Hassan News: ಅಯ್ಯೋ ವಿಧಿಯೇ! ತೆಂಗಿನಕಾಯಿ ಗೊನೆ ಬಿದ್ದು ಬಾಲಕ ಸಾವು

ತೆಂಗಿನಕಾಯಿ ಗೊನೆ ಬಿದ್ದು ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ 16 ವರ್ಷದ ವಿದ್ಯಾರ್ಥಿ ದುರಂತ ಅಂತ್ಯಕಂಡಿದ್ದಾನೆ.

Hassan News: ಅಯ್ಯೋ ವಿಧಿಯೇ! ತೆಂಗಿನಕಾಯಿ ಗೊನೆ ಬಿದ್ದು ಬಾಲಕ ಸಾವು
ಪ್ರಜ್ವಲ್, ಮೃತ ಬಾಲಕ
Follow us
ರಮೇಶ್ ಬಿ. ಜವಳಗೇರಾ
|

Updated on:Jun 23, 2023 | 10:38 AM

ಹಾಸನ: ಸಾವು ಯಾವ ರೂಪದಲ್ಲಿ ಬರುತ್ತದೆ ಅಂತ ಊಹಿಸಲು ಸಾಧ್ಯವಿಲ್ಲ. ಜವರಾಯ ಯಾರ ಬಳಿ, ಯಾವ ರೂಪದಲ್ಲಿ ಬರುತ್ತಾನೋ ಆ ದೇವರೇ ಬಲ್ಲ. ಈ ಬಾಲಕನ ಸಾವು ತೆಂಗಿನಕಾಯಿ ಗೊನೆಯಲ್ಲಿ ಬರೆದಿತ್ತು ಅನ್ಸುತ್ತೆ. ಹೌದು…ತೆಂಗಿನಕಾಯಿ ಗೊನೆ ಬಿದ್ದು 16 ವರ್ಷದ ಪ್ರಜ್ವಲ್ ಮೃತಪಟ್ಟಿದ್ದಾನೆ. ಹಾಸನ(Hassan) ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಶ್ರವಣಬೆಳಗೊಳ ಹೋಬಳಿಯ ಬಿ.ಚೋಳೇನಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಶ್ರವಣಬೆಳಗೊಳದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಪ್ರಜ್ವಲ್ ಮೃತ ದುರ್ವೈವಿ.

ಮಳೆಯಿಂದ ತೋಟದಲ್ಲಿ ಕಾಯಿ ಬಿದ್ದಿದ್ದರಿಂದ ಅವುಗಳನ್ನು ಆಯುವಾಗ ಏಕಾಏಕಿ ಪ್ರಜ್ವಲ್ ಮೇಲೆ ತೆಂಗಿನಕಾಯಿ ಗೊನೆ ಬಿದ್ದಿದೆ. ಇದರಿಂದ ಅಸ್ವಸ್ಥಗೊಂಡಿದ್ದ ಪ್ರಜ್ವಲ್ ಸ್ಥಳದಲ್ಲೇ ಕುಸಿದು ಬಿದ್ದಿದ್ದ. ಕೂಡಲೇ ಸ್ಥಳೀಯರು ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಿದ್ದಾರೆ. ದುರದೃಷ್ಟವಶಾತ್ ಆಸ್ಪತ್ರೆ ಮುಟ್ಟುವ ಮಾರ್ಗ ಮಧ್ಯೆದಲ್ಲೇ ಪ್ರಜ್ವಲ್ ಕೊನೆಯುಸಿರೆಳೆದಿದ್ದಾನೆ. ಈ ಬಗ್ಗೆ ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನವಜಾತ ಶಿಶುವಿನ ಶವ ಪತ್ತೆ

ಕೊಪ್ಪಳ: ಜಿಲ್ಲೆಯ ಕುಷ್ಟಗಿ ತಾಲೂಕಿನ ಗುಡ್ಡದದೇವಲಾಪುರ ಕ್ರಾಸ್ ಬಳಿ ನವಜಾತ ಶಿಶುವಿನ ಶವ ಪತ್ತೆಯಾಗಿದೆ ಅನೈತಿಕ ಸಂಬಂಧ ಹಿನ್ನೆಲೆ ನಿನ್ನೆ (ಜೂನ್ 22) ರಾತ್ರಿ ನವಜಾತ ಶಿಶು ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಹನಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 10:17 am, Fri, 23 June 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ