ಅಶ್ಲೀಲ ವಿಡಿಯೋ ಕೇಸ್​: ಇಂದು ಮಂಗಳೂರು ಏರ್​ಪೋರ್ಟ್​ಗೆ ಪ್ರಜ್ವಲ್ ಆಗಮನ ಸಾಧ್ಯತೆ

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಆರೋಪ ಪ್ರಕರಣದ ತನಿಖೆ ಚುರುಕುಗೊಂಡಿದೆ. ಪ್ರಜ್ವಲ್ ಬಂಧನಕ್ಕೆ ಸದ್ಯ ಲುಕ್​ಔಟ್​ ನೋಟಿಸ್ ಜಾರಿ ಮಾಡಲಾಗಿದೆ. ಹೀಗಾಗಿ ಇಂದು ಭಾರತಕ್ಕೆ ಪ್ರಜ್ವಲ್ ರೇವಣ್ಣ ಆಗಮನ ಸಾಧ್ಯತೆ ಇದೆ ಎನ್ನಲಾಗುತ್ತಿದ್ದು, ಯಾವುದೇ ಏರ್​ಪೋರ್ಟ್​ಗೆ ಬಂದರೂ ಅಲ್ಲೇ ಬಂಧನ ಪ್ರಕ್ರಿಯೆ ನಡೆಯಲಿದೆ. ಮಂಗಳೂರು, ಕೊಚ್ಚಿ, ಗೋವಾ, ಬೆಂಗಳೂರು ವಿಮಾನ ನಿಲ್ದಾಣಕ್ಕೆ ಪ್ರಜ್ವಲ್ ಆಗಮಿಸಿದರು ಬಂಧಿಸಿ ಸ್ಥಳೀಯ ಠಾಣೆಗೆ ಪೊಲೀಸರು ಕರೆದೊಯ್ಯಲ್ಲಿದ್ದಾರೆ.

ಅಶ್ಲೀಲ ವಿಡಿಯೋ ಕೇಸ್​: ಇಂದು ಮಂಗಳೂರು ಏರ್​ಪೋರ್ಟ್​ಗೆ ಪ್ರಜ್ವಲ್ ಆಗಮನ ಸಾಧ್ಯತೆ
ಅಶ್ಲೀಲ ವಿಡಿಯೋ ಕೇಸ್​: ಇಂದು ಮಂಗಳೂರು ಏರ್​ಪೋರ್ಟ್​ಗೆ ಪ್ರಜ್ವಲ್ ಆಗಮನ ಸಾಧ್ಯತೆ
Follow us
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ಗಂಗಾಧರ​ ಬ. ಸಾಬೋಜಿ

Updated on: May 05, 2024 | 7:48 AM

ಮಂಗಳೂರು, ಮೇ 05: ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧದ ಲೈಂಗಿಕ ಆರೋಪ ಪ್ರಕರಣದ ತನಿಖೆ ಚುರುಕುಗೊಂಡಿದೆ. ಹೆಚ್​ಡಿ ರೇವಣ್ಣ (HD Revanna) ಬಂಧನ ಬೆನ್ನಲ್ಲೇ ಪ್ರಜ್ವಲ್ ಬೇಟೆ ಕೂಡ ಜೋರಾಗಿದೆ. ದೇಶದಿಂದ ದೇಶಕ್ಕೆ ಹಾರುತ್ತಿರುವ ಪ್ರಜ್ವಲ್​ ರೇವಣ್ಣ ಹೆಡೆಮುರಿ ಕಟ್ಟಲು ಎಸ್​ಐಟಿ ಬಲೆ ಸಿದ್ಧವಾಗಿದೆ. ಇಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಜ್ವಲ್ ಆಗಮಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಪ್ರಜ್ವಲ್ ಬಂಧನಕ್ಕೆ ಸದ್ಯ ಲುಕ್​ಔಟ್​ ನೋಟಿಸ್ ಜಾರಿ ಮಾಡಲಾಗಿದೆ. ಹೀಗಾಗಿ ಏರ್​ಪೋರ್ಟ್​ ಇಮಿಗ್ರೇಶನ್ ಬಳಿಯೇ ಬಂಧನ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಮಂಗಳೂರು, ಕೊಚ್ಚಿ, ಗೋವಾ, ಬೆಂಗಳೂರಿನ ಯಾವುದೇ ಏರ್​ಪೋರ್ಟ್​ಗೆ ಬಂದರೂ ಅಲ್ಲೇ ಬಂಧನ ಪ್ರಕ್ರಿಯೆ ನಡೆಯಲಿದೆ. ಬಳಿಕ ಸ್ಥಳೀಯ ಠಾಣೆಗೆ ಕರೆದೊಯ್ಯುವ ಪೊಲೀಸರು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಂತರ ಪ್ರಜ್ವಲ್​ರನ್ನು SIT ಅಧಿಕಾರಿಗಳು ಬೆಂಗಳೂರಿಗೆ ಕರೆತರಲಿದ್ದಾರೆ.

ಇದನ್ನೂ ಓದಿ: ಜೆಡಿಎಸ್​ ಶಾಸಕ ಹೆಚ್​ಡಿ ರೇವಣ್ಣ ಬಂಧನವಾಗಿದ್ದು ಯಾವ ಕೇಸ್​ನಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

ಸದ್ಯ ಇಂದು ಮಂಗಳೂರು ಏರ್​ಪೋರ್ಟ್​ಗೆ ಒಟ್ಟು 4 ವಿಮಾನ ಆಗಮಿಸಿವೆ. ಅಬುದಾಬಿಯಿಂದ ಈಗಷ್ಟೇ ಒಂದು ವಿಮಾನ ಲ್ಯಾಂಡ್ ಆಗಿದೆ. ಬೆಳಗ್ಗೆ 7.55ಕ್ಕೆ ದುಬೈನಿಂದ ಎರಡನೇ ವಿಮಾನ, ಸಂಜೆ 4.35ಕ್ಕೆ ದುಬೈನಿಂದ ಮಂಗಳೂರಿಗೆ 3ನೇ ವಿಮಾನ ಮತ್ತು ಸಂಜೆ 6.15ಕ್ಕೆ ಮಂಗಳೂರಿಗೆ ನಾಲ್ಕನೇ ವಿಮಾನ ಆಗಮಿಸಲಿವೆ.

ಇನ್ನು ಇದೆಲ್ಲದರ ನಡುವೆ ಹಾಸನದ ಆರ್​.ಸಿ.ನಗರದಲ್ಲಿರುವ ಪ್ರಜ್ವಲ್ ರೇವಣ್ಣನ ಸರ್ಕಾರಿ ನಿವಾಸದಲ್ಲಿ ಎಸ್​ಐಟಿ ಅಧಿಕಾರಿಗಳು ನಿನ್ನೆ ಸತತ 5 ಗಂಟೆಗಳ ಕಾಲ ಮಹಜರು ನಡೆಸಿದರು. ಪ್ರಕರಣ ದಾಖಲಾಗುತ್ತಿದ್ದಂತೆ ಪ್ರಜ್ವಲ್ ಪಿ.ಎ ಬಳಿಯಿದ್ದ ನಿವಾಸದ ಕೀ ವಶಕ್ಕೆ ಪಡೆದಿದ್ದ ಪೊಲೀಸರು ಇಬ್ಬರು ಸಂತ್ರಸ್ತೆಯರನ್ನ ಕರೆತಂದು ಅವರ ಸಮ್ಮುಖದಲ್ಲಿ ಮಹಜರು ನಡೆಸಿ ಮಹತ್ವದ ಮಾಹಿತಿಗಳನ್ನ ಕಲೆಹಾಕಿ ಬೆಂಗಳೂರಿಗೆ ಕರೆತಂದ್ದರು.

ಇದನ್ನೂ ಓದಿ: HD Revanna Arrest: ಕೊನೆಗೂ ಹೆಚ್​ಡಿ ರೇವಣ್ಣ ಬಂಧನ; ಲೈಂಗಿಕ ದೌರ್ಜನ್ಯ, ಅಪಹರಣ ಪ್ರಕರಣದಲ್ಲಿ ಅರೆಸ್ಟ್

ಸದ್ಯ ದೇಶದಿಂದ ದೇಶಕ್ಕೆ ಹಾರುತ್ತಾ ತನಿಖೆಗೆ ಹಾಜರಾಗದೇ ಉಳಿದಿರುವ ಪ್ರಜ್ವಲ್ ಮೇಲೆ ಎಲ್ಲರ ಚಿತ್ತ ನೆಟ್ಟಿದ್ದು, ಅವರೂ ನೇರವಾಗಿ ಬಂದು ಸರೆಂಡರ್ ಆಗ್ತಾರಾ? ಅಥವಾ ಪೊಲೀಸರೇ ಪ್ರಜ್ವಲ್​ರನ್ನ ಕರೆತರಲು ಏನಾದ್ರೂ ಕಾನೂನು ದಾರಿ ಹುಡುಕುತ್ತಾರಾ ಕಾದು ನೋಡ್ಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ