ಹಾಸನ: ಪಿಸ್ತೂಲ್​ನಿಂದ ಗುಂಡು ಹಾರಿಸಿ ಬೆದರಿಸಿ ಚಿನ್ನಾಭರಣ ದೋಚಿದ ಖದೀಮರು

ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಮನೆಗೆ ನುಗ್ಗಿದ ಇಬ್ಬರು ದರೋಡೆಕೋರರು ಮನೆಯೊಳಗೆ ಗುಂಡು ಹಾರಿಸಿ ಬೆದರಿಸಿ ಚಿನ್ನಾಭರಣ ದರೋಡೆ ಮಾಡಿ ಎಸ್ಕೇಪ್‌ ಆಗಿದ್ದಾರೆ. ಸ್ಥಳಕ್ಕೆ ಎಸ್ಪಿ ಮಹಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಹಾಸನ: ಪಿಸ್ತೂಲ್​ನಿಂದ ಗುಂಡು ಹಾರಿಸಿ ಬೆದರಿಸಿ ಚಿನ್ನಾಭರಣ ದೋಚಿದ ಖದೀಮರು
ಸಿಸಿಟಿಯಲ್ಲಿ ಸೆರೆಯಾದ ದರೋಡೆಕೋರ
Follow us
| Updated By: ಆಯೇಷಾ ಬಾನು

Updated on: Feb 04, 2024 | 10:08 AM

ಹಾಸನ, ಫೆ.04: ಪಿಸ್ತೂಲ್ ಹಿಡಿದು ಮನೆಗೆ ನುಗ್ಗಿದ ಕಿಡಿಗೇಡಿಗಳು ಮನೆಯೊಳಗೆ ಗುಂಡು ಹಾರಿಸಿ ಬೆದರಿಸಿ ಚಿನ್ನಾಭರಣ ದರೋಡೆ (Robbery) ಮಾಡಿ ಎಸ್ಕೇಪ್‌ ಆಗಿರುವ ಘಟನೆ ಹಾಸನ (Hassan) ಜಿಲ್ಲೆ ಬೇಲೂರು ತಾಲೂಕಿನ ಮುದಿಗೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರವಿ ಎಂಬುವವರ ಮನೆಯಲ್ಲಿ ನಿನ್ನೆ ಸಂಜೆ ದರೋಡೆ ನಡೆದಿದೆ. ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಮನೆಗೆ ನುಗ್ಗಿದ ಇಬ್ಬರು ದರೋಡೆಕೋರರು ಮನೆಯಲ್ಲಿದ್ದ ಶೃತಿ ಹಾಗೂ ಅವರ ತಾಯಿ ಚಂದ್ರಮ್ಮ ಅವರಿಗೆ ಪಿಸ್ತೂಲ್ ತೋರಿಸಿ ಮೈಮೇಲಿದ್ದ ಚಿನ್ನಾಭರಣ ನೀಡುವಂತೆ ಹೆದರಿಸಿ ದರೋಡೆ ಮಾಡಿದ್ದಾರೆ.

ಇನ್ನು ಚಿನ್ನಾಭರಣ ನೀಡದಿದ್ದಕ್ಕೆ ಗೋಡೆಗೆ ಗುಂಡು ಹಾರಿಸಿ ಕೊಲೆ ಮಾಡೋದಾಗಿ ಬೆದರಿಕೆ ಹಾಕಿದ್ದಾರೆ. ಪಿಸ್ತೂಲ್‌ನಿಂದ ಫೈಯರಿಂಗ್ ಆಗುತ್ತಿದ್ದಂತೆ ಹೆದರಿದ ಮಹಿಳೆಯರು ಮೈ ಮೇಲಿದ್ದ ಆಭರಣ ತೆಗೆದುಕೊಟ್ಟಿದ್ದಾರೆ. ಒಂದು ಚಿನ್ನದ ತಾಳಿ, ಒಂದು ಜೊತೆ ಚಿನ್ನದ ಓಲೆ, ಎರಡು ಚಿನ್ನದ ಗುಂಡು ಹಾಗೂ ಮೊಬೈಲ್ ಕಸಿದುಕೊಂಡು ಖದೀಮರು ಪರಾರಿಯಾಗಿದ್ದಾರೆ. ಪಿಸ್ತೂಲ್ ಶಬ್ದ ಕೇಳಿ ಓಡಿ ಬಂದ ಶೃತಿ ಪತಿ ರವಿ ಕಳ್ಳರನ್ನು ಹಿಡಿಯಲು ಮುಂದಾದ ವೇಳೆ ಮತ್ತೊಮ್ಮೆ ಗಾಳಿಯಲ್ಲಿ ಗುಂಡು ಹಾರಿಸಿ ಕಳ್ಳರು ಪರಾರಿಯಾಗಿದ್ದಾರೆ. ಕಳ್ಳರ ಓಡಾಟದ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ. ಪಿಸ್ತೂಲ್ ತೋರಿಸಿ ಕನ್ನಡ ಭಾಷೆಯಲ್ಲೇ ಚಿನ್ನಾಭರಣ ನೀಡುವಂತೆ ಹೆದರಿಸಿ ಚಿನ್ನಾಭರಣ ಕಸಿದು ಪರಾರಿಯಾಗಿದ್ದಾರೆ. ದರೋಡೆಕೋರರ ಕೈಯಲ್ಲಿ ಪಿಸ್ತೂಲ್ ಕಂಡ ಮನೆ ಮಂದಿ ಶಾಕ್​ಗೆ ಒಳಗಾಗಿದ್ದಾರೆ. ಸದ್ಯ ಸ್ಥಳಕ್ಕೆ ಎಸ್ಪಿ ಮಹಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ನರೇಗಲ್ ಪೊಲೀಸರಿಂದಲೇ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ; ಜೀವ ಭಯ ಇದೆ, ರಕ್ಷಣೆ ಕೊಡಿ ಎಂದು ಅಳಲು

ಹೆಲ್ಮೆಟ್​ನಿಂದ ಹೊಡೆದು ಮಹಿಳೆ ಸರ ದೋಚಿದ ಕಳ್ಳರು

ಇನ್ನು ಮತ್ತೊಂದೆಡೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ತಡಸೀಘಟ್ಟ ಬಳಿ ಹೆಲ್ಮೆಟ್​ನಿಂದ ಹೊಡೆದು ಸರಗಳ್ಳತನ ಮಾಡಲಾಗಿದೆ. ಕುರುವಲ್ ತಿಮ್ಮನಹಳ್ಳಿಯ ಮೋನಿಷ(26) ಎಂಬುವವರು ತವರು ಮನೆಯಿಂದ ಮಗು ಜೊತೆ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದರು. ಈ ವೇಳೆ ಪಲ್ಸರ್ ಬೈಕಿನಲ್ಲಿ ಬಂದ 30 ವರ್ಷದ ಅಪರಿಚಿತ ವ್ಯಕ್ತಿ ಹೆಲ್ಮೆಟ್​ನಿಂದ ತಲೆ ಮೇಲೆ ಹಲ್ಲೆ ನಡೆಸಿದ್ದಾನೆ. ಈ ವೇಳೆ ಮೋನಿಷಾ ಮಗು ಜೊತೆ ಕೆಳಗೆ ಬಿದ್ದಿದ್ದು ಖದೀಮ 40ಗ್ರಾಂ ಮಾಂಗಲ್ಯ ಸರ ಎಗರಿಸಿ ಪರಾರಿಯಾಗಿದ್ದಾನೆ. ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ