ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್​: ವಿಡಿಯೋ ನೋಡೋ ಧೈರ್ಯ ಬರಲಿಲ್ಲ, ನಿಖಿಲ್ ಕುಮಾರಸ್ವಾಮಿ

ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ಪ್ರಕರಣ ವಿಚಾರವಾಗಿ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ನನಗೂ ನೋವಾಗಿದೆ. ಆ ವಿಡಿಯೋವನ್ನು ನೋಡುವುದಕ್ಕೆ ನಾನು ಧೈರ್ಯ ಮಾಡಿಲ್ಲ. ನನ್ನ ಆಪ್ತ ವರ್ಗದವರು ಹೇಳಿದ ಪ್ರಕಾರ ಆ ವಿಡಿಯೋಗಳನ್ನು ಕನಿಷ್ಟ ಪಕ್ಷ ಬ್ಲರ್ ಕೂಡ ಮಾಡಿಲ್ಲ. ಆದರೆ ಪಾಪ ಆ ಹೆಣ್ಣು ಮಕ್ಕಳನ್ನ ಓಪನ್ ಆಗಿ ತೋರಿಸಿದ್ದಾರೆ ಎಂದು ಹೇಳಿದ್ದಾರೆ.

Follow us
Sunil MH
| Updated By: ಗಂಗಾಧರ​ ಬ. ಸಾಬೋಜಿ

Updated on:May 04, 2024 | 3:20 PM

ಬೆಂಗಳೂರು, ಮೇ 4: ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ಲೈಂಗಿಕ ಪ್ರಕರಣ ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ. ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಸದ್ಯ ಈ ಪ್ರಕರಣ ಕುರಿತಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಮಾತನಾಡಿದ್ದು, ನನಗೂ ನೋವಾಗಿದೆ. ಆ ವಿಡಿಯೋವನ್ನು ನೋಡುವುದಕ್ಕೆ ನಾನು ಧೈರ್ಯ ಮಾಡಿಲ್ಲ. ನನ್ನ ಆಪ್ತ ವರ್ಗದವರು ಹೇಳಿದ ಪ್ರಕಾರ ಆ ವಿಡಿಯೋಗಳನ್ನು ಕನಿಷ್ಟ ಪಕ್ಷ ಬ್ಲರ್ ಕೂಡ ಮಾಡಿಲ್ಲ. ಆದರೆ ಪಾಪ ಆ ಹೆಣ್ಣು ಮಕ್ಕಳನ್ನ ಓಪನ್ ಆಗಿ ತೋರಿಸಿದ್ದಾರೆ. ಇದು ನಿಜಕ್ಕೂ ಕೂಡ ಬೇಜಾರಾಗುತ್ತೆ. ಇದರ ಬಗ್ಗೆಯೂ ಸಹ ತನಿಖೆ ಆಗಬೇಕು ಎಂದು ಹೇಳಿದ್ದಾರೆ.

ಹಾಸನ ವಿಚಾರ ಆಗಲಿ ನನಗೆ ಅದಕ್ಕೂ ಸಂಬಂಧ ಇಲ್ಲ

ಕರ್ನಾಟಕ ಸರ್ಕಾರ ಈಗಾಗಲೇ SIT ರಚನೆ ಮಾಡಿದೆ. ತನಿಖೆ ನಡೆಯುತ್ತಿದೆ. ಕಾನೂನಿಗಿಂತ ಯಾರು ದೊಡ್ಡವರಲ್ಲ. ಅದು ಒಂದು ಪ್ರಕ್ರಿಯೆ ಅದರ ಬಗ್ಗೆ ನಾನು ಮಾತನಾಡುವುದಕ್ಕೆ ಹೋಗಲ್ಲ. ಅಲ್ಲದೇ ಹಾಸನ ವಿಚಾರ ಆಗಲಿ ನನಗೆ ಅದಕ್ಕೂ ಸಂಬಂಧ ಇಲ್ಲ. ನಾನು ಹೆಚ್ಚಿಗೆ ಹಾಸನಕ್ಕೆ ಕಾಲೇ ಇಟ್ಟಿಲ್ಲ. ಹೋದರೆ ಹಾಸನಾಂಬೆ ಉತ್ಸವಕ್ಕೆ ಮಾತ್ರ ಹೋಗುತ್ತೇನೆ. ಹಾಸನ ಸಂಸದರಿಗೂ ನನಗೂ ಸಂಪರ್ಕ ಇರಲಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ರೇವಣ್ಣನ ನಡವಳಿಕೆ ಸರಿಯಿಲ್ಲ ಇಂಗ್ಲೆಂಡ್​ನಲ್ಲೂ ಒಂದ್ಸಲ ಸಿಕ್ಕಿಬಿದ್ದಿದ್ರು’: ಎಲ್.ಆರ್ ಶಿವರಾಮೇಗೌಡ

ಡಿಕೆ ಬ್ರದರ್ಸ್ ಇಂದ ದೇವೇಗೌಡರು ಹಾಗೂ ಕುಮಾರಸ್ವಾಮಿ ಟಾರ್ಗೆಟ್ ಆಗುತ್ತಿದ್ದಾರೆ ಎಂಬ ವಿಚಾರವಾಗಿ ಮಾತನಾಡಿದ್ದು, ಈ ಒಂದು ಪ್ರಕರಣ ರಾಜ್ಯದ ಜನತೆಗೆ ತಪ್ಪು ಸಂದೇಶ ಕೊಡುತ್ತಿದೆ. ವಿಶೇಷವಾಗಿ ದೇವೇಗೌಡ ಅವರ ಜೀವನ ತೆರೆದ ಪುಸ್ತಕ. ಅಜ್ಜಿ ಚೆನ್ನಮ್ಮ ಯಾವ ರೀತಿ ಬದುಕಿದರು ಅಂತ ಎಲ್ಲರಿಗೂ ಗೊತ್ತಿದೆ. ಅದು ನಮಗೆ ದೊಡ್ಡ ಸ್ಪೂರ್ತಿ. ಯಾವ ರೀತಿ ದಂಪತಿ ಬಾಳಿ ಬದುಕುಬೇಕು. ಹಾಗಾಗಿ ಕೈ ಮುಗಿದು ಕೇಳಿಕೊಳ್ಳುತ್ತೇನೆ ಅವರಿಗೆ 92 ವರ್ಷ ವಯಸ್ಸಾಗಿದೆ. ಅವರಿಗೆ ಸಹಜವಾಗಿ ಮನಸ್ಸಿನ ಮೇಲೆ ಪ್ರಭಾವ ಬೀರುತ್ತೆ. ಒಬ್ಬರೇ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದಾರೆ. ಬಹುಶಃ ಈ ವಿಚಾರದಲ್ಲಿ ಸಾಕಷ್ಟು ನೊಂದಿದ್ದಾರೆ. ದೇವೇಗೌಡರ ಮೇಲೆ ಯಾವ ರೀತಿ ಪ್ರಭಾವ ಬೀರಿದೆ ಅಂತಾ ನಮ್ಮ ಅಜ್ಜಿ ಸಹ ಬಹಳ ನೋವಿನಲ್ಲಿದ್ದಾರೆ ಎಂದರು.

ಇದನ್ನೂ ಓದಿ: ಅಶ್ಲೀಲ ವಿಡಿಯೋ ಪ್ರಕರಣ: ಮೇ 10ರೊಳಗೆ ವಿಚಾರಣೆಗೆ ಹಾಜರಾಗಲು ಪ್ರಜ್ವಲ್ ರೇವಣ್ಣ ನಿರ್ಧಾರ

ಪ್ರಕರಣ ಮುಂದಿಟ್ಟುಕೊಂಡು ದೇವೇಗೌಡರನ್ನ ಹಾಗೂ ಕುಮಾರಸ್ವಾಮಿ ಅವರನ್ನ ರಾಜಕೀಯವಾಗಿ ಮುಗಿಸಬೇಕೆಂಬ ವಿಚಾರವಾಗಿ ಮಾತನಾಡಿದ ಅವರು, ಈ ವಿಷಯಕ್ಕೆ ಸಂಬಂಧಿಸಿದಂತೆ ದೇವೇಗೌಡರನ್ನ ಹಾಗೂ ಕುಮಾರಸ್ವಾಮಿ ಅವರನ್ನ ತರುವುದು ಸರಿಯಲ್ಲ. ಮೋದಿ ಅವರು ಮಧ್ಯ ಪ್ರವೇಶ ಮಾಡಬೇಕೆಂಬ ಕಾಂಗ್ರೆಸ್ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ದೇಶದ ಪ್ರಧಾನಿ ಅವರನ್ನ ಈ ವಿಚಾರಕ್ಕೆ ಕರೆತರುವುದು ಕೂಡ ಒಳ್ಳೆಯದಲ್ಲ. ಅದು ಸೂಕ್ತನೂ ಅಲ್ಲ. ಯಾರೂ ಆರೋಪಿ ಇದ್ದಾರೆ, ಯಾರು ತಪ್ಪು ಮಾಡಿದ್ದಾರೆ ಅವರಿಗೆ ಖಂಡಿತಾ ಶಿಕ್ಷೆ ಆಗಬೇಕು ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 3:13 pm, Sat, 4 May 24

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ