ಹಾಸನ: ಕಲುಷಿತ ಆಹಾರ ಸೇವಿಸಿ ದಂಪತಿ ಅಸ್ವಸ್ಥ; ಚಿಕಿತ್ಸೆ ಪಡೆದು ಮನೆಗೆ ವಾಪಾಸ್ಸಾಗುವಾಗ ಸಾವು

ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಬಿಸಿಲಹಳ್ಳಿಯಲ್ಲಿ ಆಗಸ್ಟ್​ 15ರಂದು ಮನೆಯಲ್ಲಿ ಊಟ ಸೇವಿಸಿದ ಬಳಿಕ ಇಬ್ಬರು ಅಸ್ವಸ್ಥಗೊಂಡಿದ್ದ ದಂಪತಿಯನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಜೊತೆಗೆ ಆರಾಮಾದ ಹಿನ್ನಲೆ ಪುತ್ರ, ಪೋಷಕರನ್ನು ಕರೆದುಕೊಂಡು ಮನೆಗೆ ಬಂದಿದ್ದಾನೆ. ಈ ವೇಳೆ ದಂಪತಿ ದಿಢೀರ್​ ಸಾವನ್ನಪ್ಪಿದ ಘಟನೆ ನಡೆದಿದೆ.

ಹಾಸನ: ಕಲುಷಿತ ಆಹಾರ ಸೇವಿಸಿ ದಂಪತಿ ಅಸ್ವಸ್ಥ; ಚಿಕಿತ್ಸೆ ಪಡೆದು ಮನೆಗೆ ವಾಪಾಸ್ಸಾಗುವಾಗ ಸಾವು
ಮೃತ ದಂಪತಿ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 24, 2023 | 6:37 PM

ಹಾಸನ, ಆ. 24: ಕಲುಷಿತ ಆಹಾರ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದ ದಂಪತಿ ಚಿಕಿತ್ಸೆ ಪಡೆದು ಮನೆಗೆ ವಾಪಾಸ್ಸಾಗುವ ವೇಳೆ ದಿಢೀರ್ ​ಸಾವನ್ನಪ್ಪಿದ ಘಟನೆ ಹಾಸನ(Hassan) ಜಿಲ್ಲೆಯ ಅರಕಲಗೂಡು ತಾಲೂಕಿನ ಬಿಸಿಲಹಳ್ಳಿಯಲ್ಲಿ ನಡೆದಿದೆ. ನಂಜುಂಡಪ್ಪ(55), ಪತ್ನಿ ಉಮಾ(48) ಮೃತ ವ್ಯಕ್ತಿಗಳು. ಆಗಸ್ಟ್​ 15ರಂದು ಮನೆಯಲ್ಲಿ ಊಟ ಸೇವಿಸಿದ ಬಳಿಕ ಇಬ್ಬರು ಅಸ್ವಸ್ಥಗೊಂಡಿದ್ದರು. ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ಬರುವಾಗ ದಿಢೀರ್​ ಮೃತಪಟ್ಟಿದ್ದಾರೆಂದು ಸಂಬಂಧಿಕರು ಹೇಳಿದ್ದಾರೆ.

ಪೋಷಕರ ಹಠಾತ್ ಸಾವಿನ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ಪುತ್ರ

ನಿನ್ನೆ(ಆ.23) ಆಸ್ಪತ್ರೆಯಿಂದ ಮನೆಗೆ ಬರುವಾಗ ಮೃತಪಟ್ಟಿದ್ದಾರೆಂದು ಮೃತ ಪೋಷಕರ ಪುತ್ರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಹಿನ್ನಲೆ ಇಂದು(ಆ.24) ಗ್ರಾಮಕ್ಕೆ ಆಗಮಿಸಿದ ಪೊಲೀಸರು ಅಂತ್ಯಕ್ರಿಯೆಯನ್ನು ತಡೆದು, ಕುಟುಂಬಸ್ಥರ ಮನವೊಲಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಶಿಫ್ಟ್‌ ಮಾಡಿದ್ದಾರೆ. ಬಳಿಕ ಅಸಹಜ ಸಾವು ಎಂದು ದೂರು ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಘಟನೆ ಕೊಣನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ:ತಮಿಳುನಾಡು ಶಿಕ್ಷಣ ಸಚಿವ ಅನ್ಬಿಲ್ ಮಹೇಶ್​ಗೆ ಎದೆನೋವು, ಅಸ್ವಸ್ಥ; ಆಸ್ಪತ್ರೆಗೆ ಕರೆತರುವಾಗ ಬೆಂಗಳೂರು ಟ್ರಾಫಿಕ್​ನಲ್ಲಿ ಸಿಲುಕಿ ಪರದಾಟ

ಲಾರಿ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ, ಓರ್ವ ಸ್ಥಳದಲ್ಲೇ ಸಾವು

ಕೋಲಾರ: ಲಾರಿ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತವಾಗಿ, ಬೈಕ್​ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣ ಇಂದಿರಾ ಕ್ಯಾಂಟೀನ್ ಮುಂಭಾಗದಲ್ಲಿ ಈ ಅಪಘಾತ ನಡೆದಿದೆ. ಮೃತ ಯುವಕ ಶ್ರೀನಿವಾಸಪುರ ಪಟ್ಟಣದ ರಕ್ಷಿತ್ (30) ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಶ್ರೀನಿವಾಸಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಲಾರಿ ಸಮೇತ ಚಾಲಕನನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ