ಹಾಸನಕ್ಕೆ ರಾಷ್ಟ್ರ ಪ್ರಶಸ್ತಿ ಗರಿ; ಇನ್ನಷ್ಟು ಮಾದರಿ ಕೆಲಸಕ್ಕೆ ಪ್ರಧಾನಿ ಮೋದಿ ಕರೆ

ದೆಹಲಿಯಲ್ಲಿ ಸಾಂಕೇತಿಕವಾಗಿ ಪ್ರಶಸ್ತಿ ವಿತರಣೆ ಹಾಗೂ ಪ್ರಶಸ್ತಿ ಮೊತ್ತವನ್ನು ಆಯಾಯ ಜಿಲ್ಲಾ ಪಂಚಾಯಿತಿಗಳಿಗೆ ಆನ್ಲೈನ್ ಮೂಲಕ ವರ್ಗಾವಣೆ ಮಾಡಿದ ನಂತರ ಇತ್ತ ಹಾಸನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಆರ್.ಗಿರೀಶ್ ಅವರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎ.ಪರಮೇಶ್ ಅವರಿಗೆ ಪ್ರಶಸ್ತಿ ಫಲಕವನ್ನು ಹಸ್ತಾಂತರ ಮಾಡಿ ಅಭಿನಂದನೆ ಸಲ್ಲಿಸಿದರು.

ಹಾಸನಕ್ಕೆ ರಾಷ್ಟ್ರ ಪ್ರಶಸ್ತಿ ಗರಿ; ಇನ್ನಷ್ಟು ಮಾದರಿ ಕೆಲಸಕ್ಕೆ ಪ್ರಧಾನಿ ಮೋದಿ ಕರೆ
ಪ್ರಶಸ್ತಿಯನ್ನು ಹಾಸನ ಜಿಲ್ಲಾ ಪಂಚಾಯತಿಗೆ ಹಸ್ತಾಂತರಿಸಲಾಯಿತು
Follow us
sandhya thejappa
|

Updated on: Apr 25, 2021 | 7:39 AM

ಹಾಸನ: ಜಿಲ್ಲಾ ಪಂಚಾಯಿತಿಗಿಂದು ಅವಿಸ್ಮರಣೀಯ ದಿನ. ರಾಜ್ಯದಲ್ಲೇ ಉತ್ತಮ ಸಾಧನೆಗಾಗಿ ಜಿಲ್ಲೆಗೆ ರಾಷ್ಟ್ರೀಯ ಪ್ರಶಸ್ತಿಯ ಗರಿ ಮುಡಿಗೇರಿದ್ದು, ಇಂದು ಅಧಿಕೃತವಾಗಿ ಪ್ರಶಸ್ತಿ ಹಸ್ತಾಂತರಗೊಂಡಿದೆ. ರಾಷ್ತ್ರೀಯ ಪಂಚಾಯತ್ ರಾಜ್ ದಿವಸದ ಅಂಗವಾಗಿ ದೆಹಲಿಯಲ್ಲಿ ನಡೆಯಬೇಕಿದ್ದ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಕೊರೊನಾ ಹಿನ್ನೆಲೆಯಲ್ಲಿ ವರ್ಚುವಲ್ ವೇದಿಕೆ ಮುಖಾಂತರ ನೆರವೇರಿಸಲಾಗಿದೆ. ಸ್ವತಃ ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರಾದ ನರೇಂದ್ರ ಸಿಂಹ ತೋಮರ್, ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ವಿವಿಧ ರಾಜ್ಯದ ಮುಖ್ಯಮಂತ್ರಿಗಳು ಸೇರಿದಂತೆ ಗಣ್ಯಾತಿಗಣ್ಯರು ಹೆಮ್ಮೆಯ ಪ್ರಶಸ್ತಿಯನ್ನು ಹಸ್ತಾಂತರ ಮಾಡಿದ್ದಾರೆ. ಇಂದು ದೇಶದ ಹಲವು ಜಿಲ್ಲಾ ಪಂಚಾಯತಿಗಳಿಗೆ ವಿವಿಧ ಗ್ರಾಮೀಣ ಸಶಕ್ತೀಕರಣ ಪ್ರಶಸ್ತಿಗಳನ್ನು ಸಾಂಕೇತಿಕವಾಗಿ ವಿತರಿಸಲಾಯಿತು.

ದೆಹಲಿಯಲ್ಲಿ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿ ಪ್ರಶಸ್ತಿ ವಿಜೇತ ಜಿಲ್ಲಾ ಪಂಚಾಯಿತಿ, ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಹಾಗೂ ಅದರ ಅಧಿಕಾರಿಗಳಿಗೆ ಶುಭ ಕೋರಿದರು.

ದೇಶದ ಶಕ್ತಿ ಗ್ರಾಮಗಳಲ್ಲಿದ್ದು, ಹಳ್ಳಿಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಸಂಪೂರ್ಣ ಪ್ರಗತಿ ಸಾಧ್ಯ. ಹಳ್ಳಿಗಳು ಮತ್ತು ಬಡವರ ಉದ್ದಾರ ಸರ್ಕಾರದ ಆದ್ಯತೆ. ಆ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿಗೆ ಅನೇಕ ಯೋಜನೆಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಲಾಗಿದೆ. ಅವುಗಳನ್ನು ಸಕಾಲದಲ್ಲಿ ಅರ್ಹರಿಗೆ ತಲುಪಿಸುವುದು ನಮ್ಮೆಲ್ಲರ ಜವಾಬ್ದಾರಿ. ಇದಕ್ಕೆ ರಾಜ್ಯ ಸರ್ಕಾರಗಳು ಹಾಗೂ ಜಿಲ್ಲಾ ಪಂಚಾಯಿತಿ, ಗ್ರಾಮ ಪಂಚಾಯಿತಿಗಳ ಸಂಪೂರ್ಣ ಪಾಲ್ಗೊಳ್ಳುವಿಕೆ ಅತ್ಯಗತ್ಯ. ಹಾಗಾಗಿ ಈ ಕಾರ್ಯದಲ್ಲಿ ಸಮರ್ಪಣಾ ಭಾವದಿಂದ ಕೆಲಸ ಮಾಡುವ, ಸಮರ್ಪಕ ಸಾಧನೆ ಮಾಡುವ ಜಿಲ್ಲಾ ಪಂಚಾಯಿತಿ, ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಹಾಗೂ ಅಧಿಕಾರಿಗಳನ್ನು ಪ್ರೋತ್ಸಾಹಿಸಲು ಈ ಪ್ರಶಸ್ತಿಗಳನ್ನು ನೀಡಲಾಗುತ್ತಿದ್ದು, ಇನ್ನಷ್ಟು ಮಾದರಿಯಾಗಿ ಕೆಲಸ ಮಾಡಿ ಎಂದು ಪ್ರಧಾನಿ ಕರೆ ನೀಡಿದರು.

ದೆಹಲಿಯಲ್ಲಿ ಸಾಂಕೇತಿಕವಾಗಿ ಪ್ರಶಸ್ತಿ ವಿತರಣೆ ಹಾಗೂ ಪ್ರಶಸ್ತಿ ಮೊತ್ತವನ್ನು ಆಯಾಯ ಜಿಲ್ಲಾ ಪಂಚಾಯಿತಿಗಳಿಗೆ ಆನ್ಲೈನ್ ಮೂಲಕ ವರ್ಗಾವಣೆ ಮಾಡಿದ ನಂತರ ಇತ್ತ ಹಾಸನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಆರ್.ಗಿರೀಶ್ ಅವರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎ.ಪರಮೇಶ್ ಅವರಿಗೆ ಪ್ರಶಸ್ತಿ ಫಲಕವನ್ನು ಹಸ್ತಾಂತರ ಮಾಡಿ ಅಭಿನಂದನೆ ಸಲ್ಲಿಸಿದರು.

ಪ್ರಶಸ್ತಿ ಏಕೆ? ಗ್ರಾಮೀಣ ಭಾರತದ ಅಭಿವೃದ್ದಿಗಾಗಿ ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಹಮ್ಮಿಕೊಂಡಿದೆ. ಈ ಯೋಜನೆಗಳನ್ನು ಜಾರಿಯ ಜೊತೆಗೆ ಅವುಗಳನ್ನು ನೈಜ ಫಲಾನುಭವಿಗಳನ್ನು ಗುರುತಿಸಿ ಅವುಗಳನ್ನು ಆ ಜನರಿಗೆ ತಲುಪಿಸುವುದು ಪಂಚಾಯತಿಗಳ ಜವಾಬ್ದಾರಿ. ಆ ನಿಟ್ಟಿನಲ್ಲಿ ಹೆಚ್ಚು ಪ್ರಗತಿ ಸಾಧಿಸಿದ ಜಿಲ್ಲೆಗೆ ಪ್ರೋತ್ಸಾಹ, ಆ ಕಾರ್ಯದಲ್ಲಿ ತೊಡಗಿದ ಅಧಿಕಾರಿಗಳು, ಚುನಾಯಿತರಿಗೆ ಅಭಿನಂದನೆ ಸಲ್ಲಿಸುವ ಸಲುವಾಗಿ ಪ್ರತಿವರ್ಷ ಪಂಚಾಯತ್ ರಾಜ್ ದಿವಸ್ ಹೆಸರಿನಲ್ಲಿ ಗ್ರಾಮೀಣ ಸಶಕ್ತೀಕರಣ ಪ್ರಶಸ್ತಿಗಳನ್ನ ನೀಡಲಾಗುತ್ತದೆ. ಈ ಬಾರಿ ಹಾಸನ ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಬಿ.ಎ.ಪರಮೇಶ್ ಹಾಗು ತಂಡ ಉತ್ತಮ ಪ್ರಗತಿ ಸಾಧಿಸಿದೆ. ಹಾಗಾಗಿ ಈ ಪ್ರಶಸ್ತಿ ಹಾಸನ ಜಿಲ್ಲಾ ಪಂಚಾಯತಿಯ ಮುಡಿಗೇರಿದೆ.

ಇದೊಂದು ಹೆಮ್ಮೆಯ ಸಾಧನೆ. ಜಿಲ್ಲೆಗೆ ಸಂದ ಗೌರವ ಇದಕ್ಕೆ ಕಾರಣರಾದ ಜನಪ್ರತಿನಿಧಿಗಳು ಹಾಗೂ ಜಿಲ್ಲಾ ಪಂಚಾಯಿತಿ ಸಿ.ಇ.ಒ ಇತರ ಜಿಲ್ಲಾ ಹಾಗೂ ತಾಲೂಕು ಮತ್ತು ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳನ್ನು ತಾವು ಅಭಿನಂದಿಸುವುದಾಗಿ ಜಿಲ್ಲಾಧಿಕಾರಿ ಆರ್.ಗಿರಿಶ್ ಹೇಳಿದರು.

ಈ ಬಾರಿಯ ರಾಷ್ಟ್ರೀಯ ಪ್ರಶಸ್ತಿ ನಮ್ಮ ಜಿಲ್ಲೆಗೆ ಬಂದಿರುವ ಬಗ್ಗೆ ಸಂತಸ ತಂದಿದೆ. ಈ ಸಾಧನೆಗೆ ಸಹಕರಿಸಿದ ಜಿಲ್ಲಾ ಉಸ್ತುವಾರಿ ಸಚಿವರು, ಲೋಕ ಸಭಾ ಸದಸ್ಯರು, ಶಾಸಕರು, ಜಿಲ್ಲಾ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಇತರ ಎಲ್ಲಾ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತಿ ಸಿಇಓ ಬಿ.ಎ.ಪರಮೇಶ್ ಧನ್ಯವಾದ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿಗಳಾದ ಚಂದ್ರಶೇಖರ್, ಮಹೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ನಾಗರಾಜ್, ಯೋಜನಾ ನಿರ್ದೇಶಕರಾದ ವಿಠಲ ಕಾವಳೆ, ಜಿಲ್ಲಾ ವಾರ್ತಾಧಿಕಾರಿ ವಿನೋದ್ ಚಂದ್ರ ಮತ್ತಿತರರು ಜಿಲ್ಲಾ ಪಂಚಾಯತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಾಜರಿದ್ದರು.

ಇದನ್ನೂ ಓದಿ

ಪಕ್ಕದ ದೇಶ ಶ್ರೀಲಂಕಾದಲ್ಲಿ ಕೊರೊನಾ ಇದೆಯೇ? ಇಲ್ಲಿದೆ ವಿವರ

ಅಕಾಲಿಕ ಆಲಿಕಲ್ಲು ಮಳೆಗೆ ಬೆಳೆ ನಾಶ; ಚಿಕ್ಕಬಳ್ಳಾಪುರ ರೈತರಲ್ಲಿ ಹೆಚ್ಚಿದ ಆತಂಕ

(Hassan Zilla Panchayat has won National Award)

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು