ಹಾಸನ: ಕುಡಿತದ ಬಾಜಿ ಕಟ್ಟಿ ಪ್ರಾಣ ಕಳೆದುಕೊಂಡ ವ್ಯಕ್ತಿ; ಇಲ್ಲಿದೆ ವಿವರ

ಮೂವತ್ತು ನಿಮಿಷದಲ್ಲಿ 90 ಎಂಲ್‌ನ ಹತ್ತು ಪ್ಯಾಕೇಟ್ ಮದ್ಯ ಕುಡಿಯುವ ಚಾಲೆಂಜ್ ಕಟ್ಟಿದ್ದ ಇಬ್ಬರಿಗೂ ಕೃಷ್ಣೇಗೌಡ ಎಂಬಾತ ಮದ್ಯದ ಪ್ಯಾಕೆಟ್‌ಗಳನ್ನು ನೀಡಿದ್ದ. ಚಾಲೆಂಜ್‌ ಗೆಲ್ಲಲು ಮದ್ಯ ಕುಡಿದು, ರಕ್ತ ವಾಂತಿ ಮಾಡಿಕೊಂಡು ತಿಮ್ಮೇಗೌಡ ಬಸ್ ನಿಲ್ದಾಣದಲ್ಲೇ ಬಿದ್ದಿದ್ದ.

ಹಾಸನ: ಕುಡಿತದ ಬಾಜಿ ಕಟ್ಟಿ ಪ್ರಾಣ ಕಳೆದುಕೊಂಡ ವ್ಯಕ್ತಿ; ಇಲ್ಲಿದೆ ವಿವರ
ಮೃತ ವ್ಯಕ್ತಿ
Follow us
ಮಂಜುನಾಥ ಕೆಬಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 19, 2023 | 8:44 PM

ಹಾಸನ, ಸೆ.19: ಕುಡಿತದ ಬಾಜಿ ಕಟ್ಟಿ, ವ್ಯಕ್ತಿಯೋರ್ವ ಪ್ರಾಣ ಕಳೆದುಕೊಂಡ ಘಟನೆ ಹಾಸನ (Hassan)ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ಸಿಗರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೌದು, ಗ್ರಾಮದ ಬಸ್ ನಿಲ್ದಾಣದಲ್ಲಿ ದೇವರಾಜ್ ಮತ್ತು ತಿಮ್ಮೇಗೌಡ ಇಬ್ಬರು ಅರ್ಧ ಗಂಟೆಯಲ್ಲಿ 90 ಎಂಲ್‌ನ 10 ಪ್ಯಾಕೇಜ್ ಮದ್ಯ ಕುಡಿಯುವ ಚಾಲೆಂಜ್ ಕಟ್ಟಿದ್ದರು. ಅದರಂತೆ ನಡೆದ ಚಾಲೆಂಜ್‌ನಲ್ಲಿ ಹೆಚ್ಚು ಮದ್ಯ ಸೇವಿಸಿದ್ದ ತಿಮ್ಮೇಗೌಡ(60) ಇದೀಗ ಸಾವನ್ನಪ್ಪಿದ್ದಾನೆ.

ಮೂವತ್ತು ನಿಮಿಷದಲ್ಲಿ 90 ಎಂಲ್‌ನ ಹತ್ತು ಪ್ಯಾಕೇಟ್ ಮದ್ಯ ಕುಡಿಯುವ ಚಾಲೆಂಜ್

ಇನ್ನು ಮೂವತ್ತು ನಿಮಿಷದಲ್ಲಿ 90 ಎಂಲ್‌ನ ಹತ್ತು ಪ್ಯಾಕೇಟ್ ಮದ್ಯ ಕುಡಿಯುವ ಚಾಲೆಂಜ್ ಕಟ್ಟಿದ್ದ ಇಬ್ಬರಿಗೂ ಕೃಷ್ಣೇಗೌಡ ಎಂಬಾತ ಮದ್ಯದ ಪ್ಯಾಕೆಟ್‌ಗಳನ್ನು ನೀಡಿದ್ದ. ಚಾಲೆಂಜ್‌ ಗೆಲ್ಲಲು ಮದ್ಯ ಕುಡಿದು, ರಕ್ತ ವಾಂತಿ ಮಾಡಿಕೊಂಡು ತಿಮ್ಮೇಗೌಡ ಬಸ್ ನಿಲ್ದಾಣದಲ್ಲೇ ಬಿದ್ದಿದ್ದ. ತಿಮ್ಮೇಗೌಡ ಅಸ್ವಸ್ಥ ಆಗುತ್ತಲೆ ದೇವರಾಜು ಮತ್ತು ಕೃಷ್ಣೇಗೌಡ ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ.

ಇದನ್ನೂ ಓದಿ:ಪ್ರೀತಿಸಿ ಮದ್ವೆಯಾದ ಏಳೇ ತಿಂಗಳಲ್ಲಿ ಯುವತಿ ಸಾವು, ರಾತ್ರೋರಾತ್ರಿ ತವರು ಮನೆಯಿಂದ ಕರೆದುಕೊಂಡು ಬಂದು ಪತಿ ಮಾಡಿದ್ದೇನು?

ಕುಡಿದು ಸುಸ್ತಾಗಿ ಬಿದ್ದಿದ್ದ ತಿಮ್ಮೇಗೌಡನನ್ನು ಮನೆಗೆ ಕರೆತಂದು ಬಿಟ್ಟಿದ್ದ ಗ್ರಾಮಸ್ಥರು

ಇನ್ನು ಹಬ್ಬಕ್ಕಾಗಿ ತಿಮ್ಮೇಗೌಡನ ಮನೆಯವರು ಸಂಬಂಧಿಕರ ಮನೆಗೆ ತೆರಳಿದ್ದರು. ಈ ಮಧ್ಯೆ ಕುಡಿದು ಸುಸ್ತಾಗಿ ಬಿದ್ದಿದ್ದ ತಿಮ್ಮೇಗೌಡನನ್ನು ಗ್ರಾಮಸ್ಥರು ಮನೆಗೆ ಕರೆತಂದು ಬಿಟ್ಟಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ತಿಮ್ಮೇಗೌಡ ಸಾವನ್ನಪ್ಪಿದ್ದಾನೆ. ಘಟನೆ ಬಗ್ಗೆ ತಿಮ್ಮೇಗೌಡರ ಪುತ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೇವರಾಜು ಹಾಗೂ ಕೃಷ್ಣೇಗೌಡ ವಿರುದ್ಧ ಹೊಳೆನರಸೀಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!