Hassan News: ಮಧ್ಯಾಹ್ನದ ಊಟ ಸೇವಿಸಿ 35 ಸೈನಿಕರು ಅಸ್ವಸ್ಥ: ಸರ್ಕಾರಿ ಆಸ್ಪತ್ರೆಗೆ ದಾಖಲು

ಮಧ್ಯಾಹ್ನದ ಊಟ ಸೇವಿಸಿದ ನಂತರ 35 ಸೈನಿಕರು ಅಸ್ವಸ್ಥರಾಗಿದ್ದು, ಸಕಲೇಶಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Hassan News: ಮಧ್ಯಾಹ್ನದ ಊಟ ಸೇವಿಸಿ 35 ಸೈನಿಕರು ಅಸ್ವಸ್ಥ: ಸರ್ಕಾರಿ ಆಸ್ಪತ್ರೆಗೆ ದಾಖಲು
ಅಸ್ವಸ್ಥರಾದ ಸೈನಿಕರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿರುವುದು.
Follow us
ಗಂಗಾಧರ​ ಬ. ಸಾಬೋಜಿ
|

Updated on:Jun 07, 2023 | 4:01 PM

ಹಾಸನ: ಮಧ್ಯಾಹ್ನದ ಊಟ ಸೇವಿಸಿದ ನಂತರ 35 ಸೈನಿಕರು (soldiers) ಅಸ್ವಸ್ಥರಾಗಿರುವಂತಹ ಘಟನೆ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ, ಕುಡುಗರಹಳ್ಳಿಯಲ್ಲಿ ನಡೆದಿದೆ. ಸದ್ಯ ಅಸ್ವಸ್ಥ ಸೈನಿಕರಿಗೆ ಸಕಲೇಶಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಾಹನ ಚಾಲನಾ ತರಬೇತಿಗೆ ಸೈನಿಕರು ಬಂದು ಇಲ್ಲೇ ತಂಗಿದ್ದರು. ಮಧ್ಯಾಹ್ನ ಕ್ಯಾಂಪ್‌ನಲ್ಲೇ ತಯಾರಾದ ಆಹಾರ ಸೇವಿಸಿದ ಬಳಿಕ ಸೈನಿಕರು ಅಸ್ವಸ್ಥತೆಗೆ ಒಳಗಾಗಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಆಸ್ಪತ್ರೆಗೆ ಶಾಸಕ ಸಿಮೆಂಟ್ ಮಂಜು ಭೇಟಿ ನೀಡಿದ್ದು, ಅಸ್ವಸ್ಥಗೊಂಡಿರುವ ಸೈನಿಕರ ಆರೋಗ್ಯ ವಿಚಾರಿಸಿದ್ದಾರೆ.

ಕಲುಷಿತ ನೀರು ಕುಡಿದು‌ 20ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಯಚೂರು: ಜಿಲ್ಲೆಯ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಬಾಲಕ ಮೃತಪಟ್ಟ ಘಟನೆ ನಡೆದಿತ್ತು. ಈ ಸಂಬಂಧ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಅಮಾನತುಗೊಳಿಸಲಾಗಿತ್ತು. ಆದ್ರೆ ಈಗ ರೇಕಲಮರಡಿ ಗ್ರಾಮದ ಬಳಿಕ ಮತ್ತೊಂದು ಗ್ರಾಮದಲ್ಲಿ ಕಲುಷಿತ ನೀರು ಕುಡಿದು‌ 20ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದರು.

ಇದನ್ನೂ ಓದಿ: Haveri News: ಆರತಕ್ಷತೆ ಸಮಾರಂಭದಲ್ಲಿ ಊಟ ಸೇವಿಸಿದ್ದ 50ಕ್ಕೂ ಹೆಚ್ಚು ಜನ ಅಸ್ವಸ್ಥ; ಆಸ್ಪತ್ರೆಗೆ ದಾಖಲು

ರಾಯಚೂರು ಜಿಲ್ಲೆ ಲಿಂಗಸುಗೂರು ತಾಲ್ಲೂಕಿನ ಗೊರೆಬಾಳ ಗ್ರಾಮದಲ್ಲಿ ಒಂದು ವಾರದ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಕಲುಷಿತ ನೀರಿನಿಂದಾಗಿ ಜನ ಜೀವದ ಜೊತೆ ಹೋರಾಡುವಂತಹ ಪರಿಸ್ಥಿತಿಯಲ್ಲಿದ್ದರು.

ಕಲುಷಿತ ಆಹಾರ ಸೇವಿಸಿ 21 ಜನರು ಅಸ್ವಸ್ಥ

ಕಲಬುರಗಿ: ಕಲುಷಿತ ಆಹಾರ ಸೇವಿಸಿ 21 ಜನರು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಆಳಂದ ಪಟ್ಟಣದಲ್ಲಿ ನಡೆದಿದೆ. ಅಸ್ವಸ್ಥರು ವಿಜಯಪುರ ಜಿಲ್ಲೆಯ ಚಡಚಣದ ಡೋಣಿ ನಿವಾಸಿಗಳು ಎಂದು ತಿಳಿದುಬಂದಿದೆ. ಡೋಣಿ ನಿವಾಸಿಗಳು ಜೂನ್​.01 ರಂದು ಲಾಡ್ಲೇ ಮಶಾಕ್ ದರ್ಗಾಕ್ಕೆ ಹರಕೆ ತೀರಿಸಲು ಬಂದಿದ್ದರು. ಊಟ ಸೇವಿಸಿದ್ದ ಬಳಿಕ ವಾಂತಿ ಭೇದಿ ಕಾಣಿಸಿಕೊಂಡು ಅಸ್ವಸ್ಥಗೊಂಡಿದ್ದರು. ಅಸ್ವಸ್ಥರಿಗೆ ಆಳಂದ‌ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಇದನ್ನೂ ಓದಿ: ಔರಂಗಜೇಬ್​​, ಟಿಪ್ಪು​ ಹೊಗಳಿ ವಾಟ್ಸಾಪ್​ ಸ್ಟೇಟಸ್ ಹಾಕಿದ್ದಕ್ಕೆ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್, 144 ಸೆಕ್ಷನ್ ಜಾರಿ

ಮದುವೆ ಊಟ ಸೇವಿಸಿ 50ಕ್ಕೂ ಹೆಚ್ಚು ಜನ ಅಸ್ವಸ್ಥ 

ಹಾವೇರಿ: ಆರತಕ್ಷತೆ ಸಮಾರಂಭದಲ್ಲಿ ಊಟ ಸೇವಿಸಿದ್ದ 50ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಚಪ್ಪದಹಳ್ಳಿ ಗ್ರಾಮದಲ್ಲಿ ನಡೆದಿತ್ತು. ಮೇ.22ರ ರಾತ್ರಿ ನಡೆದ ಚಪ್ಪದಹಳ್ಳಿಯ ಶಂಕರಪ್ಪ ಹಿತ್ತಲಮನಿ ಎಂಬುವರ ಪುತ್ರಿಯ ಆರತಕ್ಷತೆ ಕಾರ್ಯಕ್ರಮದಲ್ಲಿ ಊಟ ಮಾಡಿದ್ದರು. ಮೇ.23ರ ರಾತ್ರಿಯಿಂದ 50ಕ್ಕೂ ಹೆಚ್ಚು ಜನರಿಗೆ ವಾಂತಿ, ಭೇದಿ ಶುರುವಾಗಿತ್ತು. ಕೂಡಲೇ ಅಸ್ವಸ್ಥಗೊಂಡವರಿಗೆ ರಟ್ಟಿಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಈ ಕುರಿತು ರಟ್ಟಿಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:48 pm, Wed, 7 June 23