AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ವಲ್‌ ರೇವಣ್ಣ ಎಲ್ಲಿದ್ದಾನೆ? ಸಿಎಂಗೆ SIT ನೀಡಿದ ಮಾಹಿತಿ ಏನು? ಇಲ್ಲಿದೆ ವಿವರ

ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಜ್ವಲ್ ರೇವಣ್ಣ ಅವರು ಎಸ್​ಐಟಿ ಮುಂದೆ ವಿಚಾರಣೆಗೆ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ. ಇಂದು ಬರುತ್ತಾರೆ? ನಾಳೆ ಬರುತ್ತಾರೆ ಎಂದು ಎಸ್​ಐಟಿ ಅಧಿಕಾರಿಗಳು ಕಾಯುತ್ತಿದ್ದಾರೆ. ಆದ್ರೆ, ಪ್ರಜ್ವಲ್ ಸುಳಿವು ಮಾತ್ರ ಸಿಗುತಿಲ್ಲ. ಈ ಸಂಬಂಧ ಪೊಲೀಸ್ ಹಿರಿಯ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾಹಿತಿ ನೀಡಿದ್ದಾರೆ. ಚರ್ಚೆಯ ವಿವರ ಇಲ್ಲಿದೆ.

ಪ್ರಜ್ವಲ್‌ ರೇವಣ್ಣ ಎಲ್ಲಿದ್ದಾನೆ? ಸಿಎಂಗೆ SIT ನೀಡಿದ ಮಾಹಿತಿ ಏನು? ಇಲ್ಲಿದೆ ವಿವರ
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on:May 06, 2024 | 3:02 PM

Share

ಬೆಂಗಳೂರು, (ಮೇ 06): ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಮತ್ತು ಕಿಡ್ನಾಪ್​ ಕೇಸ್​ಗೆ ಸಂಬಂಧಿಸಿ ಮಾಜಿ ಸಚಿವ ಎಚ್​ ಡಿ ರೇವಣ್ಣ(HD Revanna) ಅವರ ಬಂಧನವಾಗಿದೆ. ಇತ್ತ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಮಗ ಪ್ರಜ್ವಲ್​ ರೇವಣ್ಣನಿಗಾಗಿ(Prajwal Revanna) ಎಸ್​ಐಟಿ ಕಾದು ಕುಳಿತಿದೆ. ಅದಕ್ಕಾಗಿ ಕೇಂದ್ರೀಯ ತನಿಖಾ ದಳ ‘ಬ್ಲೂ ಕಾರ್ನರ್​’ ನೋಟಿಸ್​ ನೀಡಿದೆ. ನೋಟಿಸ್​ ನೀಡಿದರು ಪ್ರಜ್ವಲ್​ ಮಾತ್ರ ಭಾರತಕ್ಕೆ ವಾಪಾಸ್ಸಾಗಿಲ್ಲ. ಹೀಗಾಗಿ ಆರೋಪಿ ಪ್ರಜ್ವಲ್ ಎಲ್ಲಿದ್ದಾನೆ ? ಯಾವಾಗ ಬರಹುದು? ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯಗೆ (Siddaramaiah) ಮಾಹಿತಿ ನೀಡಿದ್ದಾರೆ.

ಹಿರಿಯ ಅಧಿಕಾರಿಗಳೊಂದಿಗೆ ಸಿಎಂ ಚರ್ಚೆ

ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಗುಪ್ತಚರ ಇಲಾಖೆ ಮುಖ್ಯಸ್ಥ ಶರತ್ ಚಂದ್ರ ಜೊತೆ ಚರ್ಚೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚಿಸಿದ್ದು, ಸುಮಾರು ಒಂದೂವರೆ ಗಂಟೆ ಚರ್ಚೆ ನಡೆಸಿದರು. ಈ ವೇಳೆ ಪ್ರಕರಣದ ಆಗು ಹೋಗುಗಳ ಬಗ್ಗೆ ಅಧಿಕಾರಿಗಳು, ಸಿಎಂ ಸಿದ್ದರಾಮಯ್ಯಗೆ ಮಾಹಿತಿ ನೀಡಿದರು. ಬ್ಲೂ ಕಾರ್ನರ್​ ನೋಟಿಸ್​​ ನೀಡುವಂತೆ ಸಿಬಿಐಗೆ ಎಸ್​​ಐಟಿ ಮನವಿ ಮಾಡಿದೆ. ಆದ್ರೆ, ಸಿಬಿಐನಿಂದ ಸೂಕ್ತ ಪ್ರತಿಕ್ರಿಯೆ ಬಂದಿಲ್ಲ ಎಂದು ಆಧಿಕಾರಿಗಳು, ಸಿಎಂ ಗಮನಕ್ಕೆ ತಂದಿದ್ದಾರೆ.

ಇದನ್ನೂ ಓದಿ: ಎಸ್​ಐಟಿ ಅಧಿಕಾರಿಗಳಿಂದ ಸಾಲು ಸಾಲು ಪ್ರಶ್ನೆ: ಕಿಡ್ನ್ಯಾಪ್​ಗೂ ನನಗೂ ಸಂಬಂಧವಿಲ್ಲ ಎಂದ ರೇವಣ್ಣ

ಇನ್ನು ಪ್ರಜ್ವಲ ರೇವಣ್ಣ ಅವರನ್ನು ಕರೆತರಲು ಅಧಿಕಾರಿಗಳ ತಂಡ ವಿದೇಶಕ್ಕೆ ತೆರಳಲು ಸಜ್ಜಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ. ಸ್ಯಾಂಟ್ರೋ ರವಿ ಕೇಸ್ ನಲ್ಲಿ ಕರ್ತವ್ಯ ನಿರ್ವಹಿಸಿದ್ದ ಕೆಲವರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಪ್ರಜ್ವಲ್​ ಪೆನ್​ಡ್ರೈವ್​ ಕೇಸ್​ಗೆ ಈ ಅಧಿಕಾರಿಗಳನ್ನು ಬಳಸಿಕೊಂಡು ವಿದೇಶಕ್ಕೆ ಕಳಿಸಲಾಗುತ್ತದೆ. ಇವತ್ತು ಅಥವಾ ನಾಳೆ ವಿದೇಶಕ್ಕೆ ತೆರಳಲು ಪ್ಲಾನ್ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಪ್ರಜ್ವಲ್​ ಇಂದು ಬರುವ ಸಾಧ್ಯತೆ

ಇತ್ತ ಪ್ರಜ್ವಲ್ ರೇವಣ್ಣನಿಗಾಗಿ ಎಸ್​ಐಟಿ ಅಧಿಕಾರಿಗಳು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ದಲ್ಲಿ ಕಾದು ಕುಳಿತ್ತಿದ್ದಾರೆ. ಎರಡು ದಿನಗಳಿಂದ ಪ್ರಜ್ವಲ್ ರೇವಣ್ಣ ಬಗ್ಗೆ ಇಂಚಿಂಚು ಮಾಹಿತಿ ಪಡೆಯುತ್ತಿದ್ದಾರೆ. ಜರ್ಮನಿಯಿಂದ ದುಬೈಗೆ ಹೋಗಿದ್ದಾರೆಂಬ ಮಾಹಿತಿ ಕಲೆಹಾಕಿರುವ ಎಸ್​ಐಟಿ ಟೀಂ ದುಬೈನಿಂದ ಬರುವ ಎಲ್ಲಾ ವಿಮಾನಗಳ ಪ್ರಯಾಣಿಕರ ಲಿಸ್ಟ್ ಚೆಕ್ ಮಾಡುತ್ತಿದ್ದಾರೆ. ಮಾತ್ರವಲ್ಲದೆ ಪ್ರಜ್ವಲ್​ ಲೊಕೇಶನ್​ ಟ್ರ್ಯಾಕ್​ ಮಾಡಿದ್ದಾರೆ. ಮೂಲಗಳ ಪ್ರಕಾರ ಇಂದು(ಮೇ 06) ಪ್ರಜ್ವಲ್ ರೇವಣ್ಣ ಭಾರತಕ್ಕೆ ಬರುವ ಸಾಧ್ಯತೆಯಿದೆ. ಅಧಿಕಾರಿಗಳಂತೂ ವಿದೇಶಗಳಿಂದ ಬರುವ ಎಲ್ಲಾ ವಿಮಾನಗಳ ಮೇಲೆ ನಿಗಾ ಇಟ್ಟಿದ್ದಾರೆ. ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಮಂಗಳೂರು ಏರ್​ಪೋರ್ಟ್​ನಲ್ಲಿ ನಿಗಾ ವಹಿಸಿದ್ದಾರೆ.

ಪ್ರಜ್ವಲ್​ ಇವತ್ತು ಅಥವಾ ನಾಳೆ ಬರ್ತಾರೆ ಎಂದ ಸಚಿವ

ಪ್ರಜ್ವಲ್​ ಇವತ್ತು ಅಥವಾ ನಾಳೆ ಬರುವ ಮಾಹಿತಿ ಇದೆ. ಜೆಡಿಎಸ್​​​ ಮುಖಂಡರೇ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ .ಈ ಪ್ರಕರಣದಲ್ಲಿ ರಾಜಕಾರಣವನ್ನ ನಾವು ಬೆರೆಸುತ್ತಿಲ್ಲ. SIT ರಚನೆ ಬಗ್ಗೆ ಬಿಜೆಪಿಯವರೇ ಸ್ವಾಗತ ಮಾಡಿದ್ದಾರೆ. ರಾಜಕೀಯ ಷಡ್ಯಂತ್ರ ನಡೆಸುವ ಅವಶ್ಯಕತೆ ನಮಗೆ ಇಲ್ಲ. ನಿನ್ನೆ ರೇವಣ್ಣ ನೋವಿನಿಂದ ಈ ಮಾತು ಹೇಳಿರಬಹುದು. ಯಾರೇ ತಪ್ಪು ಮಾಡಿದರೂ ಕಾನೂನು ಪ್ರಕಾರ ಕ್ರಮವಾಗಲಿದೆ ಎಂದು ಬೆಂಗಳೂರಿನಲ್ಲಿ ಸಚಿವ ಚಲುವರಾಯಸ್ವಾಮಿ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನುಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:00 pm, Mon, 6 May 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!