AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ಜೊತೆಗೆ ತಂದೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು

ರಾಜ್ಯ ರಾಜಕೀಯದಲ್ಲಿ ಕೋಲಾಹಲವೆಬ್ಬಿಸಿರುವ ಪೆನ್ ಡ್ರೈವ್​​ನಲ್ಲಿ ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಹಾಸನದ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಹೊಳೆನರಸೀಪುರ ನಗರ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ, ಬೆದರಿಕೆ ಹಾಗೂ ಮಾನಹಾನಿ ಆರೋಪದಲ್ಲಿ ಎಫ್ಐಆರ್‌ ದಾಖಲು ದಾಖಲಾಗಿದ್ದು, ಇದೀಗ ಪ್ರಜ್ವಲ್ ತಂದೆ ಹೆಚ್‌.ಡಿ.ರೇವಣ್ಣ ವಿರುದ್ಧವೂ ಹೊಳೆನರಸೀಪುರ ನಗರ ಪೊಲೀಸ್‌ ಠಾಣೆಯಲ್ಲಿ‌ FIR ದಾಖಲಾಗಿದೆ.

ಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ಜೊತೆಗೆ ತಂದೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು
ಪ್ರಜ್ವಲ್ ರೇವಣ್ಣ, ಹೆಚ್‌.ಡಿ.ರೇವಣ್ಣ
ಮಂಜುನಾಥ ಕೆಬಿ
| Edited By: |

Updated on:Apr 28, 2024 | 6:31 PM

Share

ಹಾಸನ, ಏಪ್ರಿಲ್​ 28: ಸಂಸದ ಪ್ರಜ್ವಲ್ ರೇವಣ್ಣರದ್ದು (prajwal revanna) ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್ಐಆರ್‌ ದಾಖಲಾಗಿದ್ದು, ಇದೀಗ ತಂದೆ ಹೆಚ್‌.ಡಿ.ರೇವಣ್ಣ (HD Revanna) ವಿರುದ್ಧವೂ ಹೊಳೆನರಸೀಪುರ ನಗರ ಪೊಲೀಸ್‌ ಠಾಣೆಯಲ್ಲಿ‌ ಎಫ್ಐಆರ್‌ ದಾಖಲಾಗಿದೆ. ಪ್ರಕರಣದ ಎ1 ಆರೋಪಿ ಹೆಚ್‌.ಡಿ.ರೇವಣ್ಣ, ಎ2 ಪ್ರಜ್ವಲ್ ರೇವಣ್ಣ ಆಗಿದ್ದು, ಈ ಹಿಂದೆ ರೇವಣ್ಣ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಸಂತ್ರಸ್ತ ಮಹಿಳೆ ದೂರು ಆಧರಿಸಿ ಪೊಲೀಸರು FIR ದಾಖಲಿಸಿದ್ದಾರೆ.

ಐಪಿಸಿ ಸೆಕ್ಷನ್ 354A (ಲೈಂಗಿಕ ಕಿರುಕುಳ ಆರೋಪ), 354D (ಮಹಿಳೆಗೆ ಮುಜುಗರ ಆಗುವಂತೆ ಮಾಡುವುದು), 506 (ಬೆದರಿಕೆ), 509 (ಮಹಿಳೆ ಮಾನಕ್ಕೆ ಹಾನಿ) ರಡಿ FIR ದಾಖಲಿಸಲಾಗಿದೆ. ಹಲವು ಮಹಿಳೆಯರ ಮೇಲೆ ದೌರ್ಜನ್ಯವೆಸಗಿದ ದೃಶ್ಯಗಳು ಹರಿದಾಡಿದ್ದವು. ಹೀಗಾಗಿ ಹೊಳೆನರಸೀಪುರ ನಗರ ಪೊಲೀಸ್ ಠಾಣೆಗೆ ಸಂತ್ರಸ್ತ ಮಹಿಳೆ ದೂರು ನೀಡಿದ್ದಾರೆ.

ದೂರಿನಲ್ಲಿ ಲೈಂಗಿಕ ದೌರ್ಜನ್ಯ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟ ಸಂತ್ರಸ್ತೆ

ನಮ್ಮ ಪತಿಗೆ ಹೆಚ್‌.ಡಿ.ರೇವಣ್ಣ ತಮ್ಮ ಡೇರಿಯಲ್ಲಿ ಕೆಲಸ ಕೊಡಿಸಿದ್ದರು. ಬಳಿಕ 2015ರಲ್ಲಿ ಹಾಸ್ಟೆಲ್‌ವೊಂದರಲ್ಲಿ ಅಡುಗೆ ಕೆಲಸಕ್ಕೆ ಸೇರಿಸಿದ್ದರು. ನಂತರ ತಮ್ಮ ಮನೆಯಲ್ಲಿ ಅಡುಗೆ ಕೆಲಸಕ್ಕೆ ಬರುವಂತೆ ರೇವಣ್ಣ ಹೇಳಿದ್ದರು. ಅಡುಗೆ ಕೆಲಸಕ್ಕೆ ಸೇರಿಕೊಂಡ ಬಳಿಕ ಭವಾನಿ ರೇವಣ್ಣ ಮನೆಯಲ್ಲಿಲ್ಲದ ವೇಳೆ ಮೈಕೈ ಮುಟ್ಟಿ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಕೊಠಡಿಯಲ್ಲಿದ್ದಾಗ ಹಣ್ಣು ನೀಡುವ ನೆಪದಲ್ಲಿ ಸೀರೆ ಹಿಡಿದು ಎಳೆದಾಡಿದ್ದಾರೆ. ಅಡುಗೆ ಮನೆಗೆ ಬಂದು ಪ್ರಜ್ವಲ್ ಸಹ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಪ್ರಜ್ವಲ್ ರೇವಣ್ಣ ಅಸಭ್ಯವಾಗಿ ವರ್ತಿಸಿದ್ದಾರೆ. ಮೈಗೆ ಎಣ್ಣೆ ಹಚ್ಚಬೇಕೆಂದು ನನ್ನನ್ನು ಕರೆಸಿ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ನನ್ನ ಮಗಳಿಗೂ ವಿಡಿಯೋ ಕಾಲ್ ಮಾಡಿ ಅಸಭ್ಯವಾಗಿ ವರ್ತಿಸಿದ್ದಾರೆ. ಪದೇಪದೆ ಕಾಲ್‌ ಮಾಡಿದ್ದಕ್ಕೆ ಪುತ್ರಿ ಪ್ರಜ್ವಲ್ ನಂಬರ್ ಬ್ಲಾಕ್‌ ಮಾಡಿದ್ದರು. ಲೈಂಗಿಕ ಕಿರುಕುಳ ಹೆಚ್ಚಾದಾಗ ಕೆಲಸಬಿಟ್ಟು ಹೋಗಿದ್ದಾಗಿ ಸಂತ್ರಸ್ತೆ ಹೇಳಿದ್ದು, ಅಶ್ಲೀಲ ವಿಡಿಯೋ ವೈರಲ್ ಆದ ಬಳಿಕ ಆತಂಕಗೊಂಡು ದೂರು ನೀಡಿದ್ದೇನೆ ಎಂದು ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಪ್ರಜ್ವಲ್​ ಪೆನ್ ಡ್ರೈವ್ ಪ್ರಕರಣದ ತನಿಖೆಗೆ ಎಸ್​ಐಟಿ ರಚಿಸಿದ ಸರ್ಕಾರ, ಹೀಗಿದೆ ತನಿಖಾ ತಂಡ

ಏಪ್ರಿಲ್ 21ರಿಂದ ಹಾಸನ ಸೇರಿ ರಾಜ್ಯಾದ್ಯಂತ ಸದ್ದು ಮಾಡುತ್ತಿದ್ದ ಪೆನ್ ಡ್ರೈವ್ ಪ್ರಕರಣ ಇದೀಗ ದಿನಕ್ಕೊಂದು ತಿರುವು ಪಡೆದುಕೊಳುತ್ತಿದೆ. ಪೆನ್ ಡ್ರೈವ್​ನಲ್ಲಿ ಹಲವು ಮಹಿಳೆಯರ ಅಶ್ಲೀಲ ವಿಡಿಯೋ ಹಾಕಿ ಹಂಚಿಕೆ ಮಾಡಲಾಗಿತ್ತು. ಈ ವಿಡಿಯೋ ಮಾಡಿಕೊಂಡಿದ್ದು ಹಾಸನದ ಪ್ರಭಾವಿ ರಾಜಕಾರಣಿ ಎನ್ನುವ ಬಗ್ಗೆಯೂ ಕೂಡ ಆರೋಪಗಳು ಕೇಳಿ ಬಂದಿತ್ತು. ಚುನಾವಣೆ ಹೊಸ್ತಿನಲ್ಲಿ ರಾಜಕೀಯವಾಗಿ ಹಾನಿಮಾಡಲು ತಮ್ಮ ವಿರುದ್ದ ಮಾರ್ಫಿಂಗ್ ಮಾಡಿದ ವಿಡಿಯೋ ಹರಿಯಬಿಡಲಾಗಿದೆ ಎಂದು ಆರೋಪಿಸಿ ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ, ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಬೇಲೂರಿನ ನವೀನ್ ಗೌಡ ಎಂಬುವವರ ವಿರುದ್ದ ದೂರು ನೀಡಿ ಎಫ್.ಐ.ಆರ್ ಕೂಡ ದಾಖಲಾಗಿತ್ತು.

ಇದನ್ನೂ ಓದಿ: ತೀವ್ರ ಸ್ವರೂಪ ಪಡೆದುಕೊಂಡ ಪ್ರಜ್ವಲ್​ ರೇವಣ್ಣ ವಿಡಿಯೋ ಕೇಸ್: ಸಂತ್ರಸ್ತೆಯಿಂದ ಮೊದಲ ದೂರು ದಾಖಲು

ಪ್ರಕರಣದ ಗಂಭೀರ ಸ್ವರೂಪ ಅರಿತ ರಾಜ್ಯ ಮಹಿಳಾ ಆಯೋಗ ತನಿಖೆಗೆ ವಿಶೇಷ ತಂಡ ರಚನೆ ಮಾಡಿ ಎಂದು ಮೂರು ದಿನಗಳ ಹಿಂದೆಯೇ ಪತ್ರ ಬರೆದಿತ್ತು. ನಿನ್ನೆ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದ ಸಿಎಂ ಎಸ್.ಐ.ಟಿ ರಚನೆ ಬಗ್ಗೆಮಾಹಿತಿ ನೀಡಿದ್ದು ಈ ಬೆಳವಣಿಗೆ ಬೆನ್ನಲ್ಲೇ ಹಾಸನ ಜಿಲ್ಲೆಯ ಹೊಳೆನರಸೀಪುರದ ನಗರ ಠಾಣೆಯಲ್ಲಿ ಮಹಿಳೆಯೊಬ್ಬರು ನೀಡಿದ ದೂರು ಆಧರಿಸಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ಕಿರುಕುಳ, ಬೆದರಿಕೆ ಹಾಗೂ ಮಾನಹಾನಿ ಮಾಡಿದ ಆರೋಪದಲ್ಲಿ ದೂರು ದಾಖಲಾಗಿದೆ. ಸಂತ್ರಸ್ತ ಮಹಿಳೆ ಖುದ್ದು ಹಾಜರಾಗಿ ನೀಡಿದ ದೂರು ಸ್ವಿಕರಿಸಿದ ಪೊಲೀಸರು ತನಿಖೆ ಕೈಗೊಂಡಿದ್ದರೆ. ಈ ದೂರಿನ ತನಿಖೆಯನ್ನ ರಾಜ್ಯ ಸರ್ಕಾರ ಮೂವರು ಐಪಿಎಸ್ ಅಧಿಕಾರಿಗಳ ವಿಶೇಷ ತಂಡಕ್ಕೆ ವಹಿಸಿ ಆದೇಶ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:57 pm, Sun, 28 April 24

Follow Us
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ರವಿ ಕನ್ಯಾ, ಚಂದ್ರ ಧನು ರಾಶಿಯಲ್ಲಿ ಸಂಚಾರ: 12 ರಾಶಿಗಳ ಇಂದಿನ ದಿನ ಭವಿಷ್ಯ
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ