Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆಗೆ ರಜೆ ಹಿನ್ನಲೆ ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲು

ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕದಾಳು ಸಮೀಪದ ಮುತ್ತಿಗೆ ಗ್ರಾಮದಲ್ಲಿ ಶಾಲೆಗೆ ರಜೆ ಇರುವುದರಿಂದ ಕೆರೆಗೆ ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲಾಗಿರುವಂತಹ ಘಟನೆ ನಡೆದಿದೆ. ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. 

ಶಾಲೆಗೆ ರಜೆ ಹಿನ್ನಲೆ ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲು
ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು ನೀರುಪಾಲು
Follow us
ಮಂಜುನಾಥ ಕೆಬಿ
| Updated By: ಗಂಗಾಧರ​ ಬ. ಸಾಬೋಜಿ

Updated on:May 16, 2024 | 2:54 PM

ಹಾಸನ, ಮೇ 16: ಕೆರೆಯಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳು (children) ನೀರುಪಾಲಾಗಿರುವಂತಹ ಘಟನೆ ಜಿಲ್ಲೆಯ ಆಲೂರು ತಾಲೂಕಿನ ಕದಾಳು ಸಮೀಪದ ಮುತ್ತಿಗೆ ಗ್ರಾಮದಲ್ಲಿ ದುರಂತ ಸಂಭವಿಸಿದೆ. ಜೀವನ್(13), ಸಾತ್ವಿಕ್(11), ವಿಶ್ವ(12), ಪೃಥ್ವಿ(12) ಮೃತರು (death). ಶಾಲೆಗೆ ರಜೆ ಇರುವುದರಿಂದ ಕೆರೆಗೆ ಈಜಲು ಹೋಗಿದ್ದ ಸಂದರ್ಭದಲ್ಲಿ ಅವಘಡ ಸಂಭವಿಸಿದೆ. 12.30 ಸುಮಾರಿಗೆ ಘಟನೆ ನಡೆದಿದೆ. ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಸದ್ಯ ನಾಲ್ವರು ಮಕ್ಕಳ ಶವ ಹೊರತೆಗೆದಿರುವ ಅಗ್ನಿಶಾಮಕ ಸಿಬ್ಬಂದಿ ಮರಣೋತ್ತರ ಪರೀಕ್ಷೆಗಾಗಿ ಶವಗಳು ತಾಲೂಕು ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿದೆ. ಸ್ಥಳಕ್ಕೆ ಡಿಸಿ ಸತ್ಯಭಾಮಾ, ಎಸ್‌ಪಿ ಮೊಹಮ್ಮದ್ ಸುಜೇತಾ ಭೇಟಿ ನೀಡಿದ್ದಾರೆ. ಸ್ಥಳದಲ್ಲಿ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ.

ಕಾರಿನ ಗ್ಲಾಸ್​​​​ ಒಡೆದು 45 ಗ್ರಾಂ ತೂಕದ ಚಿನ್ನ ಕಳ್ಳತನ

ನೆಲಮಂಗಲ: ತಾಲೂಕಿನ ದಾಬಸ್​​ಪೇಟೆ ಬಳಿ ಕಾರಿನ ಗಾಜು​​​​ ಒಡೆದು 45 ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿರುವಂತಹ ಘಟನೆ ನಡೆದಿದೆ. ಮಾರುತಿಮಹಲ್ ಕಲ್ಯಾಣ ಮಂಟಪದ ಬಳಿಯ ಪಾರ್ಕಿಂಗ್​​ನಲ್ಲಿ ಕಾರು​ ನಿಲ್ಲಿಸಿ ದಂಪತಿ ಮದುವೆಗೆ ತೆರಳಿದ್ದರು.

ಇದನ್ನೂ ಓದಿ: ಪತ್ನಿಗೆ ವಿಡಿಯೋ ಕಾಲ್ ಮಾಡಿ ಹೆದರಿಸಲು ಹೋಗಿ ಜಿಮ್​​ ಟ್ರೈನರ್ ಸಾವು

ಮದುವೆ ಮುಗಿಸಿ ವಾಪಸ್ ಕಾರು ಬಳಿ ಬಂದಾಗ ಕಾರಿನಲ್ಲಿದ್ದ 45 ಗ್ರಾಂ ತೂಕದ ಚಿನ್ನಾಭರಣವಿರುವ ಬ್ಯಾಗ್ ಕಳ್ಳತನವಾಗಿದೆ. ಚಿಕ್ಕಗೊಲ್ಲರಹಟ್ಟಿ ಗ್ರಾಮದ ರುದ್ರೇಶ್ ಎಂಬುವರಿಗೆ ಸೇರಿದ ಕಾರು. ದಾಬಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯುತ್ ಉತ್ಪಾದನಾ ಕೇಂದ್ರದಲ್ಲಿ ಮೇಲಿಂದ ಬಿದ್ದು ಕಾರ್ಮಿಕ ಸಾವು

ವಿಜಯಪುರ: ಜಿಲ್ಲೆಯ ಕೊಲ್ಹಾರ ತಾಲೂಕಿನ ಕೂಡಗಿ ಬಳಿಯ ರಾಷ್ಟ್ರೀಯ ಶಾಖೋತ್ಪನ್ನ ವಿದ್ಯುತ್ ಉತ್ಪಾದನಾ (ಎನ್​ಟಿಸಿ) ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದ ಉತ್ತರಪ್ರದೇಶ ಮೂಲದ ಕಾರ್ಮಿಕ ಚಿಮಣಿ ಮೇಲಿಂದ ಬಿದ್ದು ಮೃತಪಟ್ಟಿರುವ ದುರಂತ ಘಟನೆ ಜರುಗಿದೆ. ಮೃತ ಕಾರ್ಮಿಕನನ್ನು ಉತ್ತರ ಪ್ರದೇಶದ ಗಾಜಿಪುರ ಮೂಲದ ಕಿಶನಕುಮಾರ ಭಾರದ್ವಾಜ್ (32) ಎಂದು ಗುರುತಿಸಲಾಗಿದೆ. ಇಂಡಿಯನ್ ಬ್ಯಾಗ್ ಪ್ರೈವೇಟ್ ಲಿಮಿಟೆಡ್ ಮೂಲಕ ಕಿಶನಕುಮಾರ ಕೊಲ್ಹಾರ ತಾಲೂಕಿನ ಕೂಡಗಿ ಎನ್​​ಟಿಪಿಸಿ ಘಟಕದಲ್ಲಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದ.

ಇದನ್ನೂ ಓದಿ: ಸರ್ಕಾರಿ ಕೆಲಸ ಕೊಡಿಸುವುದಾಗಿ ಸಿಐಡಿ ಅಧಿಕಾರಿಗಳಿಂದಲೇ 40 ಲಕ್ಷ ರೂ. ವಂಚನೆ: ಕಾಂಗ್ರೆಸ್​ನ ಪಾಲು ಎಷ್ಟು ಎಂದ ಬಿಜೆಪಿ

ನಿನ್ನೆ ಸಾಯಂಕಾಲ ಚಿಮಣಿಯಲ್ಲಿ ಕೇಬಲ್ ಅಳವಡಿಸೋ ಕೆಲಸದಲ್ಲಿ ತೊಡಗಿದ್ದಾಗ 130 ಅಡಿ ಎತ್ತರದಿಂದ ಆಯತಪ್ಪಿ ಕೆಳಗೆ ಬಿದ್ದು, ಮೃತಪಟ್ಟಿದ್ದಾನೆ. ಕಿಶನಕುಮಾರ ದುರಂತ ಘಟನೆ ಬಳಿಕ ಆಕ್ರೋಶಗೊಂಡ ಕಾರ್ಮಿಕರು, ಅಪಾಯಕಾರಿ ಕೆಲಸದಲ್ಲಿ ತೊಡಗುವ ಕಾರ್ಮಿಕರಿಗೆ ಸೂಕ್ತ ರಕ್ಷಣೆ ಇಲ್ಲ. ರಕ್ಷಣಾತ್ಮಕ ಪರಿಕರಗಳು ಇಲ್ಲದೇ ಕೆಲಸ ಮಾಡುವ ಕಾರ್ಮಿಕರು ಈ ರೀತಿ ದುರಂತ ಸಾವಿಗೆ ಈಡಾಗುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಕಾರ್ಮಿಕರು ಘಟಕದ ಎದುರು ಪ್ರತಿಭಟನೆ ನಡೆಸಿದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:58 pm, Thu, 16 May 24