಾಲಯಗಳಲ್ಲಿ ಮುಡಿ ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
Daily Horoscope: ಈ ರಾಶಿಯವರು ಇಂದು ಹೊಸ ವಾಹನ ಖರೀದಿಸುವರು
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಆವೇಶ, ಆಕ್ರೋಶ... ಸ್ಯಾಮ್ ಕೊನ್​ಸ್ಟಾಸ್ ಮುಂದೆ ಘರ್ಜಿಸಿದ ವಿರಾಟ್ ಕೊಹ್ಲಿ
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ