ಪ್ರಜ್ವಲ್​ ಸುಮಾರು ದಿನ ಪರಾರಿಯಾಗಿದ್ದ, ಈಗ ಸೂರಜ್‌ ಒಂದೇ ದಿನದಲ್ಲಿ ಪೊಲೀಸ್‌ ಬಲೆಗೆ ಬಿದ್ದಿದ್ದೇ ರೋಚಕ!

ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಕುಟುಂಬಕ್ಕೆ ಮತ್ತೊಂದು ಮುಜುಗರ ಎದುರಾಗಿದೆ. ಲೈಂಗಿಕ ದೌರ್ಜನ್ಯ ಹಗರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಬಂಧನವಾಗಿ ವಿಚಾರಣೆ ನಡೆಯುತ್ತಿರುವ ನಡುವೆಯೇ ಅವರ ಸಹೋದರ, ವಿಧಾನ ಪರಿಷತ್‌ ಸದಸ್ಯ ಸೂರಜ್ ರೇವಣ್ಣ ಸೂರಜ್‌ ರೇವಣ್ಣನ ಬಂಧನವಾಗಿದೆ. ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಹಾಸನದಲ್ಲಿ ಸೂರಜ್‌ನನ್ನು ಬಂಧಿಸಲಾಗಿದೆ. ಇನ್ನು ಸೂರಜ್ ರೇವಣ್ಣ ಬಂಧನವಾಗಿದ್ದೇ ರೋಚಕ.

ಪ್ರಜ್ವಲ್​ ಸುಮಾರು ದಿನ ಪರಾರಿಯಾಗಿದ್ದ, ಈಗ ಸೂರಜ್‌ ಒಂದೇ ದಿನದಲ್ಲಿ ಪೊಲೀಸ್‌ ಬಲೆಗೆ ಬಿದ್ದಿದ್ದೇ ರೋಚಕ!
ಸೂರಜ್ ರೇವಣ್ಣ
Follow us
|

Updated on: Jun 23, 2024 | 11:49 AM

ಹಾಸನ, (ಜೂನ್ 23): ಲೈಂಗಿಕ ದೌರ್ಜನ್ಯ ಹಗರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಬಂಧನವಾಗಿ ವಿಚಾರಣೆ ನಡೆಯುತ್ತಿರುವ ನಡುವೆಯೇ ಅವರ ಸಹೋದರ, ವಿಧಾನ ಪರಿಷತ್‌ ಸದಸ್ಯ ಸೂರಜ್ ರೇವಣ್ಣ ಸೂರಜ್‌ ರೇವಣ್ಣ (Suraj Revanna Case)ನ ಬಂಧನವಾಗಿದೆ. ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ (Unnatural sexual abuse)ದ ಆರೋಪದ ಮೇಲೆ ಹಾಸನದಲ್ಲಿ ಸೂರಜ್‌ನನ್ನು ಬಂಧಿಸಲಾಗಿದೆ.  ಪ್ರಜ್ವಲ್ ರೇವಣ್ಣ ಇಪ್ಪತ್ತಕ್ಕೂ ಹೆಚ್ಚು ದಿನಗಳ ಬಳಿಕ ಸಿಕ್ಕಿಬಿದ್ದ. ಈಗ ಸೂರಜ್​, ಅಗ್ಗ ಕೊಟ್ಟು ಕೈ ಕಟ್ಟಿಸಿಕೊಂಡರು ಎನ್ನುವಂತೆ, ಸಾಕ್ಷಿ ನೀಡಲು ಠಾಣೆಗೆ ಬಂದ ಅವರು ತಾವಾಗಿಯೇ ಪೊಲೀಸ್‌ ಬಲೆಗೆ ಬಿದ್ದಿದ್ದಾರೆ.

ತಮ್ಮ ಆಪ್ತ ಸಂತ್ರಸ್ತನ ವಿರುದ್ದ ನೀಡಿದ್ದ ದೂರಿಗೆ ಸಾಕ್ಷಿ ನೀಡಲು ಹಾಸನದ ಸೆನ್ ಪೊಲೀಸ್ ಠಾಣೆಗೆ ಸಂಜೆ 7.30ಕ್ಕೆ ಬಂದಿದ್ದ ಸೂರಜ್‌ ರೇವಣ್ಣನನ್ನು ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆ ಪೊಲೀಸರು, ಸುದೀರ್ಘ ವಿಚಾರಣೆಗೊಳಪಡಿಸಿದರು. ರಾತ್ರಿ 10 ಗಂಟೆಗೆ ಸೂರಜ್‌ ರೇವಣ್ಣಗೆ ಊಟ ನೀಡಿದ ಬಳಿಕ ಇಂದು (ಜೂನ್ 23) ಮುಂಜಾನೆ 4 ಗಂಟೆಯವರೆಗೂ ತನಿಖೆ ನಡೆಸಿ ನಂತರ ಮಲಗಲು ವ್ಯವಸ್ಥೆ ಮಾಡಿದ್ದರು. ಇದಾದ ಬಳಿಕ ಇಂದು ಬೆಳಗ್ಗೆ ಸೂರಜ್‌ ರೇವಣ್ಣ ಅವರನ್ನು ಪೊಲೀಸರು ಅಧಿಕೃತವಾಗಿ ಬಂಧಿಸಿದರು.

ಇದನ್ನೂ ಓದಿ: ಮಾಜಿ ಪ್ರಧಾನಿ ದೇವೇಗೌಡರ ಹಿರಿಯ ಪುತ್ರನ ಕುಟುಂಬಕ್ಕೆ ಎದುರಾದ ಸಂಕಷ್ಟದ ಮೇಲೆ ಸಂಕಷ್ಟ

ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ ದೌರ್ಜನ್ಯ ಎಸಗಿದ್ದಾರೆ ಎಂದು ಸೂರಜ್‌ ರೇವಣ್ಣ ವಿರುದ್ಧ ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತರೊಬ್ಬರು ಆರೋಪಿಸಿ ಎಫ್‌ಐಆರ್‌ ದಾಖಲಿಸಿದ್ದರು. ಇತ್ತ ಸಂತ್ರಸ್ತ ದೂರು ದಾಖಲಿಸುತ್ತಿದ್ದಂತೆ ಆತನ ವಿರುದ್ಧವೇ ಸೂರಜ್‌ ಆಪ್ತರು ದೂರು ನೀಡಿದ್ದರು. ಸುಳ್ಳು ಆರೋಪ ಮಾಡಿ ಐದು ಕೋಟಿ ರೂ. ಹಣಕ್ಕಾಗಿ ಸಂತ್ರಸ್ತ ಪೀಡಿಸಿದ್ದಾನೆ ಎಂದು ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ನೀಡಿದ ದೂರಿನ ಮೇರೆಗೆ ಹೊಳೆನರಸೀಪುರ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

ಐದು ಕೋಟಿ ರೂ. ಬ್ಲ್ಯಾಕ್‌ಮೇಲ್ ಕೇಸ್‌ನಲ್ಲಿ ಸಾಕ್ಷಿ ನೀಡಲು ಸೂರಜ್ ಪೊಲೀಸ್‌ ಠಾಣೆಗೆ ಆಗಮಿಸಿದ್ದರು. ಆಡಿಯೊ ರೆಕಾರ್ಡ್, ಫೋಟೊ ಹಾಗೂ ಇತರ ದಾಖಲೆ ನೀಡುವ ಸಲುವಾಗಿ ಸೂರಜ್ ಬಂದಿದ್ದರು. ಬಂಧನ ಸಾಧ್ಯತೆಯ ನಿರೀಕ್ಷೆ ಮಾಡದೆ ಬಂದ ಸೂರಜ್ ರೇವಣ್ಣ ಇದೀಗ ಅರೆಸ್ಟ್‌ ಆಗಿದ್ದಾರೆ. ಹೊಳೆನರಸೀಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಜನಪ್ರತಿನಿಧಿ ಕೋರ್ಟ್‌ಗೆ ವರ್ಗಾವಣೆ ಸಾಧ್ಯತೆ

ಸೂರಜ್‌ ರೇವಣ್ಣ ವಿರುದ್ಧ ಐಪಿಸಿ ಸೆಕ್ಷೆನ್ 377, 342, 506 ಅಡಿ ಕೇಸ್ ದಾಖಲಾಗಿದ್ದು, ವಿಚಾರಣೆ ಬೆಂಗಳೂರಿನ ಜನಪ್ರತಿನಿಧಿ ಕೋರ್ಟ್‌ಗೆ ವರ್ಗಾವಣೆ ಸಾಧ್ಯತೆ ಇದೆ. ಸೂರಜ್ ವಿಧಾನ ಪರಿಷತ್ ಸದಸ್ಯರಾಗಿರುವ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆ ಜನಪ್ರತಿನಿಧಿ ಕೋರ್ಟ್‌ನಲ್ಲಿ ನಡೆಯುವ ಸಾಧ್ಯತೆ ಇದೆ. ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ ದಾಖಲಾದ ಎಫ್‌ಐಆರ್ ಕೂಡ ವರ್ಗಾವಣೆಯಾಗಲಿದೆ. ಒಂದುವೇಳೆ ಪ್ರಕರಣ ವರ್ಗಾವಣೆಯಾದರೆ ಬೆಂಗಳೂರಿಗೆ ಕರೆದೊಯ್ಯುವ ಸಾಧ್ಯತೆ ಇದೆ. ಕೇಸ್ ವರ್ಗಾವಣೆ ಬಗ್ಗೆ ಪೊಲೀಸರು ಕಾನೂನು ತಜ್ಞರ ಜತೆ ಸಮಾಲೋಚನೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
ಕೇರಳದ ಕಲಾವಿದನ ಕೈಯಲ್ಲಿ ಅರಳಿದ ಪ್ರಧಾನಿ ಮೋದಿ ಭವ್ಯ ಪ್ರತಿಮೆ
ಕೇರಳದ ಕಲಾವಿದನ ಕೈಯಲ್ಲಿ ಅರಳಿದ ಪ್ರಧಾನಿ ಮೋದಿ ಭವ್ಯ ಪ್ರತಿಮೆ
ಕಿರುತೆರೆಗೆ ಎಂಟ್ರಿಕೊಟ್ಟ ನರಸಿಂಹರಾಜು ಮೊಮ್ಮಗ ಅವಿನಾಶ್ ದಿವಾಕರ್
ಕಿರುತೆರೆಗೆ ಎಂಟ್ರಿಕೊಟ್ಟ ನರಸಿಂಹರಾಜು ಮೊಮ್ಮಗ ಅವಿನಾಶ್ ದಿವಾಕರ್
ದೇವಸ್ಥಾನದಲ್ಲಿ ಶಟಗೋಪ ತಲೆ ಮೇಲೆ ಇಡುವುದರ ಮಹತ್ವ ಏನು? ಈ ವಿಡಿಯೋ ನೋಡಿ
ದೇವಸ್ಥಾನದಲ್ಲಿ ಶಟಗೋಪ ತಲೆ ಮೇಲೆ ಇಡುವುದರ ಮಹತ್ವ ಏನು? ಈ ವಿಡಿಯೋ ನೋಡಿ
ಈ ರಾಶಿಯವರು ಇಂದು ಪುಣ್ಯಸ್ಥಳದ ದರ್ಶ‌ನಕ್ಕೆಂದು ಪ್ರಯಾಣ ಮಾಡುವರು
ಈ ರಾಶಿಯವರು ಇಂದು ಪುಣ್ಯಸ್ಥಳದ ದರ್ಶ‌ನಕ್ಕೆಂದು ಪ್ರಯಾಣ ಮಾಡುವರು
ಸೋನಲ್​-ತರುಣ್​ ಸುಧೀರ್​ ಮದುವೆ? ಮೊದಲ ಬಾರಿ ಮಾತನಾಡಿದ ಮಾಲತಿ ಸುಧೀರ್​
ಸೋನಲ್​-ತರುಣ್​ ಸುಧೀರ್​ ಮದುವೆ? ಮೊದಲ ಬಾರಿ ಮಾತನಾಡಿದ ಮಾಲತಿ ಸುಧೀರ್​
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
ಒಂದು ಕುಟುಂಬದ ಮೇಲಿನ ದ್ವೇಷಕ್ಕಾಗಿ ಹಾಸನದ ಮಾನ ಹರಾಜಾಯಿತು: ದೇವರಾಜೇಗೌಡ 
‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’
‘ರೇಣುಕಾ ಸ್ವಾಮಿ ಮಾಡಿದ್ದು ದೊಡ್ಡ ತಪ್ಪು, ಅದನ್ನು ಯಾರೂ ಗಮನಿಸ್ತಿಲ್ಲ’
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ಸಿದ್ದರಾಮಯ್ಯರೆಡೆ ವಿಜಯಾನಂದ ಕಾಶಪ್ಪನವರ್ ಧೋರಣೆ ಬದಲಾಗಿದೆಯೇ?
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ನಮಗಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದರೆ ಸಾಕು: ಕೃಷ್ಣ ಭೈರೇಗೌಡ
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು
ಪವಿತ್ರಾ ಗೌಡ ಗೆಳತಿ ಸಮತಾ ದರ್ಶನ್​ರನ್ನು ಭೇಟಿಯಾಗಬೇಕೆಂದಾಗ ನಟ ಒಪ್ಪಿದರು