ದೇವರಾಜೇಗೌಡಗೆ ಮತ್ತಷ್ಟು ಸಂಕಷ್ಟ: ಹಳೇ ಕೇಸ್​ಗಳು ರೀ ಓಪನ್​

ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರ ಬಂಧನವಾಗಿದ್ದಾರೆ. ಪ್ರಕರಣ ತನಿಖೆಯನ್ನು ಹೊಳೆನರಸೀಪುರ ಠಾಣೆಯ ಪೊಲೀಸರು ನಡೆಸುತ್ತಿದ್ದಾರೆ. ಸದ್ಯ ದೇವರಾಜೇಗೌಡ ನ್ಯಾಯಾಂಗ ಬಂಧನದಲ್ಲಿದ್ದು, ಅವರ ವಿರುದ್ಧ ಹಳೇ ಕೇಸ್​ಗಳು ರೀ ಓಪನ್​ ಆಗಿವೆ.

ದೇವರಾಜೇಗೌಡಗೆ ಮತ್ತಷ್ಟು ಸಂಕಷ್ಟ: ಹಳೇ ಕೇಸ್​ಗಳು ರೀ ಓಪನ್​
ವಕೀಲ ದೇವರಾಜೇಗೌಡ
Follow us
ಮಂಜುನಾಥ ಕೆಬಿ
| Updated By: ವಿವೇಕ ಬಿರಾದಾರ

Updated on:May 12, 2024 | 10:21 AM

ಹಾಸನ, ಮೇ 12: ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಿಜೆಪಿ (BJP) ಮುಖಂಡ, ವಕೀಲ ದೇವರಾಜೇಗೌಡ (Devaraje Gowda) ಅವರನ್ನು ಬಂಧಿಸಲಾಗಿದೆ. ವಕೀಲ ದೇವರಾಜೇಗೌಡ ವಿರುದ್ಧದ ಅತ್ಯಾಚಾರ ಪ್ರಕರಣ ಜೊತೆಗೆ ಹಲವು ಹಳೆ ಕೇಸ್​ಗಳನ್ನು ವಿಶೇಷ ತನಿಖಾ ಅಧಿಕಾರಿಗಳು (SIT) ರೀ ಓಪನ್​ ಮಾಡಿದ್ದಾರೆ. ದೇವರಾಜೇಗೌಡ ವಿರುದ್ಧ ಚೀಟಿಂಗ್ ಕೇಸ್​ ಸೇರಿದಂತೆ 5ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಅತ್ಯಾಚಾರ ಪ್ರಕರಣ ಜೊತೆಗೆ ಹಳೇ ಪ್ರಕರಣಗಳ ತನಿಖೆಯೂ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ದೇವರಾಜೇಗೌಡರನ್ನು ಎಸ್​ಐಟಿ ಅಧಿಕಾರಿಗಳು ಸೋಮವಾರ (ಮೇ13) ಬಾಡಿ ವಾರಂಟ್ ಮೇಲೆ ವಶಕ್ಕೆ ಪಡೆಯುವ ಸಾಧ್ಯತೆ ಇದೆ.

ಹಳೇ ಪ್ರಕರಣಗಳು

ಕರ್ತವ್ಯಕ್ಕೆ ಅಡ್ಡಿ ಆರೋಪದಲ್ಲಿ ಮಾರ್ಚ್ 14 ರಂದು ದೇವರಾಜೇಗೌಡ ವಿರುದ್ಧ ಜಿಲ್ಲಾಧಿಕಾರಿ ಸತ್ಯಭಾಮ ಹಾಸನ ನಗರ ಠಾಣೆಯಲ್ಲಿ ದೂರು ದಾಖಲಸಿದ್ದರು. ಜಿಲ್ಲಾಧಿಕಾರಿಗಳ ದೂರು ಆಧರಿಸಿ ಹಾಸನ ನಗರ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ವಿಚಾರಣೆ ನಡೆಸಲಾಗಿತ್ತು. ನಂತರ ಮಾರ್ಚ್ 29 ರಂದು ವ್ಯಕ್ತಿಯೊಬ್ಬರಿಂದ ಹೊಳೆನರಸೀಪುರ ನಗರ ಠಾಣೆಯಲ್ಲಿ ಜಾತಿನಿಂದನೆ ಪ್ರಕರಣ ದಾಖಲಾಗಿದೆ. ಕರ್ತವ್ಯಕ್ಕೆ ಅಡ್ಡಿಣ ಜಾತಿ ನಿಂದನೆ, ಲೈಂಗಿಕ ಕಿರುಕುಳ, ಅತ್ಯಾಚಾರ ಆರೋಪ ಸೇರಿದಂತೆ ಹಲವು ಪ್ರಕರಣಗಳ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ.

ದೇವರಾಜೇಗೌಡ ಪರಾರಿಯಾಗುತ್ತಿದ್ದು ಎಲ್ಲಿಗೆ?

ತನ್ನ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬರುತ್ತಿದ್ದಂತೆ ದೇವರಾಜೇಗೌಡ ರಾಜ್ಯದಿಂದ ಪರಾರಿಯಾಗಲು ಯತ್ನಿಸಿದ್ದರು. ಆದರೆ ಚಿತ್ರದುರ್ಗ ಪೊಲೀಸರು ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರವಾಸ ಎಂದು ಹೇಳಿ ದೇವರಾಜೇಗೌಡ ಹಿರಿಯೂರಿನಿಂದ ಪುಣೆಗೆ ತೆರಳಿ ಅಲ್ಲಿಂದೆ ದೆಹಲಿಗೆ ಹೋಗಲು ನಿರ್ಧರಿಸಿದ್ದನು. ದೆಹಲಿಯಲ್ಲಿ ಮಹಾನಾಯಕರ ಭೇಟಿಯಾಗಲು ಯೋಚಿಸಿದ್ದನು.

ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಆರೋಪ: ವಕೀಲ ದೇವರಾಜೇಗೌಡ ಪೊಲೀಸರಿಗೆ ಸಿಕ್ಕಿದ್ದು ಹೇಗೆ? ಇಲ್ಲಿದೆ ಓದಿ

ಎರಡು ಟ್ರಾಲಿ ಬ್ಯಾಗ್, ಒಂದು ಮೊಬೈಲ್ ಮತ್ತು ಆಡಿಯೋ, ವಿಡಿಯೋಗಳ ಸಮೇತ ಹಲವು ದಾಖಲೆಗಳನ್ನು ಇಟ್ಟುಕೊಂಡು ದೆಹಲಿ ಹೋಗುತ್ತಿದ್ದನು. ಆದರೆ ಚಿತ್ರದುರ್ಗ ಪೊಲೀಸರು ಆತನ ಮೊಬೈಲ್​ ಲೊಕೇಶನ್​ ಆಧರಿಸಿ ಕೂಡಲೆ ಬಂಧಿಸಿದ್ದಾರೆ. ದೆಹಲಿಯಲ್ಲಿ ಕುಳಿತು ಸುದ್ದಿಗೋಷ್ಠಿ ನಡೆಸಲು ನಿರ್ಧರಿಸಿದ್ದನು. ಮತ್ತು ಅಲ್ಲಿಯೇ ಕರ್ನಾಟಕದ ಕೆಲ ರಾಜಕಾರಣಿಗಳ ಆಡಿಯೋ, ವಿಡಿಯೋ ದಾಖಲೆ ಬಿಡುಗಡೆಗೆ ಮಾಡಲು ಪ್ಲಾನ್ ಮಾಡಿದ್ದನು. ದೇವರಾಜೇಗೌಡ ಬಂಧನ ವೇಳೆ ಆತನ ಕಾರಿನಲ್ಲಿ ಒಂದು ಮೊಬೈಲ್ ಪತ್ತೆಯಾಗಿದೆ. ಮೊಬೈಲ್ ಪರಿಶೀಲನೆ ವೇಳೆ ಹಲವು ಆಡಿಯೋ ದಾಖಲೆಗಳು ಸಿಕ್ಕಿವೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​, ಶಿವರಾಮೇಗೌಡ, ಕಾರ್ತಿಕ್ ಗೌಡ ಸೇರಿ ಹಲವರ ಸಂಭಾಷಣೆ ಇರುವ ಆಡಿಯೋಗಳು ಪತ್ತೆಯಾಗಿವೆ ಎಂದು ಟಿವಿ9 ಮೂಲಗಳಿಂದ ಮಾಹಿತಿ ದೊರೆತಿದೆ. ಪೊಲೀಸರು ಎಲ್ಲವನ್ನೂ ಪರಿಶೀಲನೆ ನಡೆಸುತ್ತಿದ್ದಾರೆ.

ರಾಜಕೀಯ ಷಡ್ಯಂತ್ರ

ಅಶ್ಲೀಲ ವೀಡಿಯೋ ಪ್ರಕರಣದ ಬಗ್ಗೆ ಧ್ವನಿ ಎತ್ತಿದ್ದಕ್ಕೆ ಬಂಧಿಸಲಾಗಿದೆ. ಇದು‌ ರಾಜಕೀಯ ಷಡ್ಯಂತ್ರ ಎಂದು ದೇವರಾಜೇಗೌಡ ಪರ ವಕೀಲರು ಆರೋಪಿಸಿದ್ದಾರೆ. ಡಿ.ಕೆ ಶಿವಕುಮಾರ್ ವಿರುದ್ಧ ಮಾತಾಡಿದ್ದಕ್ಕೆ ದೇವರಾಜೇಗೌಡ ಜೈಲು ಸೇರಿದರಾ ಅನುಮಾನ ಶುರುವಾಗಿದೆ. ಹಳೆ ಕೇಸ್​ಗೆ‌ ಮತ್ತೊಂದು ಸೆಕ್ಷೆನ್ ಸೇರಿಸಿ ದೇವರಾಜೇಗೌಡ ಅವರನ್ನು ಬಂಧಿಸಲಾಗಿದೆ. ಮೂಲ ದೂರಿನಲ್ಲಿ ಅತ್ಯಾಚಾರ ಅಂತ‌ ದಾಖಲಾಗಿಲ್ಲ. ಆದರೆ ಈ ದೂರು ನೀಡಿ ತಿಂಗಳ ಬಳಿಕ ಅತ್ಯಾಚಾರ ಸೇರ್ಪಡೆ ಮಾಡಲಾಗಿದೆ. ಏ.1 ರಂದು‌ ದೇವರಾಜೇಗೌಡ ಮೇಲೆ ದಾಖಲಾಗಿದ್ದು ಜಾಮೀನು ಸಹಿತ ಪ್ರಕರಣಗಳು. ನಂತರದ ರಾಜಕೀಯ ಬೆಳವಣಿಗೆಯಲ್ಲಿ ಐಪಿಸಿ ಸೆ. 376(1) ಜಾಮೀನು ರಹಿತ ಸೆಕ್ಷನ್ ಸೇರ್ಪಡೆಯಾಗಿವೆ ಎಂದು ದೇವರಾಜೇಗೌಡ ಪರ ವಕೀಲರು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:20 am, Sun, 12 May 24

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ