ಪ್ರಜ್ವಲ್ ರೇವಣ್ಣ ವಿಡಿಯೋ ಕೇಸ್: SIT ತನಿಖೆಗೆ ಸಂತ್ರಸ್ತೆಯರು ಹಿಂದೇಟು!

Prajwal Revanna Video Pen Drive Case: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ದಿನ ದಿನಕ್ಕೆ ಬೇರೆ-ಬೇರೆ ಸ್ವರೂಪ ಪಡೆದುಕೊಂಡಿದೆ, ಈಗಾಗಲೇ ಈ ಪ್ರಕರಣದ ತನಿಖೆಯನ್ನಯ ಎಸ್​ಐಟಿ ಅಧಿಕಾರಿಗಳು ಚುರುಕುಗೊಳಿಸಿದ್ದಾರೆ. ಈಗಾಗಲೇ ಪ್ರಕರಣದ ಆರೋಪಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ. ಆದ್ರೆ, ಸಂತ್ರಸ್ತೆ ಮಹಿಳೆಯರು ಎಸ್​ಐಟಿ ಮುಂದೆ ಮಾಹಿತಿ ನೀಡಲು ಹಿಂದೇಟು ಹಾಕುತ್ತಿದ್ದಾರೆ.

ಪ್ರಜ್ವಲ್ ರೇವಣ್ಣ ವಿಡಿಯೋ ಕೇಸ್: SIT ತನಿಖೆಗೆ ಸಂತ್ರಸ್ತೆಯರು ಹಿಂದೇಟು!
Edited By:

Updated on: May 01, 2024 | 3:52 PM

ಬೆಂಗಳೂರು, (ಮೇ.01): ಹಾಸನ(Hassan) ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೋ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಎಸ್‌ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಈಗಾಗಲೇ ಪ್ರಕರಣದ ಆರೋಪಿಗಳಾದ ಪ್ರಜ್ವಲ್ ರೇವಣ್ಣ ಮತ್ತು ಎಚ್​ಡಿ ರೇವಣ್ಣ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ವಿಚಾರಣೆಗೆ ಬರುವಂತೆ ಸೂಚಿಸಿದೆ. ಆದ್ರೆ, ಇತ್ತ ವಿಡಿಯೋಗಳ ಬಗ್ಗೆ ಮಾಹಿತಿ ನೀಡಲು ಸಂತ್ರಸ್ತೆಯರು ಹಿಂದೇಟು ಹಾಕುತ್ತಿದ್ದಾರೆ. ನನಗೆ ತೊಂದರೆ ಕೊಟ್ಟರೆ ಸೂಸೈಡ್ ಮಾಡಿಕೊಳ್ಳುತ್ತೇವೆ ಎಂದು ಬೆದರಿಕೆ ಒಡ್ಡುತ್ತಿದ್ದಾರೆ ಎಂಬ ಅಂಶ ಬೆಳಕಿಗೆ ಬಂದಿದೆ.

ಪ್ರಜ್ವಲ್‌ ರೇವಣ್ಣ ಒಬ್ಬ ಸಂಸದ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ವಂಶದ ಕುಡಿ. ಈ ಹಿನ್ನೆಲೆಯಲ್ಲಿ ಇದೊಂದು ಹೈ ಪ್ರೊಫೈಲ್‌ ಕೇಸ್‌ ಆಗಿದೆ. ಇದರ ಜತೆಗೆ ವಿಡಿಯೋ ಲೀಕ್‌ ವೇಳೆ ಸಂತ್ರಸ್ತೆಯರ ಮುಖವನ್ನು ಬ್ಲರ್‌ ಮಾಡಲಾಗಿಲ್ಲ. ಇದರಿಂದ ಅದೆಷ್ಟೋ ಹೆಣ್ಣು ಮಕ್ಕಳು ಹೊರಗಡೆ ತಲೆ ಎತ್ತಿ ತಿರುಗುವಂತೆ ಆಗುತ್ತಿಲ್ಲ. ಈ ಮಧ್ಯೆ ಎಸ್‌ಐಟಿ ಅಧಿಕಾರಿಗಳು ತನಿಖೆಗಾಗಿ ಅವರನ್ನು ಭೇಟಿ ಮಾಡಿ ಹೇಳಿಕೆ ಪಡೆಯಲು ಹೋದರೆ ಮೊದಲೇ ನೊಂದಿರುವ ನಮ್ಮನ್ನು ಮತ್ತಷ್ಟು ನೋಯಿಸಬೇಡಿ. ಈ ಬಗ್ಗೆ ನಮ್ಮ ಬಳಿ ಏನನ್ನೂ ಕೇಳಬೇಡಿ. ಇದು ನಮ್ಮ ಜೀವನದ ಪ್ರಶ್ನೆಯಾಗಿದೆ. ಅಷ್ಟಕ್ಕೂ ನೀವು ಒತ್ತಾಯ ಮಾಡಿದ್ದೇ ಆದರೆ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತೆ ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಆರೋಪ: ಮೇ 3 ರಂದು ಜರ್ಮನಿಯಿಂದ ಪ್ರಜ್ವಲ್​ ರೇವಣ್ಣ ರಾಜ್ಯಕ್ಕೆ ವಾಪಸ್​

ದೂರುದಾರೆ ಹೊರತುಪಡಿಸಿ ಉಳಿದವರಿಂದ ಸ್ಪಂದನೆ ಇಲ್ಲ

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ವಿಡಿಯೋದಲ್ಲಿರುವ ಸಂತ್ರಸ್ತ ಮಹಿಳೆಯರನ್ನು ಸಂಪರ್ಕಿಸಲು ಎಸ್‌ಐಟಿ ತಂಡವು ಸಾಕಷ್ಟು ಪ್ರಯತ್ನಪಟ್ಟಿದೆ. ಎಷ್ಟೇ ಪ್ರಯತ್ನ ಪಟ್ಟರೂ ಸಂತ್ರಸ್ತೆಯರು ಮಾತ್ರ ಇವರಿಗೆ ಸ್ಪಂದಿಸುತ್ತಿಲ್ಲ. ನಾವು ಏನೂ ಹೇಳಲ್ಲ, ಏನನ್ನೂ ಕೇಳಬೇಡಿ ಎಂದು ಸಂತ್ರಸ್ತೆಯರು ಹೇಳುತ್ತಿದ್ದಾರೆ. ನಾವೇನು ದೂರು ಕೊಟ್ಟಿಲ್ಲ, ನಮ್ಮನ್ನು ಯಾಕೆ ಎಳೆದು ತರುತ್ತೀರಿ? ನಮ್ಮನ್ನು ನಮ್ಮ ಪಾಡಿಗೆ ಬಿಟ್ಟುಬಿಡಿ ಎಂದು ಹೇಳುತ್ತಿದ್ದಾರಂತೆ. ಇದರಿಂದ ಎಸ್‌ಐಟಿ ತನಿಖೆಗೆ ಸ್ವಲ್ಪ ಹಿನ್ನಡೆಯಾಗಿದೆ. ಹೀಗಾಗಿ ಎಸ್​ಐಟಿ ಅಧಿಕಾರಿಗಳು ಸದ್ಯಕ್ಕೆ ದೂರು ಕೊಟ್ಟಿರುವ ಓರ್ವ ಸಂತ್ರಸ್ತೆಯ ಮಾಹಿತಿ ಆಧರಿಸಿ ತನಿಖೆ ಮುಂದುವರೆಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 3:49 pm, Wed, 1 May 24

ರಾಚಪ್ಪಾಜಿ ನಾಯ್ಕ್

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
Loading...
Unable to load recommendations.
Follow Us