ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ, ಪೀಠೋಪಕರಣ ಧ್ವಂಸ ಮಾಡಿ ಪೋಷಕರ ಆಕ್ರೋಶ
ಹಾಸನದ ಉದಯಗಿರಿಯಲ್ಲಿರುವ ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ದ್ವಿತಿಯ ಪಿಯು ವಿದ್ಯಾರ್ಥಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಯುವಕನ ಪೋಷಕರು ಶಾಲಾ ಆಡಳಿತದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಪೀಠೋಪಕರಣ ಧ್ವಂಸ ಮಾಡಿ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೀಠೋಪಕರಣ ಧ್ವಂಸ ಮಾಡಿ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾಸನ, ಫೆ.22: ದ್ವಿತೀಯ ಪಿಯು ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದ ವಿದ್ಯಾರ್ಥಿ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ(Death). ಹಾಸನದ ಉದಯಗಿರಿಯಲ್ಲಿರುವ ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ (College Hostel) ವಿದ್ಯಾರ್ಥಿ ವಿಕಾಸ್(18) ಶವ ಪತ್ತೆಯಾಗಿದೆ. ಕಾಲೇಜಿನ ಆಡಳಿತ ಮಂಡಳಿ ವಿರುದ್ಧ ವಿಕಾಸ್ ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ. ಪೊಲೀಸರು-ಮೃತ ವಿದ್ಯಾರ್ಥಿ ವಿಕಾಸ್ ಸಂಬಂಧಿಕರ ನಡುವೆ ವಾಗ್ವಾದ ನಡೆದಿದ್ದು ಹಾಸ್ಟೆಲ್ನ ಪೀಠೋಪಕರಣ ಧ್ವಂಸ ಮಾಡಿ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚನ್ನರಾಯಪಟ್ಟಣ ತಾಲೂಕಿನ ಬೆಳಗುಲಿ ಗ್ರಾಮದ ಸುರೇಶ್ ಹಾಗೂ ಮಮತಾ ದಂಪತಿಯ ಏಕೈಕ ಪುತ್ರ ವಿಕಾಸ್ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದ. ಇಂದು ಕಾಲೇಜಿಗೆ ತೆರಳಿ ನಂತರ ಒಬ್ಬನೇ ಹಾಸ್ಟೆಲ್‌ಗೆ ಬಂದಿದ್ದ. ಸ್ನೆಹಿತರು ಹಾಸ್ಟೆಲ್‌ಗೆ ಬಂದು ನೋಡಿದಾಗ ವಿಕಾಸ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಕಾಲೇಜಿನ ಆಡಳಿತ ಮಂಡಳಿ ವಿರುದ್ಧ ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ. ವಿದ್ಯಾರ್ಥಿ ಸಾವಿಗೆ ಹಾಸ್ಟೆಲ್ ವಾರ್ಡನ್ ಕಾರಣ ಎಂಬ ಆರೋಪ ಕೇಳಿ ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: Viral News: ವೇಶ್ಯೆಯನ್ನು 140 ಬಾರಿ ಇರಿದು ಕೊಂದಿದ್ದ ಭಾರತೀಯ; 30 ವರ್ಷದ ಬಳಿಕ ಜೀವಾವಧಿ ಶಿಕ್ಷೆ
ಇನ್ನು ಹಾಸ್ಟೆಲ್ ಹಾಗೂ ಕಾಲೇಜು ಆಡಳಿತ ಮಂಡಳಿ ವಿರುದ್ಧ ಕುಟುಂಬ ಸದಸ್ಯರು ಕಿಡಿಕಾರಿದ್ದಾರೆ. ಆಡಳಿತ ಮಂಡಳಿ ಪ್ರಮುಖರು ಬರೋ ವರೆಗೆ ಮೃತದೇಹ ತೆಗೆಯಲು ಬಿಡಲ್ಲ ಎಂದು ಪುತ್ರನ ಕಳೆದುಕೊಂಡ ಹೆತ್ತವರು ಕಣ್ಣೀರು ಹಾಕಿದ್ದಾರೆ. ಈ ವೇಳೆ ಪೊಲೀಸರ ಜೊತೆಗೂ ಸಂಬಂಧಿಕರು ವಾಗ್ವಾದ ನಡೆಸಿದ್ದಾರೆ. ಘಟನೆ ನಡೆದು ಮೂರು ಗಂಟೆಯಾದರೂ ಇನ್ನೂ ಬಂದಿಲ್ಲ. ಕೂಡಲೇ ಆಡಳಿತ ಮಂಡಳಿಯವರು ಬರಬೇಕು ಎಂದು ಕುಟುಂಬಸ್ಥರು ಕಿಡಿಕಾರಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪರಿಸ್ಥಿತಿ ನಿಭಾಯಿಸಲು ಪೊಲೀಸರು ಹರಸಾಹಸಪಡುತ್ತಿದ್ದಾರೆ.
ಸದ್ಯ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯ ಪೊಲೀಸರ ನಿಯೋಜನೆ ಮಾಡಿ ಪರಿಸ್ಥಿತಿ ತಿಳಿಗೊಳಿಸಲಾಗುತ್ತಿದೆ. ಪೊಲೀಸರು ಪೋಷಕರ ಜೊತೆ ಮಾತನಾಡಿ ಮೃತ ವಿದ್ಯಾರ್ಥಿ ವಿಕಾಸ್ ಮೃತದೇಹವನ್ನು ಹಾಸನದ ಹಿಮ್ಸ್ಗೆ ಸ್ಥಳಾಂತರಿಸಿದ್ದಾರೆ. ಪೋಷಕರ ಮನವೊಲಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ