Sign In

By signing in or creating an account, you agree with Associated Broadcasting Company's Terms & Conditions and Privacy Policy.

Prajwal Revanna Video: ಕೊನೆಗೂ ಸಂಸದ ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ, ತಂದೆ-ತಾಯಿ ಬಳಿ ಕ್ಷಮೆಯಾಚನೆ

ಹಾಸನ ಅಶ್ಲೀಲ ವಿಡಿಯೋ ಪೆನ್​​ಡ್ರೈವ್​ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಜೆಡಿಎಸ್​ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ ಪ್ರತ್ಯಕ್ಷವಾಗಿದ್ದಾರೆ. ವಿಡಿಯೋಗಳು ವೈರಲ್ ಆಗುತ್ತಿದ್ದಂತೆಯೇ ವಿದೇಶದಲ್ಲೊ ತಲೆಮರೆಸಿಕೊಂಡಿದ್ದ ಪ್ರಜ್ವಲ್ ರೇವಣ್ಣ ಬರೋಬ್ಬರಿ ಒಂದು ತಿಂಗಳ ಬಳಿಕ ಪ್ರತ್ಯಕ್ಷರಾಗಿದ್ದಾರೆ.

Follow us
ರಮೇಶ್ ಬಿ. ಜವಳಗೇರಾ
| Updated By: Digi Tech Desk

Updated on:May 27, 2024 | 5:39 PM

ಬೆಂಗಳೂರು, (ಮೇ 27): ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಕೊನೆಗೂ ಪ್ರತ್ಯಕ್ಷರಾಗಿದ್ದಾರೆ. ಬರೋಬ್ಬರಿ ಒಂದು ತಿಂಗಳ ಬಳಿಕ ವಿದೇಶದಲ್ಲಿದ್ದುಕೊಂಡು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದು, ಇದೇ ಮೇ 31ರಂದು ಬೆಳಗ್ಗೆ 10.30ಕ್ಕೆ ಎಸ್​​ಐಟಿ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ಹೇಳಿದ್ದಾರೆ. ವಿಡಿಯೋದಲ್ಲಿ ತಂದೆ- ತಾಯಿ, ತಾತನ ಕ್ಷಮೆಯಾಚಿಸಿದ್ದಾರೆ. ಅಲ್ಲದೇ ಜನರು, ಪಕ್ಷದ ಕಾರ್ಯಕರ್ತರ ಬಳಿಯೂ ಕ್ಷಮೆ ಕೋರಿದ್ದಾರೆ. ಇನ್ನು ವಿದೇಶಕ್ಕೆ ತೆರಳಿರುವ ಬಗ್ಗೆ ಪ್ರತಿಕ್ರಿಯಿಸಿದ್ದು, ನನ್ನ ವಿದೇಶ ಪ್ರವಾಸ ಮೊದಲೇ ನಿಗದಿಯಾಗಿತ್ತು ಎಂದು ವಿಡಿಯೋದಲ್ಲಿ ಸ್ಪಷ್ಟಪಡಿಸಿದ್ದಾರೆ.

ನನ್ನ ವಿದೇಶ ಪ್ರವಾಸ ಮೊದಲೇ ನಿಗದಿಯಾಗಿತ್ತು. ವಿದೇಶಕ್ಕೆ ಹೋದ ಮೂರ್ನಾಲ್ಕು ದಿನದ ಬಳಿಕ ಪ್ರಕರಣದ ಬಗ್ಗೆ ಮಾಹಿತಿ ಗೊತ್ತಾಗಿದೆ. ಏಪ್ರಿಲ್ 26ರಂದು ಚುನಾವಣೆ ನಡೆಯಿತು. ಆಗ ಕೇಸ್​ ದಾಖಲಾಗಿರಲಿಲ್ಲ. ಎಸ್​​ಐಟಿ ಕೂಡ ರಚನೆ ಆಗಿರಲಿಲ್ಲ. ಆ ನಂತರ ಎಸ್​​ಐಟಿ ನೋಟಿಸ್​ ನೀಡಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ. ಆದ್ರೆ, ನನ್ನ ವಿರುದ್ಧದ ಎಲ್ಲಾ ಆರೋಪಗಳು ಸುಳ್ಳು-ಪ್ರಜ್ವಲ್ ರೇವಣ್ಣ ಎಂದು ವಿದೇಶದಿಂದ ವಿಡಿಯೋ ರಿಲೀಸ್ ಮಾಡಿದ್ದಾರೆ.

ಇದನ್ನೂ ಓದಿ: ಪ್ರಜ್ವಲ್​ ರೇವಣ್ಣ ಪಾಸ್​​ಪೋರ್ಟ್​ ರದ್ದತಿಗೆ ಕೇಂದ್ರ ವಿಳಂಬ ಮಾಡುತ್ತಿಲ್ಲ: ಪ್ರಲ್ಹಾದ್​ ಜೋಶಿ

ಪ್ರಜ್ವಲ್ ವಿಡಿಯೋನಲ್ಲಿ ಹೇಳಿದ್ದೇನು?

ನಾನು ಎಲ್ಲಿದ್ದೇನೆ ಎಂಬ ಮಾಹಿತಿ ನೀಡಲು ಬಂದಿದ್ದೇನೆ. ನಾನು ಎಲ್ಲಿಯೂ ಓಡಿ ಹೋಗಿಲ್ಲ. ನನ್ನ ರಾಜಕೀಯ ಬೆಳವಣಿಗೆ ಸಹಿಸಲಾಗದೆ ಷಡ್ಯಂತ್ರ ರೂಪಿಸಲಾಗಿದೆ. ನನ್ನ ವಿರುದ್ಧ ಪಿತೂರಿ ಮಾಡಲಾಗಿದೆ. ಕೆಲವು ಶಕ್ತಿಗಳು ಒಟ್ಟಾಗಿ ನನ್ನ ವಿರುದ್ಧ ಪಿತೂರಿ ನಡೆಸಿವೆ. ಇಷ್ಟಾದರೂ ನಾನು ನನ್ನ ತಾತ, ಜೆಡಿಎಸ್‌ ಕಾರ್ಯಕರ್ತರಿಗೆ ಕ್ಷಮೆಯಾಚಿಸುತ್ತೇನೆ. ನಾನು ಮೇ 31ರಂದು ಬೆಳಗ್ಗೆ 10 ಗಂಟೆಗೆ ಭಾರತಕ್ಕೆ ಬಂದು ಎಸ್‌ಐಟಿ ಎದುರು ವಿಚಾರಣೆಗೆ ಹಾಜರಾಗುತ್ತೇನೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ಆದರೂ, ನಾನು ಭಾರತಕ್ಕೆ ಬಂದು ವಿಚಾರಣೆ ಎದುರಿಸುತ್ತೇನೆ” ಎಂಬುದಾಗಿ ಪ್ರಜ್ವಲ್‌ ರೇವಣ್ಣ ವಿಡಿಯೊದಲ್ಲಿ ತಿಳಿಸಿದ್ದಾರೆ. ನಾನು ಇದೇ ಶುಕ್ರವಾರ ಕರ್ನಾಟಕಕ್ಕೆ ಆಗಮಿಸಿ, ಎಸ್‌ಐಟಿ ತನಿಖೆಗೆ ಸಹಕಾರ ನೀಡುತ್ತೇನೆ. ನನಗೆ ಕಾನೂನಿನ ಮೇಲೆ ಅಪಾರ ಗೌರವವಿದೆ. ನನ್ನ ವಿರುದ್ಧ ಮಾಡಿದ ಆರೋಪಗಳನ್ನು ಕೇಳಿ ನನಗೆ ಶಾಕ್‌ ಆಯಿತು. ಇದೇ ಕಾರಣಕ್ಕಾಗಿ ನಾನು ಕೆಲ ದಿನಗಳಿಂದ ಐಸೋಲೇಷನ್‌ನಲ್ಲಿ ಇದ್ದೆ. ವಿದೇಶ ಪ್ರವಾಸವು ಮೊದಲೇ ನಿಗದಿಯಾಗಿತ್ತು. ನಾನು ವಿದೇಶಕ್ಕೆ ಬಂದ ಬಳಿಕ ಪ್ರಕರಣ ತಿಳಿಯಿತು. ನನ್ನ ವಿರುದ್ಧ ರಾಹುಲ್‌ ಗಾಂಧಿ ಸೇರಿ ಎಲ್ಲರೂ ವೇದಿಕೆ ಮೇಲೆಯೇ ಹೇಳಿಕೆಗಳನ್ನು ಕೊಟ್ಟರು. ಆ ಮೂಲಕ ರಾಜಕೀಯ ಪಿತೂರಿ ನಡೆಸಿದರು. ಆದರೂ, ನಾನು ರಾಜ್ಯಕ್ಕೆ ಆಗಮಿಸಿ ತನಿಖೆಗೆ ಸಹಕಾರ ನೀಡುತ್ತೇನೆ ಎಂದಿದ್ದಾರೆ.

ಪಾಸ್​ಪೋರ್ಟ್​ ರದ್ದು ಪ್ರಕ್ರಿಯೆ ಬೆನ್ನಲ್ಲೇ ವಿಡಿಯೋ

ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್‌ಅನ್ನು ರದ್ದುಗೊಳಿಸಬೇಕು ಎಂದು ಸಿದ್ದರಾಮಯ್ಯ ಅವರು ಎರಡು ಬಾರಿ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್‌ ರದ್ದುಗೊಳಿಸುವ ಪ್ರಕ್ರಿಯೆ ಆರಂಭಿಸಿದೆ. ಇನ್ನು, ಇದರ ಭಾಗವಾಗಿಯೇ ಕೇಂದ್ರ ಸರ್ಕಾರವು ಪ್ರತಿಕ್ರಿಯೆ ಕೋರಿ ಪ್ರಜ್ವಲ್‌ ರೇವಣ್ಣಗೆ ಶೋಕಾಸ್‌ ನೋಟಿಸ್‌ ಜಾರಿಗೊಳಿಸಿದೆ. ಶೋಕಾಸ್‌ ನೋಟಿಸ್‌ಗೂ ಉತ್ತರ ನೀಡದಿದ್ದರೆ, ಕೇಂದ್ರ ಸರ್ಕಾರವು ಪಾಸ್‌ಪೋರ್ಟ್‌ ರದ್ದುಗೊಳಿಸಲಿದೆ ಎಂದು ಹೇಳಲಾಗುತ್ತಿತ್ತು. ಇದರ ಬೆನ್ನಲ್ಲೇ ಪ್ರಜ್ವಲ್‌ ರೇವಣ್ಣ ಅವರು ವಿಡಿಯೊ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:56 pm, Mon, 27 May 24

ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ