AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ

ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ

ಮಂಜುನಾಥ ಕೆಬಿ
| Edited By: |

Updated on:May 12, 2026 | 10:39 PM

Share

ದೇವೇಗೌಡರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ರಾಜಕೀಯ ಜೀವನ ಕುರಿತ ಪುಸ್ತಕವನ್ನು ಮೇ 25 ರಂದು ಬಿಡುಗಡೆ ಮಾಡಲಿದ್ದಾರೆ. ಈ ಪುಸ್ತಕವನ್ನು ಕೃಷಿ ಸಚಿವರು ಬರೆದಿದ್ದಾರೆ. ಅಲ್ಲದೆ, ಪ್ರಧಾನಿ ಮೋದಿ ಅವರಿಂದ ಪ್ರಮುಖ ಯೋಜನೆಯೊಂದನ್ನು ಉದ್ಘಾಟಿಸಲು ಸಿದ್ಧತೆ ನಡೆಯುತ್ತಿದೆ. ಜೂನ್ ಒಳಗೆ ಕಾಮಗಾರಿ ಪೂರ್ಣಗೊಂಡರೆ, ಪರಿಶೀಲನೆ ಬಳಿಕ ಪ್ರಧಾನಿಗಳನ್ನು ಆಹ್ವಾನಿಸಲಾಗುವುದು ಎಂದು ತಿಳಿಸಲಾಗಿದೆ.

ಹಾಸನ, ಮೇ 12: ನಗರದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ಕರ್ನಾಟಕ ಹಾಲು ಮಹಾಮಂಡಳ (KMF) ವತಿಯಿಂದ 830 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಮೆಗಾ ಡೇರಿ ಕಾಮಗಾರಿ ಅಂತಿಮ ಹಂತ ತಲುಪಿದೆ. ಮಾಜಿ ಪ್ರಧಾನಿ, JDS ವರಿಷ್ಠ ಹೆಚ್.ಡಿ. ದೇವೇಗೌಡ, ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರೊಂದಿಗೆ ಮಂಗಳವಾರ ಡೇರಿ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ವೀಕ್ಷಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಹೆಚ್​ಡಿ. ದೇವೇಗೌಡ, ಜುಲೈ ಮೊದಲ ಅಥವಾ 2ನೇ ವಾರದಲ್ಲಿ ಮೆಗಾ ಡೇರಿ ಉದ್ಘಾಟನೆಗೊಳ್ಳಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡುತ್ತಾರೆ. ಪ್ರಧಾನಿ ಮೋದಿ ಉದ್ಘಾಟನೆ ಮಾಡುವ ಈ ಮೆಗಾ ಡೇರಿ ದೇಶಕ್ಕೆ ಮಾದರಿ ಆಗಬೇಕು ಎಂದರು. ಮೆಗಾ ಡೇರಿ ನಿರ್ಮಾಣಕ್ಕೆ ರಾಜ್ಯ ಸರ್ಕಾರದಿಂದ ಆರ್ಥಿಕ ನೆರವು ನೀಡಿಲ್ಲ. ಕೇಂದ್ರ ಸರ್ಕಾರ ಸುಮಾರು 280 ಕೋಟಿ ರೂ. ಅನುದಾನ ಕೊಟ್ಟಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: May 12, 2026 10:38 PM
Follow Us