AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನದಲ್ಲಿ ಗಣೇಶ ವಿಸರ್ಜನೆ ವೇಳೆ ಪೊಲೀಸರನ್ನೇ ತಳ್ಳಾಡಿದ ಯುವಕರ ಗುಂಪು; ವಿಡಿಯೋ ವೈರಲ್

ಭಜರಂಗ ದಳದ ರಘು ಮತ್ತು ಅವರ ಸಂಗಡಿಗರು ಡಿಜೆ ಡ್ಯಾನ್ಸ್ ತಡೆಯಲು ಮುಂದಾದ ಪೊಲೀಸರ ಜೊತೆ ಮಾತಿನ ಚಕಮಕಿ ನಡೆಸಿದ್ದಾರೆ. ಬ್ಯಾಂಡ್ ಬಾರಿಸದಂತೆ ಪಿಎಸ್ಐ ಕೋಲು ಕಸಿದುಕೊಳ್ಳುತ್ತಾರೆ.

ಹಾಸನದಲ್ಲಿ ಗಣೇಶ ವಿಸರ್ಜನೆ ವೇಳೆ ಪೊಲೀಸರನ್ನೇ ತಳ್ಳಾಡಿದ ಯುವಕರ ಗುಂಪು; ವಿಡಿಯೋ ವೈರಲ್
ಪೊಲೀಸರನ್ನೇ ತಳ್ಳಾಡಿದ ಯುವಕರು
Follow us
TV9 Web
| Updated By: sandhya thejappa

Updated on: Sep 11, 2021 | 11:46 AM

ಹಾಸನ: ನಿನ್ನೆ (ಸೆ.10) ಗಣಪತಿ ವಿಸರ್ಜನೆ ವೇಳೆ ಯುವಕರ ಗುಂಪು ಪೊಲೀಸರನ್ನೇ ತಳ್ಳಾಡಿದ್ದು, ತಳ್ಳಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಡಿಜೆ ಡ್ಯಾನ್ಸ್ (DJ Dance) ತಡೆಯಲು ಸಬ್ ಇನ್ಸ್​ಪೆಕ್ಟರ್​ ಬಸವರಾಜು ಮತ್ತು ಚಿಂಚೋಳಿ ಪಿಎಸ್ಐ ಮುಂದಾಗುತ್ತಾರೆ. ಈ ವೇಳೆ ಯುವಕರ ಗುಂಪು ಸಬ್ ಇನ್ಸ್​ಪೆಕ್ಟರ್ ಮತ್ತು ಪಿಎಸ್ಐ ಜೊತೆ ಮಾತಿನ ಚಕಮಕಿ ನಡೆಸಿ ತಳ್ಳಾಡಿದ್ದಾರೆ. ಈ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ಪಟ್ಟಣದಲ್ಲಿ ನಡೆದಿದೆ.

ಭಜರಂಗ ದಳದ ರಘು ಮತ್ತು ಅವರ ಸಂಗಡಿಗರು ಡಿಜೆ ಡ್ಯಾನ್ಸ್ ತಡೆಯಲು ಮುಂದಾದ ಪೊಲೀಸರ ಜೊತೆ ಮಾತಿನ ಚಕಮಕಿ ನಡೆಸಿದ್ದಾರೆ. ಬ್ಯಾಂಡ್ ಬಾರಿಸದಂತೆ ಪಿಎಸ್ಐ ಕೋಲು ಕಸಿದುಕೊಳ್ಳುತ್ತಾರೆ. ಸಬ್ ಇನ್ಸ್​​ಪೆಕ್ಟರ್​ ಕೈಯಲ್ಲಿದ್ದ ಬ್ಯಾಂಡ್ ಸೆಟ್ ಕೋಲನ್ನು ಯುವಕನೊಬ್ಬ ಕಸಿದುಕೊಳ್ಳುತ್ತಾನೆ. ಸರ್ಕಾರದ ನಿಯಮದಂತೆ ಡಿಜೆ ತಡೆಯಲು ಪೊಲೀಸರು ಮುಂದಾಗುತ್ತಾರೆ. ಆದರೆ ಯುವಕರು ಇದಕ್ಕೆ ವಿರುದ್ಧವಾಗಿ ವರ್ತಿಸಿದ್ದಾರೆ. ಸದ್ಯ ಮಾತಿನ ಚಕಮಕಿ ನಡೆದಿರುವ ದೃಶ್ಯ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದ್ದು, ಇದುವರೆಗೆ ಈ ಘಟನೆ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿಲ್ಲ.

ಎರಡು ಗುಂಪುಗಳ ನಡುವೆ ಗಲಾಟೆ ಗದಗ: ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡುವ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿರುವ ಘಟನೆ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಹೀರೆ ಬಜಾರ ಪ್ರದೇಶದಲ್ಲಿ ಸಂಭವಿಸಿದೆ. ಮೊದಲ ದಿನ ಗಣೇಶ ವಿಸರ್ಜನೆ ಮಾಡುವ ವೇಳೆ ಗಲಾಟೆ ನಡೆದಿದೆ. ಜನ ಗುಂಪು ಗುಂಪಾಗಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದರು. ಮಾತಿಗೆ ಮಾತು ಬೆಳೆದು ಎರಡು ಗುಂಪು ಪರಸ್ಪರ ಗಲಾಟೆ ನಡೆದಿದೆ. ಗಲಾಟೆಯಲ್ಲಿ ಓರ್ವ ಯುವಕನಿಗೆ ತಲೆಗೆ ಪಟ್ಟು ಬಿದ್ದಿದ್ದು, ಗಜೇಂದ್ರಗಡ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಜೇಂದ್ರಗಡ ಪೊಲೀಸರ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂಬ ಆರೋಪ ಕೇಳಿಬಂದಿದೆ.

Ganesh Chaturthi

ಗಣೇಶ ವಿಸರ್ಜನೆ ಮಾಡುವ ವೇಳೆ ಗಲಾಟೆ

ಇದನ್ನೂ ಓದಿ

ಗಂಡನಿಗೆ 2 ಡೋಸ್​ ಲಸಿಕೆ ಆಗಿದೆ, ಇನ್ನೂ ಮನೆಯಲ್ಲಿದ್ದರೆ ನನಗೆ ಕಷ್ಟ; ವರ್ಕ್​ ಫ್ರಂ ಹೋಮ್​ ನಿಲ್ಲಿಸಿ ಎಂದು ಮನವಿ ಮಾಡಿದ ಹೆಂಡತಿ

ತುಮಕೂರು: ಮಾಜಿ ಡಿಸಿಎಂ ಪರಮೇಶ್ವರ್​ಗೆ ಕುರಿಗಳನ್ನು ಕೊಡುಗೆಯಾಗಿ ನೀಡಿದ ಕಾಂಗ್ರೆಸ್​​ ಕಾರ್ಯಕರ್ತ

(A group of youths have pushed the police over Ganesha discharge in hassan)

‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ