AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ ತಲುಪಿದ 30 ವೆಂಟಿಲೇಟರ್, 25 ಆಮ್ಲಜನಕ ಸಾಂದ್ರಕ; ಅಶ್ವತ್ಥ್ ನಾರಾಯಣ ಭೇಟಿ ಬೆನ್ನಲ್ಲೇ ಅಗತ್ಯ ಕ್ರಮ

ಶನಿವಾರ ಜಿಲ್ಲಾ ಪ್ರವಾಸ ಕೈಗೊಂಡಿದ್ದ ವೇಳೆ ಜಿಲ್ಲಾಧಿಕಾರಿಗಳೂ ಸೇರಿದಂತೆ ಜನ ಪ್ರತಿನಿಧಿಗಳು ಕೂಡ ವೆಂಟಿಲೇಟರ್‌ ಹಾಗೂ ಆಮ್ಲಜನಕ ಸಾಂದ್ರಕಗಳ ಕೊರತೆಯಾಗಿರುವ ಅಂಶವನ್ನು ಉಪಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದರು.

ಹಾಸನ ತಲುಪಿದ 30 ವೆಂಟಿಲೇಟರ್, 25 ಆಮ್ಲಜನಕ ಸಾಂದ್ರಕ; ಅಶ್ವತ್ಥ್ ನಾರಾಯಣ ಭೇಟಿ ಬೆನ್ನಲ್ಲೇ ಅಗತ್ಯ ಕ್ರಮ
ಡಿಸಿಎಂ ಅಶ್ವತ್ಥನಾರಾಯಣ
TV9 Web
| Updated By: ganapathi bhat|

Updated on:Aug 21, 2021 | 9:59 AM

Share

ಬೆಂಗಳೂರು: ಹಾಸನ ಜಿಲ್ಲೆಯ ಪ್ರವಾಸದ ವೇಳೆ ರಾಜ್ಯ ಕೊವಿಡ್ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ಶನಿವಾರ ಹೇಳಿದ್ದಂತೆ ಕೋವಿಡ್ ಸೋಂಕಿತರಿಗೆ ಬಳಕೆ ಮಾಡಲು 30 ವೆಂಟಿಲೇಟರ್​ಗಳನ್ನು ಹಾಸನ ಜಿಲ್ಲೆಗೆ ಕಳಿಸಿಕೊಡಲಾಯಿತು. ಇದರ ಜತೆಗೆ 25 ಆಮ್ಲಜನಕ ಸಾಂದ್ರಕಗಳನ್ನೂ ಕಳುಹಿಸಿಕೊಡಲಾಗಿದೆ.

ಇವೆಲ್ಲವೂ ಭಾನುವಾರ ಮಧ್ಯಾಹ್ನದ ಹೊತ್ತಿಗೆ ಹಾಸನ ಜಿಲ್ಲಾಡಳಿತವನ್ನು ತಲುಪಿವೆ. ಶನಿವಾರ ಜಿಲ್ಲಾ ಪ್ರವಾಸ ಕೈಗೊಂಡಿದ್ದ ವೇಳೆ ಜಿಲ್ಲಾಧಿಕಾರಿಗಳೂ ಸೇರಿದಂತೆ ಜನ ಪ್ರತಿನಿಧಿಗಳು ಕೂಡ ವೆಂಟಿಲೇಟರ್‌ ಹಾಗೂ ಆಮ್ಲಜನಕ ಸಾಂದ್ರಕಗಳ ಕೊರತೆಯಾಗಿರುವ ಅಂಶವನ್ನು ಉಪಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದರು. ಕಾರಣಾಂತರಗಳಿಂದ ಜಿಲ್ಲೆಗೆ ವೆಂಟಿಲೇಟರ್‌ಗಳನ್ನು ಒದಗಿಸುವುದು ವಿಳಂಬವಾಗಿತ್ತು.

ಈ ವಿಷಯ ಹಾಸನದ ಕೊವಿಡ್ ಪರಿಶೀಲನೆ ಸಭೆಯಲ್ಲಿ ಪ್ರಸ್ತಾಪ ಆದ ಕ್ಷಣವೇ ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರಿಗೆ ಕರೆ ಮಾಡಿದ ಅಶ್ವತ್ಥ್ ನಾರಾಯಣ ತಕ್ಷಣವೇ ಜಿಲ್ಲೆಗೆ ಅಗತ್ಯ ಇರುವಷ್ಟು ವೆಂಟಿಲೇಟರ್‌ಗಳನ್ನು ಒದಗಿಸುವಂತೆ ಸೂಚಿಸಿದ್ದರು.

ಅಲ್ಲದೆ, ಸಭೆ ಮುಗಿಸಿಕೊಂಡು ಬೆಂಗಳೂರಿಗೆ ಹೊರಟ ಡಿಸಿಎಂ, ಮಾರ್ಗ ಮಧ್ಯೆಯೇ ಮತ್ತೊಮ್ಮೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಈ ಬಗ್ಗೆ ಸೂಚನೆ ಕೊಟ್ಟರು. ವೆಂಟಿಲೇಟರ್‌ಗಳು ಅವು ಬೆಂಗಳೂರಿನಿಂದ ಹಾಸನ ತಲುಪುವ ತನಕ ನಿರಂತರ ಫಾಲೋಅಪ್ ಮಾಡಿದರು.

Hassan Ventilators

ಹಾಸನ ತಲುಪಿದ ವೈದ್ಯಕೀಯ ಪರಿಕರಗಳು

ವೆಂಟಿಲೇಟರ್‌ಗಳು ಬಹಳ ಮುಖ್ಯ ಈ ಬಗ್ಗೆ ಪ್ರತಿಕ್ರಿಯಿಸಿದ ಡಾ.ಅಶ್ವತ್ಥನಾರಾಯಣ ಅವರು, ಕೋವಿಡ್ ನಂಥ ಸೋಂಕಿಗೆ ತುತ್ತಾದವರಿಗೆ ವೆಂಟಿಲೇಟರ್‌ʼಗಳ ಅಗತ್ಯ ಹೆಚ್ಚಾಗಿರುತ್ತದೆ. ಸ್ಥಳೀಯ ಮಟ್ಟದಲ್ಲೇ ಜೀವ ಉಳಿಸಬಹುದು. ಶನಿವಾರ ಹಾಸನ ಜಿಲ್ಲೆಯ ಪರಿಸ್ಥಿತಿ ಪರಿಶೀಲನೆ ಮಾಡಿದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ಪರಿಸ್ಥಿತಿಯ ತೀವ್ರತೆ ಗೊತ್ತಾಯಿತು. ಇಪ್ಪತ್ತನಾಲ್ಕು ಗಂಟೆಗಳಲ್ಲಿಯೇ 30 ವೆಂಟಿಲೇಟರ್‌ಗಳನ್ನು ಹಾಸನಕ್ಕೆ ಕಳಿಸಿಕೊಟ್ಟಿದ್ದೇವೆ. ಇಂಥ ಸಂಕಷ್ಟ ಸಮಯದಲ್ಲಿ ಕ್ಷಿಪ್ರವಾಗಿ ಕೆಲಸ ಮಾಡಬೇಕಾದುದು ನಮ್ಮೆಲ್ಲರ ಜವಾಬ್ದಾರಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: Covid-19: ಕೊರೊನಾ ಸೋಂಕು ಗಂಭೀರ ಹಂತಕ್ಕೆ ಹೋಗದಂತೆ ತಡೆಯಲು ಈ ಸೂಚನೆಗಳನ್ನು ಪಾಲಿಸಿ

ಕೊರೊನಾಕ್ಕೆ ತಾಯಿ ಕಳೆದುಕೊಂಡ ಹುಡುಗಿಯ ಭಾವುಕ ಪತ್ರ: ಅಮ್ಮನ ಮೊಬೈಲ್ ಸಿಕ್ಕರೆ ಹಿಂದಿರುಗಿಸಿ

Published On - 7:01 pm, Sun, 23 May 21