ಒಂದೇ ಸಮಯಕ್ಕೆ ಅಣ್ತಮ್ಮಂದಿರ ಅರ್ಜಿ ವಿಚಾರಣೆ: ಸೂರಜ್‌ ಸಿಐಡಿ ಕಸ್ಟಡಿಗೆ, ತಮ್ಮ ಪ್ರಜ್ವಲ್‌ ನ್ಯಾಯಾಂಗ ಬಂಧನಕ್ಕೆ!

42ನೇ ಎಸಿಎಂಎಂ ಕೋರ್ಟ್‌ನಲ್ಲಿ ಒಂದೇ ಸಮಯದಲ್ಲಿ ರೇವಣ್ಣ ಸನ್ಸ್ ಅರ್ಜಿಗಳ ವಿಚಾರಣೆ ನಡೆದಿದೆ. ರೇವಣ್ಣನವರ ಹಿರಿಯ ಪುತ್ರ ಸೂರಜ್​ಗೆ ಕೋರ್ಟ್​, ನ್ಯಾಯಾಂಗ ಬಂಧನದಿಂದ ಸಿಐಡಿ ಕಸ್ಟಡಿಗೆ ನೀಡಿದರೆ, ಸಹೋದರ ಪ್ರಜ್ವಲ್​ ರೇವಣ್ಣಗೆ ಎಸ್‌ಐಟಿ ಕಸ್ಟಡಿಯಿಂದ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಒಂದೇ ಸಮಯಕ್ಕೆ ಅಣ್ತಮ್ಮಂದಿರ ಅರ್ಜಿ ವಿಚಾರಣೆ: ಸೂರಜ್‌ ಸಿಐಡಿ ಕಸ್ಟಡಿಗೆ, ತಮ್ಮ ಪ್ರಜ್ವಲ್‌ ನ್ಯಾಯಾಂಗ ಬಂಧನಕ್ಕೆ!
ಸೂರಜ್, ಪ್ರಜ್ವಲ್
Edited By:

Updated on: Jun 24, 2024 | 4:39 PM

ಬೆಂಗಳೂರು, (ಜೂನ್ 24): ಕಾಕತಾಳೀಯ ಎಂಬಂತೆ ಇಂದು (ಜೂನ್ 24) ಬೆಂಗಳೂರಿನ 42ನೇ ಎಸಿಎಂಎಂ (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ಕೋರ್ಟ್​ನಲ್ಲಿ ಮಾಜಿ ಸಚಿವ ಎಚ್​ಡಿ ರೇವಣ್ಣ ಪುತ್ರರ ಅರ್ಜಿ ವಿಚಾರಣೆ ನಡೆದಿದೆ. ಸಲಿಂಗ ಕಾಮ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಜೆಡಿಎಸ್​ ವಿಧಾನಪರಿಷತ್ ಸದಸ್ಯ ಸೂರಜ್‌ ರೇವಣ್ಣನನ್ನು (Suraj Revanna Case) ಕೋರ್ಟ್​, 8 ದಿನ ಸಿಐಡಿ ಕಸ್ಟಡಿಗೆ ನೀಡಿದೆ. ಇನ್ನು ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ಪ್ರಜ್ವಲ್​ ರೇವಣ್ಣಗೆ ಸಿಐಡಿ ಕಸ್ಟಡಿಯಿಂದ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಎರಡು ಪ್ರಕರಣಗಳ ಪ್ರತ್ಯೇಕವಾಗಿ ಅರ್ಜಿ ವಿಚಾರಣೆ ನಡೆಸಿದ
ನ್ಯಾಯಾಧೀಶ ಕೆ.ಎನ್‌.ಶಿವಕುಮಾರ್‌ ಅವರು ಸೂರಜ್‌ನನ್ನು ಜುಲೈ 1ರವರೆಗೆ ಸಿಐಡಿ ಕಸ್ಟಡಿಗೆ ನೀಡಿ ಆದೇಶ ನೀಡಿದ್ದರೆ, ಪ್ರಜ್ವಲ್​ಗೆ ಜುಲೈ 8ರ ವರೆಗೆ ನ್ಯಾಯಾಂಗ ಬಂಧನ ನೀಡಿ ಆದೇಶ ಹೊರಡಿಸಿದರು.

ಜುಲೈ 1ರ ವರೆಗೆ ಸೂರಜ್ ಸಿಐಡಿ ಕಸ್ಟಡಿಗೆ

ಸಲಿಂಗ ಕಾಮ, ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಸೂರಜ್ ರೇವಣ್ಣನನ್ನು ವಿಚಾರಣೆಗಾಗಿ ಹತ್ತು ದಿನ ಕಸ್ಟಡಿಗೆ ನೀಡುವಂತೆ ಸಿಐಡಿ ಅಧಿಕಾರಿಗಳು ಮನವಿ ಮಾಡಿದ್ದರು. ಆದರೆ, ಕೋರ್ಟ್, 10 ದಿನ ಬದಲಾಗಿ 8 ದಿನ ಸಿಐಡಿ ಕಸ್ಟಡಿಗೆ ನೀಡಿದೆ. ಇದರಿಂದ ಜುಲೈ 1 ರವರೆಗೆ ಸೂರಜ್ ರೇವಣ್ಣ ಸಿಐಡಿ ಕಸ್ಟಡಿಯಲ್ಲಿ ಇರಲಿದ್ದಾರೆ.

ಇದನ್ನೂ ಓದಿ: ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಕೇಸ್; ತನಿಖಾಧಿಕಾರಿಗಳ ನೇಮಕ, ಬಾಡಿ ವಾರಂಟ್ ಸಲ್ಲಿಕೆ

ಜುಲೈ 8ರವರೆಗೆ ಪ್ರಜ್ವಲ್‌ಗೆ ನ್ಯಾಯಾಂಗ ಬಂಧನ

ಅಣ್ಣ ಸೂರಜ್ ರೇವಣ್ಣ ಅರ್ಜಿ ವಿಚಾರಣೆ ಮುಗಿಯುತ್ತಿದ್ದಂತೆ ತಮ್ಮ ಪ್ರಜ್ವಲ್ ರೇವಣ್ಣನನ್ನು (Prajwal Revanna) ಎಸ್ಐಟಿ ತಂಡ ಕೋರ್ಟ್‌ಗೆ ಹಾಜರುಪಡಿಸಿತು. ಅತ್ಯಾಚಾರ ಪ್ರಕರಣ ಸಂಬಂಧ ಪ್ರಜ್ವಲ್‌ನ ಕಸ್ಟಡಿಗೆ ಪಡೆಯಲಾಗಿತ್ತು. ಕಸ್ಟಡಿ ಇಂದು (ಜೂನ್ 24) ಅಂತ್ಯವಾದ ಹಿನ್ನೆಲೆಯಲ್ಲಿ 42 ಎಸಿಎಂಎಂ ಕೋರ್ಟ್‌ಗೆ ಎಸ್ಐಟಿ ಹಾಜರು ಪಡಿಸಿದೆ. ಹೀಗಾಗಿ ಜುಲೈ 8ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ‌ ಕೋರ್ಟ್‌ ಆದೇಶ ಹೊರಡಿಸಿದೆ.

ಪ್ರಜ್ವಲ್​ ಜಾಮೀನು ಆದೇಶ ಕಾಯ್ದಿರಿಸಿದ ಕೋರ್ಟ್

ಇನ್ನು ಮತ್ತೊಂದೆಡೆ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್​, ಆದೇಶ ಕಾಯ್ದಿರಿಸಿದೆ. ಜೂನ್ 26ಕ್ಕೆ ಜಾಮೀನು ಅರ್ಜಿ ಸಂಬಂಧ ಆದೇಶ ನೀಡುವ ಸಾಧ್ಯತೆ ಇದೆ. ಹೀಗಾಗಿ ಪ್ರಜ್ವಲ್​ ರೇವಣ್ಣಗೆ ಜಾಮೀನು ಸಿಗುತ್ತಾ? ಅಥವಾ ಜೈಲೇ ಗತಿನಾ ಎನ್ನುವುದನ್ನು ಕಾದುನೋಡಬೇಕಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 4:24 pm, Mon, 24 June 24

ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More
Loading...
Unable to load recommendations.
Follow Us